ಮನೆ ರಾಜ್ಯ ಎಲ್ಲಾ ಹಾವುಗಳು ವಿಷಕಾರಿಯಲ್ಲ. ಭಯಬೇಡ: ಉರಗ ರಕ್ಷಕ ಸ್ನೇಕ್ ಶ್ಯಾಮ್

ಎಲ್ಲಾ ಹಾವುಗಳು ವಿಷಕಾರಿಯಲ್ಲ. ಭಯಬೇಡ: ಉರಗ ರಕ್ಷಕ ಸ್ನೇಕ್ ಶ್ಯಾಮ್

0

ಮೈಸೂರು: ಹಾವುಗಳ ಬಗ್ಗೆ ಅನಗತ್ಯ ಭಯದಿಂದ ಅವುಗಳನ್ನು ಸಾಯಿಸಲಾಗುತ್ತಿದೆ. ಎಲ್ಲಾ ಹಾವುಗಳು ವಿಷಕಾರಿಯಲ್ಲ. ಹಾವುಗಳ ಬಗ್ಗೆ ಭಯ ಬೇಡ ಎಂದು ಉರಗ ರಕ್ಷಕ ಸ್ನೇಕ್ ಶ್ಯಾಮ್ ಹೇಳಿದರು.

Join Our Whatsapp Group

ನಗರದ ಜೆ ಎಲ್ ಬಿ ರಸ್ತೆಯಲ್ಲಿರುವ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಮುಂಭಾಗ ಕೆಎಂಪಿ ಕೆ ಚಾರಿಟೇಬಲ್ ಟ್ರಸ್ಟ್ ಹಾಗೂ ಪರಿಸರ ಸ್ನೇಹಿ ತಂಡದ ಆಶ್ರಯದಲ್ಲಿ ಹಾವುಗಳ ದಿನದ ಅಂಗವಾಗಿ ಆಯೋಜಿಸಿದ ಕಾರ್ಯಕ್ರಮದಲ್ಲಿ 86000 ಸಾವಿರಕ್ಕೂ ಹೆಚ್ಚು ಹಾವುಗಳನ್ನು ಸಂರಕ್ಷಿಸಿದ ಉರಗ ರಕ್ಷಕ ಸ್ನೇಕ್ ಶಾಮ್ ಅವರನ್ನು ಅಭಿನಂದಿಸಲಾಯಿತು.

ಈ ವೇಳೆ ಮಾತನಾಡಿದ ಸ್ನೇಕ್ ಶಾಮ್, ಅರಣ್ಯ ಇಲಾಖೆ ಪರಿಸರ ಹಾಗೂ ವನ್ಯಜೀವಿಗಳ ಸಂರಕ್ಷಣೆಗೆ ಮುಂದಾಗಿರುವುದಕ್ಕೆ ಸಾರ್ವಜನಿಕರು ಸಹಕರಿಸಬೇಕು. ನಾಗರಹಾವು, ಕಾಳಿಂಗ ಸರ್ಪ ವಿಷಕಾರಿಯಾಗಿದ್ದು, ಹಪ್ಪಟೆ, ಕೇರೆ ಹಾವು, ಹಸಿರು ಹಾವು ಮುಂತಾದವು ವಿಷಕಾರಿಯಲ್ಲ. ಕೆಲವು ಹಾವುಗಳು ಹೆಚ್ಚು ವಿಷಕಾರಿಯಲ್ಲದಿದ್ದರೂ, ಹಪ್ಪಟೆ ಹಾವು ಕಚ್ಚಿದರೆ ವೈದ್ಯರ ಬಳಿ ತೆರಳಿ ಚಿಕಿತ್ಸೆ ಪಡೆಯಬೇಕು. ಹಾವುಗಳ ಬಗ್ಗೆ ಅನಗತ್ಯ ಭಯ ಬೇಡ  ಎಂದು ಸಲಹೆ ನೀಡಿದರು.

ಇದೇ ಸಂದರ್ಭದಲ್ಲಿ ಕೆಎಂಪಿ ಕೆ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ವಿಕ್ರಮ ಅಯ್ಯಂಗಾರ್, ಜಿ ರಾಘವೇಂದ್ರ, ಎಸ್ ಎನ್ ರಾಜೇಶ್, ರಾಕೇಶ್, ಪ್ರಸನ್ನ (ಅಪ್ಪಿ) ಬೈರತಿ ಲಿಂಗರಾಜು, ಹರೀಶ್ ನಾಯ್ಡು, ರವಿಚಂದ್ರ, ದುರ್ಗಾ ಪ್ರಸಾದ್, ಗಿರೀಶ್  ರಾಮ್ ಮೂರ್ತಿ, ಹಾಗೂ ಇನ್ನಿತರರು ಹಾಜರಿದ್ದರು.