ಮನೆ ಕಾನೂನು ಬೇಬಿ ಬೆಟ್ಟದಲ್ಲಿ ಟ್ರಯಲ್ ಬ್ಲಾಸ್ಟ್ ನಡೆಸುವುದಿಲ್ಲ: ಹೈಕೋರ್ಟ್‌ ಗೆ ಮಾಹಿತಿ

ಬೇಬಿ ಬೆಟ್ಟದಲ್ಲಿ ಟ್ರಯಲ್ ಬ್ಲಾಸ್ಟ್ ನಡೆಸುವುದಿಲ್ಲ: ಹೈಕೋರ್ಟ್‌ ಗೆ ಮಾಹಿತಿ

0

ಪಾಂಡವಪುರ: ತಾಲ್ಲೂಕಿನ ಬೇಬಿಬೆಟ್ಟದ ಗಣಿಗಾರಿಕೆ ಪ್ರದೇಶದಲ್ಲಿ ಟ್ರಯಲ್ ಬ್ಲಾಸ್ಟ್ ಮಾಡುವುದಿಲ್ಲ ಎಂದು ಸರ್ಕಾರಿ ವಕೀಲರು ಹೈಕೋರ್ಟ್‌ ಗೆ ಮಾಹಿತಿ ನೀಡಿದರು.

Join Our Whatsapp Group


ಬುಧವಾರ ಹೈಕೋರ್ಟ್‌ನ ಮುಖ್ಯನ್ಯಾಯಮೂರ್ತಿಗಳ ವಿಭಾಗೀಯ ಪೀಠದಲ್ಲಿ ಕೆಆರ್‌ಎಸ್ ಜಲಾಶಯದ ವ್ಯಾಪ್ತಿಯಲ್ಲಿ ಟ್ರಯಲ್ ಬ್ಲಾಸ್ಟ್ ಸಂಬಂಧ ನಡೆದ ವಿಚಾರಣೆಯ ವೇಳೆ ಸರ್ಕಾರಿ ವಕೀಲರು ಈ ಸ್ಪಷ್ಟನೆ ನೀಡಿದರು.
ಅಣೆಕಟ್ಟೆ ಸುರಕ್ಷಾ ಸಮಿತಿ ಸಭೆಯಲ್ಲಿ ಕೆಆರ್‌ಎಸ್ ಅಣೆಕಟ್ಟೆಯ 20 ಕಿ.ಮೀ.ವ್ಯಾಪ್ತಿಯಲ್ಲಿ ಗಣಿಗಾರಿಕೆಯ ಟ್ರಯಲ್ ಬ್ಲಾಸ್ಟ್‌ ನಡೆಸಬೇಕೇ? ಬೇಡವೇ? ಎಂಬ ಬಗ್ಗೆ ತೀರ್ಮಾನ ತೆಗೆದುಕೊಂಡು ನ್ಯಾಯಾಲಯಕ್ಕೆ ಮಾಹಿತಿ ನೀಡಲಾಗುವುದು’ ಎಂದು ಸರ್ಕಾರಿ ವಕೀಲರು ನ್ಯಾಯಾಲಯಕ್ಕೆ ತಿಳಿಸಿದರು.
ಈ ವಿಚಾರಕ್ಕೆ ಸಂಬಂಧಪಟ್ಟಂತೆ 4 ವಾರಗಳ ಕಾಲಾವಕಾಶ ನೀಡಿ ವಿಚಾರಣೆಯನ್ನು ನ್ಯಾಯಾಲಯವು ಮುಂದೂಡಿತು.