ದಾವಣಗೆರೆ: ನ್ಯಾಮತಿ ಎಸ್ಬಿಐ ಬ್ಯಾಂಕ್ ದರೋಡೆ ಪ್ರಕರಣದಲ್ಲಿ ಆರು ತಿಂಗಳ ಬಳಿಕ ಚಿನ್ನಾಭರಣ ಸಹಿತ ಅರೋಪಿಗಳ ಬಂಧನವಾಗಿದೆ. ಆರೋಪಿಗಳ ವಿಚಾರಣೆ ವೇಳೆ ಸ್ಫೋಟಕ ವಿಚಾರ ಬಯಲಾಗಿದ್ದು, ಚಿನ್ನ ಮುಚ್ಚಿಟ್ಟಿದ್ದು, ದರೋಡೆಗೆ ಕಾರಣ, ಸಂಚು ಎಲ್ಲವನ್ನೂ ಆರೋಪಿಗಳು ಪೊಲೀಸರ ಮುಂದೆ ಬಾಯ್ಬಿಟ್ಟಿದ್ದಾರೆ.
ರಕರಣದಲ್ಲಿ 6 ಜನ ಆರೋಪಿಗಳ ಬಂಧನವಾಗಿದೆ. ಕದ್ದಿದ್ದ 17 ಕೆಜಿ ಬಂಗಾರ ವಶಪಡಿಸಿಕೊಳ್ಳಲಾಗಿದೆ. ದರೋಡೆ ಪ್ರಕರಣದ ಮಾಸ್ಟರ್ ಮೈಂಡ್ ವಿಜಯ್ ಕುಮಾರ್ ನ್ಯಾಮತಿಯಲ್ಲಿ ಬೇಕರಿ ಇಟ್ಟುಕೊಂಡು ಜೀವನ ನಡೆಸುತ್ತಿದ್ದ. ಬ್ಯಾಂಕ್ನಲ್ಲಿ ಲೋನ್ ಪಡೆಯಲು ಎರಡು ಬಾರಿ ಅರ್ಜಿ ಹಾಕಿದ್ದ, ಈ ಅರ್ಜಿ ತಿರಸ್ಕಾರವಾಗಿತ್ತು. ಇದರಿಂದ ರೋಸಿ ಹೋಗಿದ್ದ. ಇದೇ ಕಾರಣಕ್ಕೆ ಬ್ಯಾಂಕ್ ದರೋಡೆಗೆ ಹಿಂದಿ ವೆಬ್ ಸೀರಿಸ್ ನೋಡಿ ದರೋಡೆಗೆ ಸಂಚು ರೂಪಿಸಿದ್ದ.














