ಮನೆ ಸುದ್ದಿ ಜಾಲ ಮಸೀದಿ, ಮಂದಿರಗಳಿಗೆ ನೋಟಿಸ್: ಹೈಕೋರ್ಟ್ ಆದೇಶ ಉಲ್ಲಂಘಿಸಿದ್ರೆ ಶಿಕ್ಷೆ- ಕಮಲ್ ಪಂತ್

ಮಸೀದಿ, ಮಂದಿರಗಳಿಗೆ ನೋಟಿಸ್: ಹೈಕೋರ್ಟ್ ಆದೇಶ ಉಲ್ಲಂಘಿಸಿದ್ರೆ ಶಿಕ್ಷೆ- ಕಮಲ್ ಪಂತ್

0

ಬೆಂಗಳೂರು(Bengaluru): ಮಸೀದಿ, ಮಂದಿರ ಸೇರಿ ಎಲ್ಲರಿಗೂ ನೋಟಿಸ್ ನೀಡಲಾಗಿದೆ. ಹೈಕೋರ್ಟ್(Highcourt) ಆದೇಶವನ್ನು ಪಾಲನೆ ಮಾಡಲೇಬೇಕು. ಆದೇಶ ಉಲ್ಲಂಘಿಸಿದರೆ ಶಿಕ್ಷೆ ಆಗುತ್ತೆ ಎಂದು ಬೆಂಗಳೂರು ಪೊಲೀಸ್ ಕಮೀಷನರ್(police commisiioner) ಕಮಲ್ ಪಂತ್(Kamal Panth) ತಿಳಿಸಿದ್ದಾರೆ.

ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕ ಬಳಕೆ ವಿವಾದ ವಿಚಾರಕ್ಕೆ ಸಂಬಂಧಿಸಿ ಈಗಾಗಲೇ 6 ತಿಂಗಳ ಹಿಂದೆಯೇ ಹೈಕೋರ್ಟ್ ಆದೇಶ ನೀಡಿದೆ. ಹೈಕೋರ್ಟ್ ನಿರ್ದೇಶನದಂತೆ ಪೊಲೀಸರು ಕೆಲಸ ಮಾಡುತ್ತಾ ಇದ್ದಾರೆ. ಮಸೀದಿ, ಮಂದಿರ, ಕಾರ್ಖಾನೆ, ಪಬ್ ಸೇರಿ ಎಲ್ಲರಿಗೂ ನೋಟಿಸ್ ನೀಡಲಾಗಿದೆ. ಧಾರ್ಮಿಕ ಮುಖಂಡರ ಜತೆ ಈ ಬಗ್ಗೆ ಸಭೆ ನಡೆಸಲಾಗಿದೆ. ಅವರಿಗೂ ಮಾರ್ಗದರ್ಶನ ನೀಡಲಾಗಿತ್ತು. ಅದರಂತೆ ಧರ್ಮಗುರುಗಳು ನಡೆದುಕೊಂಡಿದ್ದಾರೆ. ಹೈಕೋರ್ಟ್ ಆದೇಶವನ್ನು ಪಾಲನೆ ಮಾಡಲೇಬೇಕು. ಹೈಕೋರ್ಟ್ ಆದೇಶ ಉಲ್ಲಂಘಿಸಿದರೆ ಶಿಕ್ಷೆ ಆಗುತ್ತೆ. ಆದೇಶ ಉಲ್ಲಂಘಿಸಿದ ಕಡೆ ಮೈಕ್​ಗಳನ್ನ ಜಪ್ತಿ ಮಾಡಿದ್ದೇವೆ ಎಂದು ತಿಳಿಸಿದ್ದಾರೆ.

ಮಸೀದಿಗಳಲ್ಲಿ ಲೌಡ್ ಸ್ಪೀಕರ್ ಮೂಲಕ ಆಜಾನ್ ಕೂಗುವುದನ್ನು ಪ್ರಶ್ನಿಸಿ 2019 ರಲ್ಲೇ ಹೈಕೋರ್ಟ್ ನಲ್ಲಿ ಪಿಐಎಲ್ (PIL)ಸಲ್ಲಿಕೆಯಾಗಿತ್ತು. ಗೋವಿಂದರಾಜನಗರದ ಮಸೀದಿ, ನಂತರ ಥಣಿಸಂದ್ರದ ಮಸೀದಿಯಲ್ಲಿ ಲೌಡ್ ಸ್ಪೀಕರ್ ಬಳಕೆ ಪ್ರಶ್ನಿಸಲಾಗಿತ್ತು. ಈ ಸಂದರ್ಭದಲ್ಲೇ ಹೈಕೋರ್ಟ್ 2000 ನೇ ಇಸವಿಯಲ್ಲಿ ಜಾರಿಯಾದ ಶಬ್ದಮಾಲಿನ್ಯ ನಿಯಂತ್ರಣ ನಿಯಮ ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಆದೇಶ ನೀಡಿದೆ.

