ಮನೆ ಕಾನೂನು ಲೋಕಾಯುಕ್ತ ಪ್ರಕರಣದಲ್ಲಿ ಸಿಕ್ಕಿಬಿದ್ದ ಅಧಿಕಾರಿಗಳ ಆರೋಪ ಸಾಬೀತಾದರೆ ಕಡ್ಡಾಯ ನಿವೃತ್ತಿ

ಲೋಕಾಯುಕ್ತ ಪ್ರಕರಣದಲ್ಲಿ ಸಿಕ್ಕಿಬಿದ್ದ ಅಧಿಕಾರಿಗಳ ಆರೋಪ ಸಾಬೀತಾದರೆ ಕಡ್ಡಾಯ ನಿವೃತ್ತಿ

0

ಬೆಂಗಳೂರು: ಲೋಕಾಯುಕ್ತ ಪ್ರಕರಣದಲ್ಲಿ ಸಿಕ್ಕಿಬಿದ್ದ ಅಧಿಕಾರಿಗಳ ಆರೋಪ ಸಾಬೀತಾದರೆ ಕಡ್ಡಾಯ ನಿವೃತ್ತಿಗೆ ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ ಎಂದು ತಿಳಿದುಬಂದಿದೆ.

ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ರಾಜ್ಯ ಸಚಿವ ಸಂಪುಟದಲ್ಲಿ ಸುಮಾರು 16 ವಿಷಯಗಳ ಮೇಲೆ ಚರ್ಚೆ ನಡೆಯಿತು.

ಪ್ರಮುಖವಾಗಿ ಲೋಕಾಯುಕ್ತ ಕೇಸ್ ನಲ್ಲಿ ತಪ್ಪಿತಸ್ಥ ಅಧಿಕಾರಿಗಳಿಗೆ ಕಡ್ಡಾಯ ನಿವೃತ್ತಿ ನೀಡುವ ಬಗ್ಗೆಯೂ ಚರ್ಚೆಯಾಗಿ, ಈ ನಿಟ್ಟಿನಲ್ಲಿಯೂ ಸಂಪುಟ ಸಭೆ ಸಮ್ಮತಿ ಸೂಚಿಸಿದೆ.

ಲೋಕಾಯುಕ್ತ ಪ್ರಕರಣ ಸಂಬಂಧ ವಾಣಿಜ್ಯ ತೆರಿಗೆ ಇಲಾಖೆ ಸಹಾಯಕ ಆಯುಕ್ತ ಡಾ.ಎಂ.ಹೆಚ್.ನಾಗೇಶ್ ಅವರಿಗೆ 5 ವರ್ಷ ಶಿಕ್ಷೆ ಪ್ರಕಟವಾಗಿರುವ ಹಿನ್ನೆಲೆಯಲ್ಲಿ ಸರ್ಕಾರಿ ಸೇವೆಯಿಂದ ವಜಾ ಮಾಡಲು ನಿರ್ಣಯ ಕೈಗೊಳ್ಳಲಾಗಿದೆ.

ಲೋಕಾಯುಕ್ತ ಕೇಸ್ ನಲ್ಲಿ ಸಿಕ್ಕಿಬಿದ್ದು, ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ರಾಮನಗರ ಜಿಲ್ಲಾ ಆಸ್ಪತ್ರೆ ಸ್ತ್ರೀ ರೋಗ ತಜ್ಞೆ ಡಾ.ಉಷಾ ಕದರಮಂದಲಗಿ, ಇಂದಿರಾ ನಗರ ಆಸ್ಪತ್ರೆಯ ಸ್ತ್ರೀ ರೋಗ ತಜ್ಞೆ ಡಾ.ಎಸ್.ಟಿ.ನಾಗಮಣಿ ಅವರ ಕಡ್ಡಾಯ ನಿವೃತ್ತಿಗೆ ಸಂಪುಟ ನಿರ್ಣಯ ಕೈಗೊಂಡಿದೆ.

ಹಿಂದಿನ ಲೇಖನಹಾವೇರಿ: ಬೈಕ್‌ ನಲ್ಲಿ ಬಂದ ದುಷ್ಕರ್ಮಿಗಳಿಂದ ವ್ಯಕ್ತಿಯೋರ್ವನಿಗೆ ಚೂರಿ ಇರಿತ
ಮುಂದಿನ ಲೇಖನಡಿ.ಕೆ ಶಿವಕುಮಾರ್ ವಿರುದ್ಧ ಕಮಿಷನ್ ಆರೋಪ: ಕೆಂಪಣ್ಣ ಪ್ರಧಾನಿಗೆ ಪತ್ರ ಬರೆಯಲಿ ಎಂದು ಮಾಜಿ ಸಚಿವ ಆರ್.ಅಶೋಕ್