ಐಸಿಸಿ ಏಕದಿನ ಬ್ಯಾಟರ್ ಗಳ ನೂತನ ಶ್ರೇಯಾಂಕ ಪಟ್ಟಿಯನ್ನು ಪ್ರಕಟಿಸಿದೆ. ಹೊಸ ರ‍್ಯಾಂಕಿಂಗ್ ಪಟ್ಟಿಯಲ್ಲಿ ಪಾಕಿಸ್ತಾನ್ ತಂಡದ ನಾಯಕ ಬಾಬರ್ ಆಝಂ ಅಗ್ರಸ್ಥಾನವನ್ನು ಅಲಂಕರಿಸಿದ್ದಾರೆ. ಇನ್ನು ಟೀಮ್ ಇಂಡಿಯಾದ ಯುವ ಬ್ಯಾಟರ್ ಶುಭ್ ಮನ್ ಗಿಲ್ 4ನೇ ಸ್ಥಾನದಲ್ಲಿ ಕಾಣಿಸಿಕೊಂಡಿದ್ದಾರೆ.
ಏಷ್ಯಾಕಪ್ ಆರಂಭಕ್ಕೆ ಇನ್ನು ವಾರ ಮಾತ್ರ ಉಳಿದಿದೆ. ಹೀಗಾಗಿ ಮುಂದಿನ ಶ್ರೇಯಾಂಕದಲ್ಲಿ ಮಹತ್ವದ ಬದಲಾವಣೆ ಕಂಡು ಬರುವ ಸಾಧ್ಯತೆ ಹೆಚ್ಚು. ಏಕೆಂದರೆ ಅಗ್ರ ಹತ್ತರಲ್ಲಿ ಏಷ್ಯಾದ ಐವರು ಬ್ಯಾಟರ್ ಗಳು ಕಾಣಿಸಿಕೊಂಡಿದ್ದಾರೆ.
ಇವರಲ್ಲಿ ಪಾಕ್ ನ ಬಾಬರ್ ಆಝಂ ಅಗ್ರಸ್ಥಾನದಲ್ಲಿದ್ದರೆ, ಟೀಮ್ ಇಂಡಿಯಾದ ಶುಭ್ಮನ್ ಗಿಲ್ ನಾಲ್ಕನೇ ಸ್ಥಾನ ಅಲಂಕರಿಸಿದ್ದಾರೆ. ಇನ್ನು ಪಾಕಿಸ್ತಾನದ ಇಮಾಮ್ ಉಲ್ ಹಕ್ ಹಾಗೂ ಫಖರ್ ಝಮಾನ್ ಕ್ರಮವಾಗಿ 3ನೇ ಮತ್ತು 5ನೇ ಸ್ಥಾನದಲ್ಲಿದ್ದಾರೆ. ಹಾಗೆಯೇ ಟೀಮ್ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ 9ನೇ ಸ್ಥಾನದಲ್ಲಿದ್ದಾರೆ.
ಐಸಿಸಿ ನೂತನ ಶ್ರೇಯಾಂಕ ಪಟ್ಟಿ:
ಬಾಬರ್ ಆಝಂ (ಪಾಕಿಸ್ತಾನ್)- 880 ರೇಟಿಂಗ್
ರಸ್ಸಿ ವಂಡೆರ್ ಡುಸ್ಸೆನ್ (ಸೌತ್ ಆಫ್ರಿಕಾ)- 777 ರೇಟಿಂಗ್
ಇಮಾಮ್ ಉಲ್ ಹಕ್ (ಪಾಕಿಸ್ತಾನ್)- 752 ರೇಟಿಂಗ್
ಶುಭ್ಮನ್ ಗಿಲ್ (ಭಾರತ)- 743 ರೇಟಿಂಗ್
ಫಖರ್ ಝಮಾನ್ (ಪಾಕಿಸ್ತಾನ್)- 740 ರೇಟಿಂಗ್
ಹ್ಯಾರಿ ಟೆಕ್ಟರ್ (ಐರ್ಲೆಂಡ್)- 726 ರೇಟಿಂಗ್
ಡೇವಿಡ್ ವಾರ್ನರ್ (ಆಸ್ಟ್ರೇಲಿಯಾ)- 726 ರೇಟಿಂಗ್
ಕ್ವಿಂಟನ್ ಡಿಕಾಕ್ (ಸೌತ್ ಆಫ್ರಿಕಾ)- 718 ರೇಟಿಂಗ್
ವಿರಾಟ್ ಕೊಹ್ಲಿ (ಭಾರತ)- 705 ರೇಟಿಂಗ್
ಸ್ಟೀವ್ ಸ್ಮಿತ್ (ಆಸ್ಟ್ರೇಲಿಯಾ)- 702 ರೇಟಿಂಗ್