ಮೈಸೂರು(Mysuru): ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಇಂದು ನಗರದ ನಾನಾ ಭಾಗಗಳಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳನ್ನು ವೀಕ್ಷಣೆ ಮಾಡಿದರು.
ಪುರಭವನದಲ್ಲಿ ನಿರ್ಮಾಣವಾಗುತ್ತಿರುವ ಬಹುಮಹಡಿ ಪಾರ್ಕಿಂಗ್ ಕಟ್ಟಡ, ಎನ್.ಎಸ್.ರಸ್ತೆಯಲ್ಲಿ ನಡೆಯುತ್ತಿರುವ ರಸ್ತೆ ಡಾಂಬರೀಕರಣ, ಅಜೀಜ್ ಸೇಠ್ ಡಬಲ್ ರಸ್ತೆಯಲ್ಲಿ ಕೈಗೊಂಡಿರುವ ಕಾಮಗಾರಿ ವೀಕ್ಷಣೆ ಮಾಡಿದರು.
ಈ ವೇಳೆ ಮಾತನಾಡಿದ ಸಚಿವರು, ಬಹುಮಹಡಿ ಪಾರ್ಕಿಂಗ್ ಕಟ್ಟಡದ ಮೊದಲ ಮಹಡಿಯಲ್ಲಿ ವಾಹನ ನಿಲುಗಡೆ ಮಾಡಬಹುದಾಗಿದೆ. ದಸರಾ ಸಂದರ್ಭದಲ್ಲಿ ಪಾರ್ಕಿಂಗ್ ಸಮಸ್ಯೆ ನಿವಾರಿಸಲು ಮೊದಲ ಮಹಡಿಯಲ್ಲಿ ಉಚಿತ ಪಾರ್ಕಿಂಗ್ ಇರಲಿದೆ. ಡಿಸೆಂಬರ್ ವೇಳೆಗೆ ಕಟ್ಟಡ ನಿರ್ಮಾಣ ಕಾಮಗಾರಿ ಮುಕ್ತಾಯವಾಗಲಿದೆ ಎಂದರು.
ಈ ಸಂದರ್ಭದಲ್ಲಿ ಶಾಸಕರಾದ ನಾಗೇಂದ್ರ, ಮೇಯರ್ ಶಿವಕುಮಾರ್, ಉಪಮೇಯರ್ ರೂಪಾ, ಪಾಲಿಕೆ ಆಯುಕ್ತರಾದ ಲಕ್ಷ್ಮಿಕಾಂತ್ ರೆಡ್ಡಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.