ರಾಯಚೂರು ಕೃಷಿ ವಿಜ್ಞಾನ ವಿಶ್ವವಿದ್ಯಾನಿಲಯವು ಸಹಾಯಕ ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.
ಬಹಳ ದಿನಗಳಿಂದ ಕರ್ನಾಟಕ ಸರ್ಕಾರದಲ್ಲಿ ಕೆಲಸ ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಂಡು, ಇದೇ ಡಿಸೆಂಬರ್ 6ರಂದು ನೇರ ಸಂದರ್ಶನಕ್ಕೆ ಹಾಜರಾಗಬಹುದು.
ವಿಶ್ವವಿದ್ಯಾಲಯದ ಹೆಸರು: ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ರಾಯಚೂರು (ಯುಎಎಸ್ ರಾಯಚೂರು)
ಹುದ್ದೆಗಳ ಸಂಖ್ಯೆ: 1
ಉದ್ಯೋಗ ಸ್ಥಳ: ರಾಯಚೂರು – ಕರ್ನಾಟಕ
ಹುದ್ದೆಯ ಹೆಸರು: ಸಹಾಯಕ ಪ್ರಾಧ್ಯಾಪಕರು
ವೇತನ: ರೂ.40000-45000/- ಪ್ರತಿ ತಿಂಗಳು
ಅರ್ಹತೆಯ ವಿವರಗಳು ಹೀಗಿದೆ
ವಿದ್ಯಾರ್ಹತೆ: ಯುಎಎಸ್ ರಾಯಚೂರು ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಿಂದ ಸ್ನಾತಕೋತ್ತರ ಪದವಿ, ಡಾಕ್ಟರೇಟ್ ಪೂರ್ಣಗೊಳಿಸಿರಬೇಕು.
ವಯಸ್ಸಿನ ಮಿತಿ: ರಾಯಚೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಯುಎಎಸ್ ರಾಯಚೂರು ಮಾನದಂಡಗಳ ಪ್ರಕಾರ ವಯಸ್ಸಿನ ಮಿತಿಯನ್ನು ಹೊಂದಿರಬೇಕು.
ಆಯ್ಕೆ ಪ್ರಕ್ರಿಯೆ
ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ
ವಾಕ್-ಇನ್-ಇಂಟರ್’ವ್ಯೂ ನಡೆಯುವ ಸ್ಥಳ
ಡೀನ್, ಕೃಷಿ ಎಂಜಿನಿಯರಿಂಗ್ ಕಾಲೇಜು, ರಾಯಚೂರು
ಪ್ರಮುಖ ದಿನಾಂಕಗಳು:
ಅಧಿಸೂಚನೆಯನ್ನು ಬಿಡುಗಡೆ ಮಾಡಿದ ದಿನಾಂಕ: 21-11-2022
ವಾಕ್-ಇನ್ ದಿನಾಂಕ: 06-12-2022 10:00 AM