ಮೈಸೂರು: ಕರ್ನಾಟಕ ಸರ್ಕಾರ, ಜಲಸಂಪನ್ಮೂಲ ಇಲಾಖೆ ಕಾವೇರಿ ನೀರಾವರಿ ನಿಗಮ ನಿಯಮಿತದ ವತಿಯಿಂದ ಜುಲೈ ೨೦ ರಂದು ಬೆಳಗ್ಗೆ ೧೦ ಗಂಟೆಗೆ ಹೆಚ್.ಡಿ. ಕೋಟೆ ತಾಲ್ಲೂಕಿನ ಬೀಚನಹಳ್ಳಿಯಲ್ಲಿ ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಸನ್ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಬಾಗಿನ ಅರ್ಪಣೆ ಮಾಡಲಿದ್ದಾರೆ. ಉಪ ಮುಖ್ಯ ಮಂತ್ರಿಗಳು ಮತ್ತು ಜಲಸಂಪನ್ಮೂಲ ಸಚಿವರಾದ ಡಿ.ಕೆ. ಶಿವಕುಮಾರ್, ಉಕ್ಕು ಮತ್ತು ಬೃಹತ್ ಕೈಗಾರಿಕಾ ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ, ಸಮಾಜ ಕಲ್ಯಾಣ ಇಲಾಖೆಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಹೆಚ್.ಸಿ. ಮಹದೇವಪ್ಪ, ಪಶು ಸಂಗೋಪನೆ ಹಾಗೂ ರೇಷ್ಮೆ ಸಚಿವರು ಮತ್ತು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ವೆಂಕಟೇಶ್, ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್. ಬೋಸರಾಜು ಅವರ ಘನ ಉಪಸ್ಥಿತಿಯಲ್ಲಿ ಜಂಗಲ್ ಲಾಡ್ಜಸ್ & ರೆಸಾಟ್ಸ್‌ನ ಅಧ್ಯಕ್ಷರು ಹಾಗೂ ಹೆಚ್.ಡಿ. ಕೋಟೆ ಕ್ಷೇತ್ರದ ವಿಧಾನಸಭಾ ಸದಸ್ಯರಾದ ಸಿ. ಅನಿಲ್ ಕುಮಾರ್ ಅವರು ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ(ನಿ) ಹಾಗೂ ಶ್ರೀರಂಗ ಪಟ್ಟಣ ವಿಧಾನ ಸಭಾ ಕ್ಷೇತ್ರದ ಸದಸ್ಯರಾದ ಎ.ಬಿ. ರಮೇಶ್ ಬಂಡಿಸಿದ್ದೇಗೌಡ, ಮೈಸೂರು ಸೇಲ್ಸ್ ಇಂಟರ್ ನ್ಯಾಷನಲ್ ಲಿ. ನ ಅಧ್ಯಕ್ಷರು ಮತ್ತು ಚಾಮರಾಜನಗರ ವಿಧಾನಸಭಾ ಕ್ಷೇತ್ರದ ಸದಸ್ಯರಾದ ಸಿ. ಪುಟ್ಟರಂಗ ಶೆಟ್ಟಿ, ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಮಾನಸ, ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಉಪಾಧ್ಯಕ್ಷರಾದ ಡಾ. ಪುಷ್ಪ ಅಮರನಾಥ್, ಚಾಮರಾಜನಗರ ಲೋಕಸಭಾ ಕ್ಷೇತ್ರದ ಸದಸ್ಯರಾದ ಸುನೀಲ್ ಬೋಸ್, ಮೈಸೂರು -ಕೊಡಗು ಲೋಕಸಭಾ ಕ್ಷೇತ್ರದ ಸದಸ್ಯರಾದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಭಾಗವಹಿಸಲಿದ್ದಾರೆ.
ನರಸಿಂಹರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ತನ್ವೀರ್ ಸೇಠ್, ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಜಿ.ಟಿ. ದೇವೇಗೌಡ, ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ. ಹರೀಶ್ ಗೌಡ, ಕೃ?ರಾಜನಗರ ವಿಧಾನಸಭಾ ಶಾಸಕರಾದ ರವಿಶಂಕರ್ ಡಿ., ಕೃ?ರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ಟಿ.ಎಸ್. ಶ್ರೀವತ್ಸ, ನಂಜನಗೂಡು ವಿಧಾನಸಭಾ ಕ್ಷೇತ್ರದ ಶಾಸಕರಾದ ದರ್ಶನ್ ಧ್ರುವನಾರಾಯಣ್, ಹುಣಸೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಜಿ.ಡಿ. ಹರೀಶ್ ಗೌಡ, ಹನೂರು ವಿಧಾನ ಸಭಾ ಕ್ಷೇತ್ರದ ಶಾಸಕರಾದ ವಿವೇಕಾನಂದ, ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಆರ್. ಕೃಷ್ಣಮೂರ್ತಿ, ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಗಣೇಶ ಪ್ರಾಸಾದ್ ಹಾಗೂ ವಿಧಾನ ಪರಿ?ತ್ ಸದಸ್ಯರುಗಳಾದ ಹೆಚ್. ವಿಶ್ವನಾಥ್, ಡಾ. ಡಿ. ತಿಮ್ಮಯ್ಯ, ಸಿ.ಎನ್. ಮಂಜೇಗೌಡ, ಮಧು ಜಿ. ಮಾದೇಗೌಡ, ಡಾ. ಯತಿಂದ್ರ ಎಸ್., ಮತ್ತು ವಿವೇಕಾನಂದ ಎಸ್. ಅವರು ಸಮಾರಂಭದ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.
ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷರಾದ ಅಯೂಬ್ ಖಾನ್ ಹಾಗೂ ಕಾವೇರಿ ಜಲಾನಯನ ಯೋಜನೆಯ ಅಚ್ಚುಕಟ್ಟು ಪ್ರಾಧಿಕಾರದ ಅಧ್ಯಕ್ಷರಾದ ಮರಿಸ್ವಾಮಿ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಬೀಚನಹಳ್ಳಿ ಗ್ರಾಮ ಪಂಚಾಯಿತಿಯ ಅಧ್ಯಕ್ಷರಾದ ರತ್ನಮ್ಮ ನಾಗನಾಯಕ, ಬೀಚನಹಳ್ಳಿ ಗ್ರಾಮ ಪಂಚಾಯಿತಿಯ ಉಪಾಧ್ಯಕ್ಷರಾದ ಬಸವರಾಜು ನಾಯಕ ಅವರನ್ನು ಆಹ್ವಾನಿಸಲಾಗಿದೆ. ವಿಶೇಷ ಆಹ್ವಾನಿತರಾಗಿ ಜಲಸಂಪನ್ಮೂಲ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಾದ ಗೌರವ್ ಗುಪ್ತ, ಮೈಸೂರು ಜಿಲ್ಲೆಯ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಎಸ್. ಸೆಲ್ವಕುಮಾರ್, ಚಾಮರಾಜನಗರ ಜಿಲ್ಲೆಯ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಡಾ. ಎಂ.ವಿ. ವೆಂಕಟೇಶ್, ಮೈಸೂರಿನ ಪ್ರಾದೇಶಿಕ ಆಯುಕ್ತರಾದ ಡಿ.ಎಸ್. ರಮೇಶ್ , ಮೈಸೂರಿನ ಜಿಲ್ಲಾಧಿಕಾರಿಗಳಾದ ಜಿ. ಲಕ್ಷೀಕಾಂತ ರೆಡ್ಡಿ, ಚಾಮರಾಜನಗರ ಜಿಲ್ಲಾಧಿಕಾರಿಗಳಾದ ಶಿಲ್ಪನಾಗ್, ಮೈಸೂರಿನ ಪೊಲೀಸ್ ವರಿಷ್ಠಾಧಿಕಾರಿಗಳಾದ ಎನ್. ವಿಷ್ಣುವರ್ಧನ್, ಚಾಮರಾಜನಗರ ಪೊಲೀಸ್ ವರಿಷ್ಠಾಧಿಕಾರಿಗಳಾದ ಡಾ. ಬಿ.ಟಿ.ಕವಿತಾ, ಮೈಸೂರು ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿಗಳಾದ ಎಸ್.ಯುಕೇಶ್ ಕುಮಾರ್, ಚಾಮರಾಜನಗರ ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿಗಳಾದ ಮೋನಾ ರಾವುತ್ ಅವರು ವಿಶೇಷ ಆಹ್ವಾನಿತರಾಗಿ ಭಾಗವಹಿಸಲಿದ್ದಾರೆ.














