ಮನೆ ಸ್ಥಳೀಯ ಗ್ಯಾರಂಟಿ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪಿಸುವಲ್ಲಿ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಿ: ಎಸ್. ಅರುಣ್ ಕುಮಾರ್

ಗ್ಯಾರಂಟಿ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪಿಸುವಲ್ಲಿ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಿ: ಎಸ್. ಅರುಣ್ ಕುಮಾರ್

0

ಮೈಸೂರು ಡಿ.30: ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಾದ ಪಂಚ ಗ್ಯಾರಂಟಿ ಯೋಜನೆಗಳನ್ನು ಎಲ್ಲಾ ಅರ್ಹ ಫಲಾನುಭವಿಗಳಿಗೆ ತಲುಪಿಸಲು ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಎಸ್ ಅರುಣ್ ಕುಮಾರ್ ಅವರು ಅಧಿಕಾರಿಗಳಿಗೆ  ನಿರ್ದೇಶಿಸಿದರು.

Join Our Whatsapp Group

ಇಂದು ಜಿಲ್ಲಾ ಪಂಚಾಯತ್ ನ ಡಿ. ದೇವರಾಜು ಅರಸು ಸಭಾಂಗಣ ದಲ್ಲಿ ನಡೆದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಂಬಂಧ ಅಧಿಕಾರಿಗಳೊಂದಿಗೆ  ಸಭೆ ನಡೆಸಿ ಮಾತನಾಡಿದ ಅವರು, ಗೃಹಲಕ್ಷ್ಮಿ, ಅನ್ನಭಾಗ್ಯ, ಶಕ್ತಿ, ಗೃಹಜ್ಯೋತಿ ಹಾಗೂ ಯುವನಿಧಿ ಗ್ಯಾರಂಟಿ ಯೋಜನೆಗಳು ರಾಜ್ಯದ ಎಲ್ಲಾ ಅರ್ಹರಿಗೂ ತಲುಪಬೇಕು ಎಂದು ಹೇಳಿದರು.

ರಾಜ್ಯಸರ್ಕಾರ ಅಧಿಕಾರಕ್ಕೆ ಬಂದ ಮೂರು ತಿಂಗಳೊಳಗೆ ಐದು ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನ ಮಾಡಿದ್ದು, ಅನುಷ್ಠಾನ ಪ್ರಾಧಿಕಾರದವರು ಅಧಿಕಾರಿಗಳೊಂದಿಗೆ ಕೈ ಜೋಡಿಸಿ, ವಿಶ್ವಾಸಕ್ಕೆ ಪಡೆದು ಯೋಜನೆಯನ್ನು ಪರಿಣಾಮಕಾರಿಯಾಗಿ ಜಾರಿ ಮಾಡಬೇಕು ಎಂದು ಜಿಲ್ಲಾಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರು ಹಾಗೂ ಸದಸ್ಯರಿಗೆ ತಿಳಿಸಿದರು.

ಸಾರ್ವಜನಿಕರು ಪಂಚ ಗ್ಯಾರೆಂಟಿ ಯೋಜನೆಗಳಿಗೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಹಲವಾರು ತಾಂತ್ರಿಕ ಸಮಸ್ಯೆ ಸೇರಿದಂತೆ ಇನ್ನಿತರೆ ತೊಡಕುಗಳನ್ನು ಎದುರಿಸುತ್ತಿದ್ದು,  ಈ ನಿಟ್ಟಿನಲ್ಲಿ ಅಧಿಕಾರಿಗಳು ಗಮನಹರಿಸಿ ಸಮಸ್ಯೆಗಳನ್ನು ಪರಿಹರಿಸುವಂತೆ ಸದಸ್ಯರಿಗೆ ತಿಳಿಸಿದರು.

 ಜಿಲ್ಲಾ ಪಂಚಾಯತ್ನ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಕೆ. ಎಂ ಗಾಯತ್ರಿ ಅವರು ಮಾತನಾಡಿ, ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಫಲಾನುಭವಿಗಳಿಗೆ ತಲುಪಿಸುವ ಕೆಲಸ ಮಾಡಬೇಕು. ಫಲಾನುಭವಿಗಳಿಗೆ ಸಮಸ್ಯೆ ಉಂಟಾದರೆ ಅಧಿಕಾರಿಗಳು ಅದನ್ನು ಬಗೆಹರಿಸುವ ಕಾರ್ಯ ಮಾಡಬೇಕು. ತಾಲ್ಲೂಕುವಾರು ಯಾವುದೇ ಯೋಜನೆಯ ಫಲಾನುಭವಿ, ಯೋಜನೆಯಿಂದ ಹೊರಗೆ ಉಳಿಯದಂತೆ ಅಧಿಕಾರಿಗಳು ಜಾಗೃತಿಯಿಂದ ಕೆಲಸ ನಿರ್ವಹಿಸಬೇಕು. ಪ್ರತಿ ತಾಲ್ಲೂಕು ಪಂಚಾಯತ್ ಗಳಲ್ಲಿ ಸಾಮಾನ್ಯ ಸಭೆಗಳನ್ನು ನಡೆಸಿ, ತಳಮಟ್ಟದಲ್ಲಿರುವ ಲೋಪ ದೋಷಗಳನ್ನು ಸರಿಪಡಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಗೃಹ ಲಕ್ಷ್ಮಿ , ಗೃಹ ಜ್ಯೋತಿ, ಶಕ್ತಿ , ಅನ್ನ ಭಾಗ್ಯ  ಹಾಗೂ ಯುವನಿಧಿ ಯೋಜನೆ ಜಿಲ್ಲೆಯ ಪ್ರತಿಯೊಂದು ತಾಲ್ಲೂಕಿನಲ್ಲಿ ಎಲ್ಲಾ ಯೋಜನೆಗಳನ್ನು

