ಮನೆ ಕಾನೂನು ಅಕ್ರಮ ಮರಳು ಅಡ್ಡೆಗಳ ಮೇಲೆ ಅಧಿಕಾರಿಗಳ ದಾಳಿ

ಅಕ್ರಮ ಮರಳು ಅಡ್ಡೆಗಳ ಮೇಲೆ ಅಧಿಕಾರಿಗಳ ದಾಳಿ

0

ಮುಧೋಳ: ಅಕ್ರಮ ಮರಳು ಅಡ್ಡೆಗಳ ಮೇಲೆ ದಾಳಿ‌ ನಡೆಸಿರುವ ಅಧಿಕಾರಿಳು ಅಕ್ರಮ ಮರಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

Join Our Whatsapp Group

ತಾಲೂಕಿನಲ್ಲಿ ಅವ್ಯಾಹತವಾಗಿ ನಡೆಯುತ್ತಿದ್ದ ಅಕ್ರಮ ಮರಳುಗಾರಿಕೆ ಕುರಿತು ಸರಣಿ ವರದಿ ಆರಂಭಿಸಿದ್ದ ಉದಯವಾಣಿ ವರದಿಯಿಂದ ಎಚ್ಚತ್ತಿರುವ ಅಧಿಕಾರಿಗಳು ತಾಲೂಕಿನ‌ ವಿವಿಧ ಭಾಗಗಳಲ್ಲಿ ಸಂಗ್ರಹ ಮಾಡಿರುವ ಅಕ್ರಮ ಮರಳು ಅಡ್ಡೆಗಳ ಮೇಲೆ‌ ದಾಳಿ ನಡೆಸಿದ್ದಾರೆ.

ಒಂಟಗೋಡಿ ಗ್ರಾಮದ ಹಾಗೂ ನಾಗರಾಳ ಗ್ರಾಮಗಳ ಅಡ್ಡೆಗಳ ಮೇಲೆ‌ ದಾಳಿ ನಡೆಸಿರುವ ಅಧಿಕಾರಿಗಳು ಮರಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಕಂದಾಯ ಇಲಾಖೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಹಾಗೂ ಪಿಡಬ್ಲ್ಯೂಡಿ ಇಲಾಖೆ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ಮರಳು ವಶಕ್ಕೆ ಪಡೆದುಕೊಂಡಿದ್ದಾರೆ.