ಮನೆ ಉದ್ಯೋಗ ಐಟಿಬಿಪಿಯಲ್ಲಿ 545 ಕಾನ್ಸ್​ ಟೇಬಲ್​ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟ

ಐಟಿಬಿಪಿಯಲ್ಲಿ 545 ಕಾನ್ಸ್​ ಟೇಬಲ್​ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟ

0

ಬೆಂಗಳೂರು: ಇಂಡೋ – ಟಿಬೆಟಿಯನ್​ ಬಾರ್ಡರ್​ ಪೊಲೀಸ್​ ಫೋರ್ಸ್ ​ನಲ್ಲಿ ಖಾಲಿ ಇರುವ 545 ಕಾನ್ಸ್​ ಟೇಬಲ್​ (ಡ್ರೈವರ್​) ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ.

Join Our Whatsapp Group

ವಿದ್ಯಾರ್ಹತೆ: ಅಭ್ಯರ್ಥಿಗಳು 10ನೇ ತರಗತಿ ಪಾಸ್​ ಆಗಿರಬೇಕು. ವಾಹನ ಚಾಲನೆ ಪರವಾನಗಿ ಹೊಂದಿರುವುದು ಕಡ್ಡಾಯ.

ವಯೋಮಿತಿ: ಅಭ್ಯರ್ಥಿಗಳ ವಯಸ್ಸು ಕನಿಷ್ಠ 21 ಮತ್ತು ಗರಿಷ್ಠ 27 ವರ್ಷ. ಪ.ಜಾ, ಪ.ಪಂ ಅಭ್ಯರ್ಥಿಗಳಿಗೆ 5 ವರ್ಷ ಹಾಗೂ ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ಇರಲಿದೆ.

ಅರ್ಜಿ ಸಲ್ಲಿಕೆ: ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಪ.ಜಾ, ಪ.ಪಂ, ನಿವೃತ್ತ ಸೇವಾದಾರರಿಗೆ ಅರ್ಜಿ ಶುಲ್ಕ ವಿನಾಯಿತಿ ನೀಡಲಾಗಿದೆ. ಸಾಮಾನ್ಯ, ಒಬಿಸಿ, ಇಡಬ್ಲ್ಯೂಸಿ ಅಭ್ಯರ್ಥಿಗಳಿಗೆ 100 ರೂ. ಅರ್ಜಿ ಶುಲ್ಕ ವಿಧಿಸಲಾಗಿದೆ.

ಆಯ್ಕೆ ಪ್ರಕ್ರಿಯೆ: ಈ ಹುದ್ದೆಗೆ ದೈಹಿಕ ಸಾಮರ್ಥ್ಯ ಮತ್ತು ದೈಹಿಕ ಗುಣಮಟ್ಟ ಪರೀಕ್ಷೆ, ಲಿಖಿತ ಪರೀಕ್ಷೆ, ದಾಖಲಾತಿ ಪರಿಶೀಲನೆ, ಕೌಶಲ್ಯ ಪರೀಕ್ಷೆ, ವೈದ್ಯಕೀಯ ಪರೀಕ್ಷೆ ನಡೆಸಲಾಗುವುದು.

ಈ ಹುದ್ದೆಗೆ ಅಕ್ಟೋಬರ್​ 8 ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ನವೆಂಬರ್​​ 6 ಆಗಿದೆ.

ಈ ಹುದ್ದೆ ಕುರಿತು ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆ ಅಭ್ಯರ್ಥಿಗಳು recruitment.itbpolice.nic.in ಭೇಟಿ ನೀಡಬಹುದು.

ಕೇಂದ್ರಿಯ ಮೀಸಲು ಪೊಲೀಸ್​ ಪಡೆ (ಸಿಆರ್​ಪಿಎಫ್​)ನಲ್ಲಿ 124 ಸಬ್​ ಇನ್ಸ್​ಪೆಕ್ಟರ್​, ಮೋಟಾರ್​ ಮೆಕಾನಿಕ್​ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಐಟಿಐ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.

ಅಭ್ಯರ್ಥಿಗಳು ಗರಿಷ್ಠ ವಯೋಮಿತಿ 56 ವರ್ಷವಾಗಿದೆ. ಈ ಹುದ್ದೆಗಳನ್ನು ನಿಯೋಜನೆ ಮೇರೆಗೆ ನೇಮಕಾತಿ ನಡೆಸಲಾಗುವುದು. ಈ ಹುದ್ದೆಗಳಿಗೆ ಅಭ್ಯರ್ಥಿಗಳು ಆಫ್​ಲೈನ್​ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ.

ಸಿಆರ್​ ಪಿಎಫ್ ​ನ ಅಧಿಕೃತ ಜಾಲತಾಣದಲ್ಲಿ ಲಭ್ಯವಿರುವ ನಿಗದಿತ ಅರ್ಜಿಯನ್ನು ಭರ್ತಿ ಮಾಡಿ ಅಭ್ಯರ್ಥಿಗಳು ಅದರೊಂದಿಗೆ ಸಂಬಂಧಿಸಿದ ದಾಖಲಾತಿಯೊಂದಿಗೆ ಆಫ್​ಲೈನ್​ ಮೂಲಕ ಅರ್ಜಿ ಪೋಸ್ಟ್​ ಮಾಡಬೇಕಿದೆ. ಈ ಹುದ್ದೆಗೆ ಅಕ್ಟೋಬರ್​ 10ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಡಿಸೆಂಬರ್​ 9 ಆಗಿದೆ.

ಈ ಹುದ್ದೆ ಕುರಿತ ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆ ಅಭ್ಯರ್ಥಿಗಳು rect.crpf.gov.in ಇಲ್ಲಿಗೆ ಭೇಟಿ ನೀಡಿ.