ಮನೆ ರಾಜ್ಯ ದೇವಿರಮ್ಮನಿಗೆ ಮೈಸೂರು ಅರಸರ ಮನೆತನದಿಂದ ಬಾಗಿನ ಅರ್ಪಣೆ

ದೇವಿರಮ್ಮನಿಗೆ ಮೈಸೂರು ಅರಸರ ಮನೆತನದಿಂದ ಬಾಗಿನ ಅರ್ಪಣೆ

0

ಚಿಕ್ಕಮಗಳೂರು / ಮೈಸೂರು : ದೇವಿರಮ್ಮನ ಬೆಟ್ಟದಲ್ಲಿ ಜಾತ್ರಾ ಮಹೋತ್ಸವ ಹಿನ್ನೆಲೆ, ಪ್ರತಿ ವರ್ಷದಂತೆ ಮೈಸೂರು ಅರಸರ ಮನೆತನದಿಂದ ದೇವಿಗೆ ಬಾಗಿನ ಅರ್ಪಣೆ ಮಾಡಲಾಗಿದೆ.

ಅನಾದಿ ಕಾಲದಿಂದಲೂ ಅರಸರ ಮನೆತನದಿಂದ ಜಾತ್ರೆಯಲ್ಲಿ ದೇವೀರಮ್ಮನಿಗೆ ಬಾಗಿನ ಕೊಡುವ ಸಂಪ್ರದಾಯವಿದೆ. ಮೈಸೂರು ಸಂಸ್ಥಾನದ ಪರವಾಗಿ ಆಗಮಿಸಿದ ಅರಸು ಸಂಘದ ರಾಜ್ಯಾಧ್ಯಕ್ಷ ದಿನೇಶ್ ತಂಡಕ್ಕೆ ದೇವಾಲಯದ ಆಡಳಿತ ಮಂಡಳಿ ಸ್ವಾಗತಿಸಿತು. ಬಳಿಕ ಹಣ್ಣು, ಕಾಯಿ, ವಿಳ್ಯೆದೆಲೆ, ಸೀರೆ, ಅರಿಶಿನ-ಕುಂಕುಮ ಅರ್ಪಣೆ ಮಾಡಲಾಯಿತು.

ದೇವಿರಮ್ಮನ ಬೆಟ್ಟದ ತಪ್ಪಲಿನ ಕೆಳಭಾಗದಲ್ಲಿರುವ ದೇವಸ್ಥಾನಕ್ಕೆ ಗಾಳಿ ರೂಪದಲ್ಲಿ ದೇವಿರಮ್ಮ ಪ್ರವೇಶಿಸಿದ್ದಾಳೆ. ವರ್ಷಕ್ಕೊಮ್ಮೆ ಬೆಟ್ಟದ ಮೇಲೆ ಭಕ್ತರಿಗೆ ದರ್ಶನ ನೀಡುವ ದೇವೀರಮ್ಮ, ಉಳಿದ 364 ದಿನ ದೇವಸ್ಥಾನದಲ್ಲಿ ಭಕ್ತರಿಗೆ ದರ್ಶನ ನೀಡುತ್ತಾಳೆ.

ಎರಡು ದಿನದಿಂದ ಬೆಟ್ಟದ ಮೇಲಿದ್ದ ದೇವಿ ಇಂದು ಕೆಳಗಿರುವ ದೇಗುಲದ ಗರ್ಭಗುಡಿ ಪ್ರವೇಶಿಸಿದ್ದಾಳೆ. ಈ ಬಾರಿ ಎರಡು ದಿನ ಬೆಟ್ಟ ಹತ್ತಲು ಅವಕಾಶ ನೀಡಲಾಗಿತ್ತು. ಎರಡು ದಿನದಲ್ಲಿ ಸುಮಾರು 70 ಸಾವಿರಕ್ಕೂ ಅಧಿಕ ಭಕ್ತರು ಬರೀಗಾಲಿನಲ್ಲಿ ಬೆಟ್ಟವನ್ನ ಏರಿ ತಾಯಿಯ ದರ್ಶನ ಪಡೆದಿದ್ದಾರೆ.