ಮನೆ ರಾಜ್ಯ ನಮ್ಮ ಕುಟುಂಬದ ಸದಸ್ಯರು ಚುನಾವಣಾ ರಾಜಕೀಯಕ್ಕೆ ಬರುವ ಪ್ರಶ್ನೆಯೇ ಇಲ್ಲ: ಡಿ.ಕೆ. ಶಿವಕುಮಾರ್

ನಮ್ಮ ಕುಟುಂಬದ ಸದಸ್ಯರು ಚುನಾವಣಾ ರಾಜಕೀಯಕ್ಕೆ ಬರುವ ಪ್ರಶ್ನೆಯೇ ಇಲ್ಲ: ಡಿ.ಕೆ. ಶಿವಕುಮಾರ್

0

ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ  ಉಪಚುನಾವಣೆಯಲ್ಲಿ ಸ್ಪರ್ಧಿಸುವಂತೆ ಪಕ್ಷ ಸೂಚಿಸಿದರೆ ಅದಕ್ಕೆ ಸಿದ್ಧ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದರು. ಆದರೆ ಅವರ ಕುಟುಂಬದಿಂದ ಅಚ್ಚರಿ ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತಾರೆ ಎಂಬ ಮಾತು ಕೇಳಿ ಬರುತ್ತಿದೆ. ಇದೆಲ್ಲದಕ್ಕೂ ಅವರು ತೆರೆ ಎಳೆದಿದ್ದಾರೆ.

Join Our Whatsapp Group

ಈ ಕುರಿತಾಗಿ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಡಿ.ಕೆ. ಶಿವಕುಮಾರ್, ‘ನಮ್ಮ ಕುಟುಂಬದ ಯಾವುದೇ ಸದಸ್ಯರು ಚುನಾವಣಾ ರಾಜಕೀಯಕ್ಕೆ ಬರುವ ಪ್ರಶ್ನೆಯೇ ಇಲ್ಲ. ಈ ಬಗ್ಗೆ ನಾನು ಬಹಳ ಹಿಂದೆಯೇ ಸ್ಪಷ್ಟಪಡಿಸಿದ್ದೇನೆ. ಆದರೂ ಈ ಬಗ್ಗೆ ಆಗಾಗ ಸೃಷ್ಟಿಯಾಗುವ ವದಂತಿಗಳಿಗೆ ಯಾರೂ ಕಿವಿಗೊಡಬಾರದು’ ಎಂದು ವಿನಂತಿಸುತ್ತಿದ್ದೇನೆ ಎಂದು ತಿಳಿಸಿದ್ದಾರೆ.

ಎಚ್‌.ಡಿ. ಕುಮಾರಸ್ವಾಮಿ ಅವರು ಮಂಡ್ಯ ಸಂಸದರಾಗಿ ಆಯ್ಕೆಯಾದ ಬೆನ್ನಲ್ಲೇ ಅವರ ರಾಜೀನಾಮೆಯಿಂದ ತೆರವಾಗಿರುವ  ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ  ನಡೆಯಲಿದೆ.

ಹಿಂದಿನ ಲೇಖನಭಾರ್ತಿ ಏರ್‌ ಟೆಲ್ ರಿಚಾರ್ಜ್‌ ದರ ಹೆಚ್ಚಳ: ಪರಿಷ್ಕೃತ ದರಗಳು ಜುಲೈ 3 ರಿಂದ ಜಾರಿ
ಮುಂದಿನ ಲೇಖನಬಸ್-ಬೈಕ್ ಢಿಕ್ಕಿ; ನಡ ಗ್ರಾಮದ ಗ್ರಾಮ ಕರಣಿಕರ ಕಚೇರಿ ಸಹಾಯಕ ಸಾವು