ಶಬ್ದಮಾಲಿನ್ಯ ನಿಯಂತ್ರಣ ನಿಯಮದ ಪ್ರಕಾರ ಪೊಲೀಸರ ಅನುಮತಿಯಿಲ್ಲದೇ ಲೌಡ್ ಸ್ಪೀಕರ್ ಬಳಸುವಂತೆಯೇ ಇಲ್ಲ. ಸಾರ್ವಜನಿಕ ಸ್ಥಳಗಳಲ್ಲಿ ರಾತ್ರಿ ವೇಳೆ ಲೌಡ್ ಸ್ಪೀಕರ್ ಬಳಸುವಂತಿಲ್ಲ. ರಾತ್ರಿ 10 ಗಂಟೆಯಿಂದ ಬೆಳಗ್ಗೆ 6 ಗಂಟೆವರೆಗೆ ಲೌಡ್ ಸ್ಪೀಕರ್ ಬಳಕೆಗೆ ನಿರ್ಬಂಧವನ್ನು ವಿಧಿಸಲಾಗಿದೆ. ಇನ್ನು ಆಡಿಟೋರಿಯಂ, ಮುಚ್ಚಿದ ಸಭಾಂಗಣಗಳಲ್ಲಾದರೆ ಮಿತಿಯಲ್ಲಿ ಬಳಸಬಹುದು. ತುರ್ತು ಪರಿಸ್ಥಿತಿಗಳಲ್ಲಿ ಮಾತ್ರ ಲೌಡ್ ಸ್ಪೀಕರ್ ಬಳಸಬಹುದು. ರಾಜ್ಯ ಸರ್ಕಾರ ರಾತ್ರಿ 10 ರಿಂದ 12 ಗಂಟೆವರೆಗೆ ಕೆಲವೊಮ್ಮೆ ಅನುಮತಿಸಬಹುದು.

ಧಾರ್ಮಿಕ, ಸಾಂಸ್ಕೃತಿಕ ಆಚರಣೆಗಳು ನಡೆಯುವಾಗ ರಾತ್ರಿ 10 ರಿಂದ 12 ರವರೆಗೆ ಲೌಡ್ ಸ್ಪೀಕರ್ ಬಳಕೆಗೆ ಸರ್ಕಾರ ವಿನಾಯಿತಿ ನೀಡಬಹುದು. ಆದರೆ 15 ದಿನಗಳಿಗೆ ಸೀಮಿತವಾಗಿ ಮಾತ್ರ ಈ ವಿನಾಯಿತಿ ನೀಡಬಹುದು. ಸುಪ್ರೀಂಕೋರ್ಟ್ ಕೂಡಾ 2005ರಲ್ಲೇ ಈ ಶಬ್ದಮಾಲಿನ್ಯ ನಿಯಮ ಎತ್ತಿ ಹಿಡಿದಿದೆ. ಶಬ್ಧಮಾಪನ ಸ್ಥಳೀಯ ಪ್ರದೇಶದಲ್ಲಿ ನಿಗದಿಯಾದ ಮಟ್ಟಕ್ಕಿಂತ 10 ಡೆಸಿಬಲ್ ಅಥವಾ ಗರಿಷ್ಟ 75 ಡೆಸಿಬಲ್ ಇವೆರಡರಲ್ಲಿ ಯಾವುದು ಕಡಿಮೆಯೋ ಅಷ್ಟು ಮಾತ್ರ ಅನುಮತಿಯೊಂದಿಗೆ ಬಳಸಬಹುದು.

ಹಿಂದಿನ ಲೇಖನಇಂಟರ್ನ್‌ಶಿಪ್‌ ಗಡುವು ವಿಸ್ತರಣೆ ಕೋರಿದ್ದ ಮನವಿ ಪರಿಗಣಿಸಲು ಸುಪ್ರೀಂ ಕೋರ್ಟ್ ನಕಾರ
ಮುಂದಿನ ಲೇಖನಸಂತ್ರಸ್ತೆಯ ನಿರ್ಧಾರದ ಸ್ವಾಯತ್ತತೆಯನ್ನು ಉಲ್ಲಂಘಿಸಿದರೆ ಮಾತ್ರ ಮದುವೆಯಾಗುವ ಭರವಸೆಯ ಮೇಲೆ ಲೈಂಗಿಕತೆಯು ಅತ್ಯಾಚಾರವಾಗುತ್ತದೆ: ಕೇರಳ ಹೈಕೋರ್ಟ್