ಮನೆ ಉದ್ಯೋಗ ದಾವಣಗೆರೆ, ಹಾಸನ, ಬಳ್ಳಾರಿಯಲ್ಲಿ ಅಂಗನವಾಡಿ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟ

ದಾವಣಗೆರೆ, ಹಾಸನ, ಬಳ್ಳಾರಿಯಲ್ಲಿ ಅಂಗನವಾಡಿ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟ

0

ಬೆಂಗಳೂರು: ದಾವಣಗೆರೆ, ಹಾಸನ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಖಾಲಿ ಇರುವ ಅಂಗನವಾಡಿ ಹುದ್ದೆಗಳ ನೇಮಕಾತಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವಾಲಯ ಅಧಿಸೂಚನೆ ಪ್ರಕಟಿಸಿದೆ.

Join Our Whatsapp Group

ಹುದ್ದೆ ವಿವರ: ಹಾಸನ ಒಟ್ಟು ಹುದ್ದೆಗಳ ಸಂಖ್ಯೆ 734

ಜಿಲ್ಲೆಯ 8 ತಾಲೂಕಿನಲ್ಲಿ 168 ಅಂಗನವಾಡಿ ಕಾರ್ಯಕರ್ತರು, 566 ಅಂಗನವಾಡಿ ಸಹಾಯಕರ ಹುದ್ದೆ ನೇಮಕಾತಿ ನಡೆಯಲಿದೆ. ಹಾಸನ ತಾಲೂಕು- 71, ಚನ್ನರಾಯಪಟ್ಟಣ- 142, ಹೊಳೆನರಸೀಪುರ -88, ಬೇಲೂರು -89, ಸಕಲೇಶಪುರ- 61, ಆಲೂರು- 25, ಅರಸೀಕೆರೆ -171, ಅರಕಲಗೂಡು- 67

ಈ ಹುದ್ದೆಗೆ ಅರ್ಜಿ ಸಲ್ಲಿಸುವ ಕಡೆಯ ದಿನಾಂಕ ಸೆಪ್ಟೆಂಬರ್​ 4 ಆಗಿದೆ.

ದಾವಣಗೆರೆ ಒಟ್ಟು ಹುದ್ದೆಗಳ ಸಂಖ್ಯೆ- 237

ದಾವಣಗೆರೆಯ ಜಿಲ್ಲೆಯ ಹರಿಹರ, ಜಗಳೂರು, ಹೊನ್ನಾಳಿ, ಚನ್ನಗಿರಿ, ದಾವಣಗೆರೆ ತಾಲೂಕಿನಲ್ಲಿ ಖಾಲಿ ಇರುವ 99 ಅಂಗನವಾಡಿ ಕಾರ್ಯಕರ್ತರು, 198 ಅಂಗನವಾಡಿ ಸಹಾಯಕಿಯರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಈ ಹುದ್ದೆಗೆ ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಸೆಪ್ಟೆಂಬರ್​ 9 ಆಗಿದೆ.

ಬಳ್ಳಾರಿಯಲ್ಲಿನ ಒಟ್ಟು ಹುದ್ದೆ ಸಂಖ್ಯೆ – 141

ಬಳ್ಳಾರಿ ನಗರ ಮತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ 22 ಅಂಗನವಾಡಿ ಕಾರ್ಯಕರ್ತರು, 119 ಅಂಗನಾಡಿ ಸಹಾಯಕಿಯರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ವಿದ್ಯಾರ್ಹತೆ: ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ ಪಿಯುಸಿ ಹಾಗು ಸಹಾಯಕರ ಹುದ್ದೆಗಳಿಗೆ ಎಸ್​ಎಸ್​ಎಲ್​ಸಿ ಪೂರ್ಣಗೊಳಿಸಿರಬೇಕು.

ವಯೋಮಿತಿ: ಕನಿಷ್ಠ 19 ರಿಂದ 35 ವರ್ಷ. ವಿಶೇಷಚೇತನ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಇದೆ.

ಅರ್ಜಿ ಸಲ್ಲಿಸುವ ಮುನ್ನ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಲಭ್ಯವಿರುವ ಅಧಿಸೂಚನೆಯನ್ನು ಪರಿಶೀಲಿಸಿ, ಆನ್​ಲೈನ್​ ಮೂಲಕ ಅರ್ಜಿ ಭರ್ತಿ ಮಾಡುವಂತೆ ತಿಳಿಸಲಾಗಿದೆ. ಯಾವುದೇ ಅರ್ಜಿ ಶುಲ್ಕ ಇಲ್ಲ. ಅಭ್ಯರ್ಥಿಗಳನ್ನು ಮೆರಿಟ್​ ಪಟ್ಟಿ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಂಗನವಾಡಿ ಕೇಂದ್ರದ ಆಯಾ ತಾಲೂಕು, ಗ್ರಾಮಾಂತರ ಪ್ರದೇಶಗಳಲ್ಲಿ ವಾಸಿಸುವ ಸ್ಥಳೀಯರೇ ಆಗಿರಬೇಕು. ಈ ಕುರಿತು ಹೆಚ್ಚಿನ ಮಾಹಿತಿಗೆ ಆಯಾ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳನ್ನು ಸಂಪರ್ಕಿಸಬಹುದು.

ಅರ್ಜಿ ಸಲ್ಲಿಸುವ ವಿಧಾನ: ಅಭ್ಯರ್ಥಿಗಳು http://karnemakaone.kar.nic.in/abcd/ ಜಾಲತಾಣಕ್ಕೆ ಭೇಟಿ ನೀಡಿ. ಇಲ್ಲಿ ಜಿಲ್ಲೆ ಆಯ್ಕೆ ಮಾಡಿ, ಬಳಿಕ ಯಾವ ಹುದ್ದೆ ಎಂಬುದನ್ನು ಆಯ್ಕೆ ಮಾಡಿ, ಅಗತ್ಯ ಪ್ರಮಾಣ ಪತ್ರ ಸೇರಿದಂತೆ ಮತ್ತಿತರ ವಿವರ ಸಲ್ಲಿಸಿ, ಅರ್ಜಿ ಸಲ್ಲಿಸಬೇಕಿದೆ.