ಮನೆ ಸುದ್ದಿ ಜಾಲ ಮುಸ್ಲಿಂ ಮಹಿಳೆಯರಿಗೆ ಪ್ರತ್ಯೇಕ ಕಾಲೇಜು ಪ್ರಾರಂಭಿಸುವ ಪ್ರಸ್ತಾಪ ಇಲ್ಲ: ಸಚಿವೆ ಶಶಿಕಲಾ ಜೊಲ್ಲೆ

ಮುಸ್ಲಿಂ ಮಹಿಳೆಯರಿಗೆ ಪ್ರತ್ಯೇಕ ಕಾಲೇಜು ಪ್ರಾರಂಭಿಸುವ ಪ್ರಸ್ತಾಪ ಇಲ್ಲ: ಸಚಿವೆ ಶಶಿಕಲಾ ಜೊಲ್ಲೆ

0

ಬೆಂಗಳೂರು(Bengaluru): ಮುಸ್ಲಿಂ ಮಹಿಳೆಯರಿಗೆ ಪ್ರತ್ಯೇಕ ಕಾಲೇಜು ಪ್ರಾರಂಭಿಸುವ ಯಾವುದೇ ಪ್ರಸ್ತಾಪ ಅಥವಾ ಕಡತ ಸರಕಾರದ ಮುಂದೆ ಇಲ್ಲ ಎಂದು ಹಜ್ ಮತ್ತು ವಕ್ಫ್ ಸಚಿವೆ ಶಶಿಕಲಾ ಜೊಲ್ಲೆ ಸ್ಪಷ್ಟನೆ ನೀಡಿದ್ದಾರೆ.

ಈಗಾಗಲೇ ಸರಕಾರ ಕಾಲೇಜು ಪ್ರಾರಂಭಕ್ಕೆ ಅನುಮತಿ ನೀಡಿದೆ ಎನ್ನುವ ಸುದ್ದಿಗಳು ಸತ್ಯಕ್ಕೆ ದೂರವಾಗಿವೆ. ಕಾಲೇಜುಗಳ ಪ್ರಾರಂಭದ ಬಗ್ಗೆ ವಕ್ಸ್ ಬೋರ್ಡ್ ಅಧ್ಯಕ್ಷರ ಹೇಳಿಕೆ ಅವರ ವೈಯಕ್ತಿಕ ಹೇಳಿಕೆಯಾಗಿದೆ.

ಈ ಕುರಿತು ಎದ್ದಿರುವ ಊಹಾಪೋಹಗಳ ಬಗ್ಗೆ ಸ್ಪಷ್ಟನೆ ನೀಡುವಂತೆ ವಕ್ಸ್ ಬೋರ್ಡ್ ಅಧ್ಯಕ್ಷರಿಗೆ ಸೂಚಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಂದಿನ ಲೇಖನಹುಬ್ಬಳ್ಳಿ: ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ- ನಾಲ್ವರ ಸ್ಥಿತಿ ಗಂಭೀರ
ಮುಂದಿನ ಲೇಖನಕನ್ನಡ ಬಾವುಟ ಹಾರಿಸಿದ ವಿದ್ಯಾರ್ಥಿ ಮೇಲೆ ಹಲ್ಲೆ: ಹೆಚ್.ಡಿ ಕುಮಾರಸ್ವಾಮಿ ಖಂಡನೆ