ಮನೆ ಕ್ರೀಡೆ ಏಕದಿನ ವಿಶ್ವಕಪ್ : ಶ್ರೀಲಂಕಾ ತಂಡವನ್ನು ಮಣಿಸಿದ ಅಫ್ಘಾನಿಸ್ತಾನ

ಏಕದಿನ ವಿಶ್ವಕಪ್ : ಶ್ರೀಲಂಕಾ ತಂಡವನ್ನು ಮಣಿಸಿದ ಅಫ್ಘಾನಿಸ್ತಾನ

0

ಪುಣೆ: ಮಹಾರಾಷ್ಟ್ರ ಕೆಟ್ ಸಂಸ್ಥೆ ಕ್ರೀಡಾಂಗಣದಲ್ಲಿ ರಹಮತ್ ಶಾ, ಹಶ್ಮತುಲ್ಲಾ ಶಾಹಿದಿ ಮತ್ತು ಅಜ್ಮತುಲ್ಲಾ ಒಮರ್ಜಾಯ್ ಅವರ ಅರ್ಧಶತಕದ ಇನ್ನಿಂಗ್ಸ್ ನೆರವಿನಿಂದ ಶ್ರೀಲಂಕಾ ವಿರುದ್ಧ ಅಫ್ಘಾನಿಸ್ತಾನ 4.4 ಓವರ್ ಮತ್ತು 7 ವಿಕೆಟ್ ಗಳ ಗೆಲುವು ದಾಖಲಿಸಿದೆ.

ಈ ಪಂದ್ಯದಲ್ಲಿ ಟಾಸ್ ಗೆದ್ದ ಅಫ್ಘಾನಿಸ್ತಾನ್ ಮೊದಲು ಬೌಲಿಂಗ್ ಮಾಡಿತು. ಅದರಂತೆ ಇನಿಂಗ್ಸ್ ಆರಂಭಿಸಿದ ಶ್ರೀಲಂಕಾ ತಂಡ 49.3 ಓವರ್ ಗಳಲ್ಲಿ 241 ರನ್ ಗಳಿಸಿ ಆಲೌಟ್ ಆಯಿತು.

242 ರನ್ ಗಳ ಸುಲಭ ಗುರಿ ಪಡೆದ ಅಫ್ಘಾನಿಸ್ತಾನ್ ತಂಡ ದಿಲ್ಶನ್ ಮಧುಶಂಕ ಎಸೆತದಲ್ಲಿ ಕ್ಲೀನ್ ಬೌಲ್ಡ್ ಆಗುವ ಮೂಲಕ ರಹಮಾನುಲ್ಲಾ ಗುರ್ಬಾಝ್ ಶೂನ್ಯಕ್ಕೆ ನಿರ್ಗಮಿಸಿದರು.

ಮತ್ತೋರ್ವ ಆರಂಭಿಕ ಆಟಗಾರ ಇಬ್ರಾಹಿಂ ಝದ್ರಾನ್ 39 ರನ್ ಬಾರಿಸಿದರೆ, 3ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ರಹಮತ್ ಶಾ 62 ರನ್ ಗಳಿಸಿದರು ಇದಾದ ಬಳಿಕ ಕಣಕ್ಕಿಳಿದ ನಾಯಕ ಹಶ್ಮತ್ ಶಾಹಿದಿ ಹಾಗೂ ಅಝ್ಮತ್ ಒಮರ್ಝಾಹಿ ಅರ್ಧಶತಕ ಬಾರಿಸಿ ಮಿಂಚಿದರು.

8 ಓವರ್ ಗಳಲ್ಲಿ ಅಫ್ಘಾನಿಸ್ತಾನ್ ತಂಡಕ್ಕೆ ಕೇವಲ 28 ರನ್ ಗಳ ಅವಶ್ಯಕತೆಯಿತ್ತು. ಈ ಹಂತದಲ್ಲಿ ಉತ್ತಮ ಜೊತೆಯಾಟ ಪ್ರದರ್ಶಿಸುವ ಮೂಲಕ ಅಝ್ಮತ್ ಒಮರ್ಝಾಹಿ (73) ಹಾಗೂ ಹಶ್ಮತ್ ಶಾಹಿದಿ (58) 45.2 ಓವರ್ ಗಳಲ್ಲಿ ಅಫ್ಘಾನಿಸ್ತಾನ್ ತಂಡ 7 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿದೆ.

ಹಿಂದಿನ ಲೇಖನಮಂಡ್ಯ: ನಾಯಿಗಳ ದಾಳಿಗೆ ವೃದ್ಧ ಬಲಿ
ಮುಂದಿನ ಲೇಖನಕರಾವಳಿ ಭಾಗದ ಚಿನ್ನದ ಅಂಗಡಿಗಳ ಮೇಲೆ ಐಟಿ ದಾಳಿ