ಮನೆ ರಾಜಕೀಯ ನಾಲ್ಕಾರು ಹಾಲಿ ಶಾಸಕರಿಗಿಲ್ಲ ಟಿಕೆಟ್: ಬಿ.ಎಸ್.ಯಡಿಯೂರಪ್ಪ

ನಾಲ್ಕಾರು ಹಾಲಿ ಶಾಸಕರಿಗಿಲ್ಲ ಟಿಕೆಟ್: ಬಿ.ಎಸ್.ಯಡಿಯೂರಪ್ಪ

0

ಕಲಬುರಗಿ: ಪ್ರಸಕ್ತ ವಿಧಾನಸಭೆ ಚುನಾವಣೆಯಲ್ಲಿ ನಾಲ್ಕಾರು ಜನ ಹಾಲಿ ಶಾಸಕರಿಗೆ ಟಿಕೆಟ್ ಸಿಗುವುದಿಲ್ಲ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದರು.

ನಗರದ ಐವಾನ್ ಇ ಶಾಹಿ ಅತಿಥಿ ಗೃಹದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಕ್ಷದ ಮೊದಲ ಪಟ್ಟಿಯನ್ನು ಶೀಘ್ರ ಬಿಡುಗಡೆ ‌ಮಾಡಲಾಗುವುದು. ನಾಲ್ಕಾರು ಶಾಸಕರನ್ನು ಹೊರತುಪಡಿಸಿದರೆ ಉಳಿದ ಎಲ್ಲ ಶಾಸಕರಿಗೆ ಟಿಕೆಟ್ ನೀಡಲಾಗುವುದು ಎಂದರು.

ಸಚಿವರಾದ ವಿ. ಸೋಮಣ್ಣ, ನಾರಾಯಯಣಗೌಡ ಅವರು ಪಕ್ಷ ಬಿಡುವ ಬಗ್ಗೆ ಮಾಹಿತಿ ಇಲ್ಲ. ಪಕ್ಷದಿಂದ ಹೋಗುವವರು ಹೋಗಬಹುದು. ಬರುವವರು ಬರಬಹುದು ಎಂದರು.

ಮಾರ್ಚ್ 25ರಂದು ಸಮಾರೋಪಕ್ಕೆ ಪ್ರಧಾನಿ ಮೋದಿಪ್ರಸ್ತುತ ನಡೆಯುತ್ತಿರುವ ವಿಜಯ ಸಂಕಲ್ಪ ಯಾತ್ರೆಯ ಸಮಾರೋಪ ಮಾರ್ಚ್ 25ರಂದು ದಾವಣಗೆರೆಯಲ್ಲಿ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸಲಿದ್ದಾರೆ. ಐದಾರು ಲಕ್ಷ ಜನರು ಸೇರಲಿದ್ದಾರೆ ಎಂದರು.

140 ಸೀಟು ಗೆಲ್ಲುವ ವಿಶ್ವಾಸ

ರಾಜ್ಯದಾದ್ಯಂತ ವಿಜಯ ಸಂಕಲ್ಪ ಯಾತ್ರೆಗೆ ಅಭೂತಪೂರ್ವ ಸ್ಪಂದನೆ ವ್ಯಕ್ತವಾಗುತ್ತಿದ್ದು, 140 ಸೀಟುಗಳನ್ನು ಪಡೆದು ಸರ್ಕಾರ ರಚಿಸಲಿದ್ದೇವೆ. ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಚುನಾವಣೆ ‌ನಡೆಯಲಿದೆ. ಸ್ಪಷ್ಟ ಬಹುಮತ ಬಂದ ಬಳಿಕ ಶಾಸಕರು ಮುಖ್ಯಮಂತ್ರಿ ಅಭ್ಯರ್ಥಿಯನ್ನು ಆಯ್ಕೆ ಮಾಡಲಿದ್ದಾರೆ ಎಂದರು.

ಹಿಂದಿನ ಲೇಖನಶಾಸಕ ವಿರೂಪಾಕ್ಷಪ್ಪ, ಪುತ್ರ ಪ್ರಶಾಂತ್ ವಿರುದ್ಧ ಮಾನಹಾನಿ ಸುದ್ದಿ ಪ್ರಕಟಿಸದಂತೆ ಮಾಧ್ಯಮಗಳಿಗೆ ಪ್ರತಿಬಂಧಕಾದೇಶ
ಮುಂದಿನ ಲೇಖನಮಾಡಾಳ ವಿರೂಪಾಕ್ಷಪ್ಪ ಲಂಚ ಪ್ರಕರಣ: ಇಬ್ಬರು ತನಿಖಾಧಿಕಾರಿಗಳ ಬದಲಾವಣೆ