Saval TV on YouTube
ಮೈಸೂರು(Mysuru): ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದ ಅಧ್ಯಕ್ಷರನ್ನಾಗಿ ಬಿಜೆಪಿ ಮುಖಂಡ ಯಶಸ್ವಿನಿ ಸೋಮಶೇಖರ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ನಾಮನಿರ್ದೇಶನ ಮಾಡಿ ಸರ್ಕಾರ ಮಂಗಳವಾರ ಆದೇಶ ಹೊರಡಿಸಿದೆ.
ನಿಕಟಪೂರ್ವ ಅಧ್ಯಕ್ಷ ಎಚ್.ವಿ.ರಾಜೀವ್ ಅವರನ್ನೇ ಮರು ನೇಮಕ ಮಾಡಬೇಕು ಎಂಬ ಒತ್ತಾಯವನ್ನೂ ಕೆಲವರು ಮಾಡಿದ್ದಾರೆ. ಮುಖಂಡ ಎಸ್.ಡಿ.ಮಹೇಂದ್ರ ಕೂಡ ಆಕಾಂಕ್ಷಿಯಾಗಿದ್ದರು. ಅಂತಿಮವಾಗಿ ಸೋಮಶೇಖರ್’ಗೆ ಸರ್ಕಾರ ಗಾದಿ ನೀಡಿದೆ.
ಈ ಕುರಿತು ಪ್ರತಿಕ್ರಿಯಿಸಿದ ಸೋಮಶೇಖರ್, ಬಿಜೆಪಿ ನಗರ ಘಟಕದ ಪ್ರಧಾನ ಕಾರ್ಯದರ್ಶಿ ಸೇರಿದಂತೆ ವಿವಿಧ ಹುದ್ದೆಗಳಲ್ಲಿ ಕೆಲಸ ಮಾಡಿದ್ದೇನೆ. ಪಕ್ಷವು ಬಹಳ ವರ್ಷಗಳ ನಂತರ ನನ್ನನ್ನು ಗುರುತಿಸಿ ಜವಾಬ್ದಾರಿ ನೀಡಿದೆ. ಇದನ್ನು ಸಮರ್ಥವಾಗಿ ನಿಭಾಯಿಸುತ್ತೇನೆ. ಡಿ.21ರಂದು ಬೆಳಿಗ್ಗೆ 11ಕ್ಕೆ ಅಧಿಕಾರ ಸ್ವೀಕರಿಸಲಿದ್ದೇನೆ ಎಂದು ಪ್ರತಿಕ್ರಿಯಿಸಿದರು.