ಮನೆ ಕಾನೂನು ಕೇಂದ್ರದ ಆಸ್ತಿಗೆ ರಾಜ್ಯದಲ್ಲಿ ತೆರಿಗೆ ಪಾವತಿ ಬೇಡ

ಕೇಂದ್ರದ ಆಸ್ತಿಗೆ ರಾಜ್ಯದಲ್ಲಿ ತೆರಿಗೆ ಪಾವತಿ ಬೇಡ

0

ರಾಜ್ಯದಲ್ಲಿರುವ ಕೇಂದ್ರ ಸರ್ಕಾರ ಒಡೆತನದ ಆಸ್ತಿಗೆ ಆಸ್ತಿ ತೆರಿಗೆ ಪಾವತಿಸುವ ಅಗತ್ಯವಿಲ್ಲ ಎಂದು ಹೈಕೋರ್ಟ್ ಮಹತ್ವದ ಆದೇಶ ನೀಡಿದೆ.

ಅಲ್ಲದೆ, ಸಂವಿಧಾನದ ಪರೀಚ್ಛೇದ 285  ಪ್ರಕಾರ ಕೇಂದ್ರ ಸರ್ಕಾರದ ಆಸ್ತಿಗೆ ರಾಜ್ಯಕ್ಕೆ ತೆರಿಗೆ ಪಾವತಿಸುವುದರಿಂದ ವಿನಾಯಿತಿ ಇದೆ ಎಂದು ಹೇಳಿದೆ.

ಮಂಗಳೂರು ನಗರದಲ್ಲಿ ಕೇಂದ್ರ ಗಣಿ ಮತ್ತು ಕರಾವಳಿ ವಲಯಕ್ಕೆ ಸೇರಿದ ಸಿಬ್ಬಂದಿ ವಸತಿ ಗೃಹಕ್ಕೆ ಆಸ್ತಿ ತೆರಿಗೆ ಪಾವತಿಸಲು ಸೂಚಿಸಿ ಸ್ಥಳೀಯ ಪಾಲಿಕೆ ನೀಡಿದ್ದ ಎರಡು ನೋಟಿಸ್ ಗಳನ್ನು ರದ್ದು ಪಡಿಸಿದೆ.

ಕೇಂದ್ರ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಪಾಲಿಕೆಯ ಸಹಾಯಕ ಕಂದಾಯ ಅಧಿಕಾರಿ 2010ರ ಜೂನ್ 4 ಮತ್ತು 2011ರ ಜುಲೈ 16ರಂದು ಜಾರಿ ಮಾಡಿದ್ದ ನೋಟಿಸ್ ರದ್ದು ಕೋರಿ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾ ಮೂರ್ತಿ ಎಂ.ಜಿ.ಎಸ್ ಕಮಲ್ ಅವರಿಂದ ಏಕಸದಸ್ಯ ಪೀಠ, ಈ ಆದೇಶ ಮಾಡಿದೆ.

ಪ್ರಕರಣದಲ್ಲಿ ಮಂಗಳೂರು ಮಹಾನಗರ ಪಾಲಿಕೆಯು ವಸತಿಗೃಹ ನಿರ್ಮಾಣಕ್ಕೆ  1991ರ ಏಪ್ರಿಲ್ 26 ರಂದು ಕೇಂದ್ರ ಸರ್ಕಾರಕ್ಕೆ ನಕ್ಷೆ ಮಂಜೂರಾತಿ ನೀಡಿತ್ತು. ಕಟ್ಟಡ ನಿರ್ಮಾಣ ಕಾಮಗಾರಿ ಪೂರ್ಣಗೊಂಡಿದೆ. 1994ರ ಜೂನ್ 10 ರಂದು ಪಾಲಿಕೆ  ಸ್ವಾಧೀನಾನುಭವ ಪತ್ರ ನೀಡಿದೆ.

ಸಂವಿಧಾನದ ಪರಿಚ್ಛೇದ 285 ರ ಪ್ರಕಾರ ಕೇಂದ್ರ ಸರ್ಕಾರದ ಆಸ್ತಿಗೆ ರಾಜ್ಯ ಸರ್ಕಾರವು ತೆರಿಗೆ ಪಾವತಿಸುವುದರಿಂದ ವಿನಾಯಿತಿ ಇದೆ. ಅದರಂತೆ ಕೇಂದ್ರ ಸರ್ಕಾರದ ಆಸ್ತಿಗೆ ರಾಜ್ಯ ಸರ್ಕಾರ ಅಥವಾ ಅದರ ಸ್ಥಳೀಯ ಸಂಸ್ಥೆಗಳು ತೆರಿಗೆ ವಿಧಿಸುವಂತಿಲ್ಲ ಎಂದು ಆದೇಶದಲ್ಲಿ ತಿಳಿಸಿದೆ.

ಹಿಂದಿನ ಲೇಖನಸರ್ಕಾರದ ಅಧೀನ ಸಂಸ್ಥೆಯಲ್ಲಿ ಕುಟುಂಬ ಸದಸ್ಯರಿದ್ದರೆ ಅನುಕಂಪದ ಹುದ್ದೆ ಇಲ್ಲ
ಮುಂದಿನ ಲೇಖನಕೋಪ ಹತಾಶೆ ಹತ್ತಿಕ್ಕುವ ಬಗೆ