ಮನೆ ರಾಜ್ಯ ಬಿಜೆಪಿ-ಜೆಡಿಎಸ್ ಮೈತ್ರಿ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ: ಸಿಎಂ ಸಿದ್ದರಾಮಯ್ಯ

ಬಿಜೆಪಿ-ಜೆಡಿಎಸ್ ಮೈತ್ರಿ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ: ಸಿಎಂ ಸಿದ್ದರಾಮಯ್ಯ

0

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಯಾರು ಮೈತ್ರಿ ಮಾಡಿಕೊಳ್ಳುತ್ತಾರೆ, ಯಾರು ಪ್ರತ್ಯೇಕವಾಗಿ ಚುನಾವಣೆ ಸ್ಪರ್ಧಿಸುತ್ತಾರೆ ಎನ್ನುವ ಬಗ್ಗೆ ನಾವು ತಲೆಕೆಡಿಸಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಲೋಕಸಭಾ ಚುನಾವಣೆಗೆ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಳ್ಳುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು, ನಾವು ಜನರ ಹತ್ತಿರ ಮತ ಕೇಳುತ್ತೇವೆ.  ಜನ ನಮ್ಮ ಪರವಾಗಿದ್ದಾರೆ ಎಂದು ಅವರು ಹೇಳಿದರು.

ಮುಂದಿನ ಲೋಕಸಭೆ ಚುನಾವಣೆಗೆ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಳ್ಳುತ್ತಿರುವುದಾಗಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಶುಕ್ರವಾರ ಹೇಳಿಕೆ ನೀಡಿದ್ದಾರೆ.

ಹಿಂದಿನ ಲೇಖನಕಳಸೇಶ್ವರ ದೇವಸ್ಥಾನ, ಕಳಸ
ಮುಂದಿನ ಲೇಖನಯಡಿಯೂರಪ್ಪ ಅವರ ನಿರ್ಧಾರಕ್ಕೆ ನಮ್ಮ ಬೆಂಬಲವಿದೆ: ಸಂಸದ ಪ್ರತಾಪ್ ಸಿಂಹ