ಮನೆ ರಾಜ್ಯ ಮಾಹಿತಿ ನೀಡದ ಡಿಸಿ, ಎಡಿಸಿ ವಿರುದ್ಧ ಕ್ರಮಕ್ಕೆ ಸೂಚನೆ..!

ಮಾಹಿತಿ ನೀಡದ ಡಿಸಿ, ಎಡಿಸಿ ವಿರುದ್ಧ ಕ್ರಮಕ್ಕೆ ಸೂಚನೆ..!

0

ತುಮಕೂರು : ಸಕಾಲಕ್ಕೆ ಮಾಹಿತಿ ನೀಡಿದ ಸಾರ್ವಜನಿಕ ಮಾಹಿತಿ ಅಧಿಕಾರಿಯೂ ಹೆಚ್ಚುವರಿ ಜಿಲ್ಲಾಧಿಕಾರಿ ಎನ್‌.ತಿಪ್ಪೇಸ್ವಾಮಿ ಹಾಗೂ ಪ್ರಥಮ ಮೇಲ್ಮನವಿ ಪ್ರಾಧಿಕಾರದ ಅಧಿಕಾರಿಯೂ ಆದ ಜಿಲ್ಲಾಧಿಕಾರಿ ಶುಭ ಕಲ್ಯಾಣ್‌ ವಿರುದ್ಧ ಕ್ರಮ ಕೈಗೊಳ್ಳುವಂತೆ ಮಾಹಿತಿ ಆಯೋಗ ಸೂಚಿಸಿದೆ.

ಈ ಸಂಬಂಧ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಹಾಗೂ ಪ್ರಾದೇಶಿಕ ಆಯುಕ್ತರಿಗೆ ನಿರ್ದೇಶನ ನೀಡಿದೆ. ಸಕಾಲಕ್ಕೆ ಮಾಹಿತಿ ಕೊಡಿಸಲು ಕ್ರಮ ವಹಿಸುವಂತೆ ನಿರ್ದೇಶಿಸಿದೆ.

ತುಮಕೂರು ಹೋಬಳಿ ಸರ್ವೆ ನಂ. 361ಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತರ ಆದೇಶದಂತೆ ಜರುಗಿಸಿರುವ ಕ್ರಮದ ಬಗ್ಗೆ ಮಾಹಿತಿ ನೀಡುವಂತೆ ಜಿ.ಎಸ್.ಬಸವರಾಜು ಎಂಬುವರು ಮಾಹಿತಿ ಹಕ್ಕು ನಿಯಮದಡಿ 5–6–2025ರಂದು ಅರ್ಜಿ ಸಲ್ಲಿಸಿದ್ದರು.

ಮಾಹಿತಿ ಅಧಿಕಾರಿ ಹಾಗೂ ಹೆಚ್ಚುವರಿ ಜಿಲ್ಲಾಧಿಕಾರಿ ಎನ್‌.ತಿಪ್ಪೇಸ್ವಾಮಿ ಈವರೆಗೂ ಮಾಹಿತಿ ನೀಡಿಲ್ಲ. ಪ್ರಥಮ ಮೇಲ್ಮನವಿ ಪ್ರಾಧಿಕಾರದ ಅಧಿಕಾರಿಯೂ ಆದ ಜಿಲ್ಲಾಧಿಕಾರಿ ಶುಭ ಕಲ್ಯಾಣ್‌ ಅವರಿಗೆ ಮೇಲ್ಮನವಿ ಸಲ್ಲಿಸಿ, ಮಾಹಿತಿ ಕೊಡಿಸುವಂತೆ ಕೇಳಿಕೊಂಡಿದ್ದರು. ಜಿಲ್ಲಾಧಿಕಾರಿಯೂ ಮಾಹಿತಿ ಕೊಡಿಸುವಲ್ಲಿ ವಿಫಲರಾಗಿದ್ದಾರೆ ಎಂದು ಆಯೋಗ ದೂರಿದೆ.

ಆಯೋಗದ ವಿಚಾರಣೆಗೂ ಗೈರು ಹಾಜರಾಗಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದು, ಮುಂದಿನ ವಿಚಾರಣೆ ಒಳಗೆ ಸಂಬಂಧಿಸಿದವರಿಗೆ ಮಾಹಿತಿ ನೀಡಿಬೇಕು. ಜತೆಗೆ ದಂಡ ಏಕೆ ವಿಧಸಬಾರದು ಎಂದು ಆಯೋಗ ಕೇಳಿದೆ. ಮುಂದಿನ ವಿಚಾರಣೆಗೆ ಖುದ್ದು ಹಾಜರಾಗುವಂತೆ ಆದೇಶಿಸಿದೆ. ಮುಂದಿನ ವಿಚಾರಣೆ ಏ.10ರಂದು ನಡೆಯಲಿದೆ.