ಮನೆ ಉದ್ಯೋಗ 945 ಕೃಷಿ ಅಧಿಕಾರಿಗಳ ಹುದ್ದೆಗಳ ಭರ್ತಿಗೆ ಅಧಿಸೂಚನೆ

945 ಕೃಷಿ ಅಧಿಕಾರಿಗಳ ಹುದ್ದೆಗಳ ಭರ್ತಿಗೆ ಅಧಿಸೂಚನೆ

0

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗಿಂದ ಗ್ರೂಪ್​ ಬಿ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಕೃಷಿ ಇಲಾಖೆಯಲ್ಲಿ ಖಾಲಿ ಇರುವ ಕೃಷಿ ಅಧಿಕಾರಿಗಳು ಮತ್ತು ಸಹಾಯಕ ಕೃಷಿ ಅಧಿಕಾರಿಗಳ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.

Join Our Whatsapp Group

ಹುದ್ದೆ ವಿವರ: ಒಟ್ಟು 945 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಇದರಲ್ಲಿ 273 ಹುದ್ದೆಗಳನ್ನು ಹೈದರಾಬಾದ್​ ಕರ್ನಾಟಕ ಅಭ್ಯರ್ಥಿಗಳಿಗೆ ಮೀಸಲಿರಿಸಲಾಗಿದೆ.

ಕೃಷಿ ಅಧಿಕಾರಿಗಳ ಹುದ್ದೆ – 128

ಸಹಾಯಕ ಕೃಷಿ ಅಧಿಕಾರಿ – 817

ವಿದ್ಯಾರ್ಹತೆ: ಅಭ್ಯರ್ಥಿಗಳು ಕೃಷಿ ವಿಜ್ಞಾನ ವಿಷಯ ಅಥವಾ ಬಯೋಟೆಕ್ನಾಲಾಜಿ ಅಥವಾ ಆಗಾರ ಮತ್ತು ವಿಜ್ಞಾನ ಹಾಗು ತಂತ್ರಜ್ಞಾನದಲ್ಲಿ ಬಿಎಸ್ಸಿ, ಬಿಟೆಕ್​ ಪದವಿಯನ್ನು ಮಾಡಿರಬೇಕು.

ವಯೋಮಿತಿ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಕನಿಷ್ಠ ವಯೋಮಿತಿ 18 ಹಾಗೂ ಗರಿಷ್ಠ ವಯೋಮಿತಿ 38 ವರ್ಷವಾಗಿದೆ.

ಪ.ಜಾ, ಪ.ಪಂ ಮತ್ತು ಪ್ರವರ್ಗ 1 ಅಭ್ಯರ್ಥಿಗಳಿಗೆ 5 ವರ್ಷ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 3 ವರ್ಷ ಹಾಗೂ ವಿಕಲಚೇತನ ಮತ್ತು ವಿಧವಾ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.

ಅರ್ಜಿ ಸಲ್ಲಿಕೆ: ಈ ಹುದ್ದೆಗೆ ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಪ.ಜಾ, ಪ.ಪಂ, ಪ್ರವರ್ಗ 1 ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ. ನಿವೃತ್ತ ಸೇವಾಧಾರರಿಗೆ 50 ರೂ, ಪ್ರವರ್ಗ 2ಎ, 2ಬಿ, 3ಎ ಮತ್ತು 3 ಬಿ ಅಭ್ಯರ್ಥಿಗಳಿಗೆ 300 ರೂ. ಹಾಗೂ ಸಾಮಾನ್ಯ ಅಭ್ಯರ್ಥಿಗಳಿಗೆ 600 ರೂ. ಅರ್ಜಿ ಶುಲ್ಕ ವಿಧಿಸಲಾಗಿದೆ.

ಈ ಹುದ್ದೆಗೆ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುವುದು.

ಈ ಹುದ್ದೆಗೆ ಅರ್ಜಿ ಸಲ್ಲಿಕೆಯ ಲಿಂಕ್​ ಅಕ್ಟೋಬರ್ 7ರಿಂದ ತೆರೆಯಲಿದ್ದು, ಅರ್ಜಿ ಸಲ್ಲಿಕಗೆ ಕಡೆಯ ದಿನಾಂಕ ನವೆಂಬರ್​ 7 ಆಗಿದೆ.

ಈ ಹುದ್ದೆ ಕುರಿತು ಸಂಪೂರ್ಣ ಮಾಹಿತಿ ಮತ್ತು ಅಧಿಸೂಚನೆಗೆ ಅಭ್ಯರ್ಥಿಗಳು kpsconline.karnataka.gov.in ಭೇಟಿ ನೀಡಬಹುದು.