ನವದೆಹಲಿ: ಕಾವೇರಿ ನದಿ ನೀರಿನ ವಿಚಾರದಲ್ಲಿ ಕರ್ನಾಟಕಕ್ಕೆ ಮೇಲಿಂದ ಮೇಲೆ ಹೊಡೆತಗಳು ಬೀಳುತ್ತಲೇ ಇವೆ. ಇದೀಗ ಮತ್ತೆ ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಕರ್ನಾಟಕಕ್ಕೆ ಸೂಚಿಸಿದೆ.
ನ್ಯಾಯಾಧಿಕರಣ ಹಾಗೂ ಸುಪ್ರೀಂಕೋರ್ಟ್ ಅಂತಿಮ ತೀರ್ಪು ಪಾಲಿಸುವಂತೆ ಹೇಳಿ ನವೆಂಬರ್ 23ರಿಂದ ಡಿಸೆಂಬರ್ 23ರವರಗೆ ನೀರು ಹರಿಸಲು ಸೂಚನೆ ನೀಡಿದೆ.