ಮನೆ ಕಾನೂನು ನಿಯಮ ಉಲ್ಲಂಘಿಸಿದ ದ್ವಿಚಕ್ರ ವಾಹನಗಳಿಗೆ ಬಿಸಿ ಮುಟ್ಟಿಸಿದ ಅಧಿಕಾರಿ

ನಿಯಮ ಉಲ್ಲಂಘಿಸಿದ ದ್ವಿಚಕ್ರ ವಾಹನಗಳಿಗೆ ಬಿಸಿ ಮುಟ್ಟಿಸಿದ ಅಧಿಕಾರಿ

0

ದಾಂಡೇಲಿ: ದಾಂಡೇಲಿ ನಗರ ಠಾಣೆಯ ತನಿಖಾ ವಿಭಾಗದ ಪಿಎಸ್ಐ ಕಿರಣ್ ಪಾಟೀಲ್ ಅವರ ನೇತೃತ್ವದಲ್ಲಿ ನಗರದ ವಿವಿಧೆಡೆ ಶನಿವಾರ ಕಾರ್ಯಾಚರಣೆಯನ್ನು ನಡೆಸಿ ಸಂಚಾರಿ ನಿಯಮಗಳನ್ನು ಉಲ್ಲಂಘಿಸಿದ 25 ದ್ವಿಚಕ್ರ ವಾಹನಗಳಿಗೆ ದಂಡ ವಿಧಿಸಿ, ಎಚ್ಚರಿಕೆ ನೀಡಿದ ಘಟನೆ ಶನಿವಾರ ನಡೆದಿದೆ.

Join Our Whatsapp Group

ನಗರದ ಆಯಕಟ್ಟಿನ ಸ್ಥಳಗಳಲ್ಲಿ ಬೆಳಗಿನಿಂದಲೆ ವಿವಿಧ ವಾಹನಗಳ ತಪಾಸಣೆಯನ್ನು ನಡೆಸಲಾಗಿತ್ತು.‌ ಈ ತಪಾಸಣೆ ಕಾರ್ಯದಲ್ಲಿ ಸಂಚಾರಿ ನಿಯಮಗಳನ್ನು ಉಲ್ಲಂಘಿಸಿದ ಒಟ್ಟು 25 ದ್ವಿಚಕ್ರ ವಾಹನಗಳಿಗೆ ಒಟ್ಟು ರೂ.14,000/- ದಂಡ ವಿಧಿಸಲಾಗಿದೆ.

ಸಮರ್ಪಕ ದಾಖಲೆ ಪತ್ರಗಳಿಲ್ಲದೆ ಇರುವುದು, ವಾಹನ ಚಾಲನಾ ಪರವಾನಿಗೆ ಇಲ್ಲದೇ ಇರುವುದು, ಮೂವರನ್ನು ಕೂಡಿಸಿಕೊಂಡು ಬೈಕ್ ಚಲಾಯಿಸುವುದು ಸೇರಿದಂತೆ ವಿವಿಧ ಸಂಚಾರಿ ನಿಯಮಗಳ ಉಲ್ಲಂಘನೆಯನ್ನು ಮಾಡಿರುವುದನ್ನು ಗಮನಿಸಿ ಸೂಕ್ತ ದಂಡವನ್ನು ಆಕರಣೆ ಮಾಡಲಾಯ್ತು. ಇದೇ ಸಂದರ್ಭದಲ್ಲಿ ಪಿಎಸ್ಐ ಕಿರಣ್ ಪಾಟೀಲ್ ಅವರು ಸಂಚಾರಿ ನಿಯಮಗಳ ಪಾಲನೆಯ ಕುರಿತಂತೆ ಮನವರಿಕೆ ಮಾಡಿ ಮುಂದಿನ ದಿನಗಳಲ್ಲಿ ಈ ರೀತಿ ಆಗದಂತೆ ಎಚ್ಚರಿಕೆಯನ್ನು ನೀಡಿದರು.

ಕಾರ್ಯಾಚರಣೆಯಲ್ಲಿ ನಗರ ಠಾಣೆಯ ಪೊಲೀಸರು ಭಾಗವಹಿಸಿದ್ದರು.