ಬೆಂಗಳೂರು : ವಿದ್ಯುತ್ ಗ್ರಾಹಕರಿಗೆ ಕರ್ನಾಟಕ ಹೈಕೋರ್ಟ್ ಗುಡ್ ನ್ಯೂಸ್ ನೀಡಿದ್ದು, ಹೈಕೋರ್ಟ್ ನ ಆದೇಶ ಗ್ರಾಹಕರ ಮೇಲಿನ ಹೊರೆಯನ್ನು ಕಡಿಮೆ ಮಾಡಿದೆ.
ವಿದ್ಯುತ್ ಕನಿಷ್ಠ ಶುಲ್ಕದ ಮೇಲಿನ ತೆರಿಗೆಯನ್ನು ಅಸಂವಿಧಾನಿಕ ಎಂದು ಹೈಕೋರ್ಟ್ ಆದೇಶ ನೀಡಿದೆ.ಬಳಸದ ವಿದ್ಯುತ್ಗೆ ಗ್ರಾಹಕರು ತೆರಿಗೆ ಕಟ್ಟಬೇಕಿಲ್ಲ ಎಂದು ಹೈಕೋರ್ಟ್ ಆದೇಶ ನೀಡಿದೆ. ಜೊತೆಗೆ ಕರ್ನಾಟಕ ವಿದ್ಯುತ್ ಕಾಯ್ದೆ ಸೆಕ್ಷನ್ 3 ತಿದ್ದುಪಡಿಯನ್ನು ನ್ಯಾ.ಅನಂತ್ ರಾಮನಾಥ್ ಹೆಗ್ಡೆ ಅವರಿದ್ದ ಹೈಕೋರ್ಟ್ ಪೀಠ ರದ್ದುಪಡಿಸಿದೆ.
2003ರ ಕಾನೂನು ತಿದ್ದುಪಡಿಯ ಪ್ರಕಾರ, ವಿದ್ಯುತ್ ಕನಿಷ್ಠ ಶುಲ್ಕಕ್ಕೆ ತೆರಿಗೆ ವಿಧಿಸಲಾಗಿತ್ತು. ಕೂಡಲೇ ಇದನ್ನು ರದ್ದು ಮಾಡುವಂತೆ ಆಗ್ರಹಿಸಿ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ ಹಾಗೂ ಮೆಸಸ್ ಸೋನಾ ಸಿಂಥೆಟೆಕ್ ಕಂಪನಿ ಅರ್ಜಿ ಸಲ್ಲಿಸಿದ್ದವು. ವಿಚಾರಣೆ ಕೈಗೆಟ್ಟಿಕೊಂಡ ನ್ಯಾಯಾಲಯ, ವಿದ್ಯುತ್ ಶುಲ್ಕದ ಮೇಲಿನ ತೆರಿಗೆ ವಿಧಿಸಿದ್ದ ತಿದ್ದುಪಡಿಯನ್ನು ಅಸಂವಿಧಾನಿಕ ಎಂದು ಘೋಷಿಸಿದೆ.