ಸಮರ್ಪಕವಾಗಿ ಜಾರಿಗೊಳಿಸುವಲ್ಲಿ  ಗ್ಯಾರಂಟಿ ಯೋಜನೆಯ  ಅಧ್ಯಕ್ಷರು ಹಾಗೂ ಸರ್ವ ಸದಸ್ಯರು ಕೂಡಿ ಜನರ ಸಮಸ್ಯೆ ಮತ್ತು ಕುಂದು ಕೊರತೆಗಳ ಬಗೆಹರಿಸುವ ಕುರಿತು ಸಭೆಗಳನ್ನು ಹಮ್ಮಿಕೊಳ್ಳಬೇಕು ಎಂದು ತಿಳಿಸಿದರು.

ಶಕ್ತಿಯೋಜನೆಯಡಿ ಈವರೆಗೆ ಜಿಲ್ಲೆಯಲ್ಲಿ ಶೇ. 65.91 ರಷ್ಟು  ಮಹಿಳೆಯರು ಸರ್ಕಾರಿ ಬಸ್‌ನಲ್ಲಿ ಪ್ರಯಾಣಿಸಿದ್ದು, ಈ ಯೋಜನೆಯಲ್ಲಿ 52,789 ಲಕ್ಷ ರೂ. ಸಾರಿಗೆ ಸಂಸ್ಥೆಗೆ ಆದಾಯ ಸಂದಿದೆ ಎಂದು ತಿಳಿಸಿದರು.

ಯುವನಿಧಿ ಯೋಜನೆಯಡಿ 2023 ಹಾಗೂ 2024 ಶೈಕ್ಷಣಿಕ ವರ್ಷದಲ್ಲಿ ಡಿಗ್ರಿ – ಡಿಪ್ಲೋಮ ವಿದ್ಯಾರ್ಹತೆ ಹೊಂದಿರುವ ನಿರುದ್ಯೋಗ ಯುವಕ ಯುವತಿಯರು ಆನ್ಲೈನ್ ನಲ್ಲಿ  ಸೇವಾಸಿಂಧು ವೆಬ್ಸೈಟ್ ಮೂಲಕ ಈಗಲೂ ನೊಂದಣಿಯಾಗಬಹುದಾಗಿದ್ದು, ಪ್ರತಿ ತಿಂಗಳು ಸ್ವಯಂ ಘೋಷಣೆ ಮಾಡಿಸುವುದು ಕಡ್ಡಾಯ. ಜಿಲ್ಲೆಯಲ್ಲಿ ಒಟ್ಟು 7453 ಡಿಫ್ಲೋಮ, ಪದವೀಧರರು ಯುವನಿಧಿ ಯೋಜನೆಗೆ ನೋಂದಣಿ ಮಾಡಿಸಿಕೊಂಡಿದ್ದಾರೆ. ಯುವ ನಿಧಿ ಯೋಜನೆಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಅರ್ಹ ನಿರುದ್ಯೋಗಿ ಫಲಾನುಭವಿಗಳನ್ನು ಆಯ್ಕೆ ಮಾಡಿದ್ದು, ಇನ್ನೂ ಬಾಕಿ ಇರುವ ಅರ್ಹ ಫಲಾನುಭವಿಗಳನ್ನು ನೊಂದಾಯಿಸಲು ತಿಳಿಸಿದರು.

ಸರ್ಕಾರದ ಮಹತ್ವಕಾಕ್ಷಿ ಯೋಜಾನೆಯಾದ ಅನ್ನಭಾಗ್ಯ  ಯೋಜನೆಯಡಿ 2023 ರ ಜುಲೈ ಮಾಹೆಯಿಂದ ಡಿ.ಪಿ.ಟಿ. ಮೂಲಕ ನೇರ ಹಣದ ವರ್ಗಾವಣೆಯಾಗುತ್ತಿದ್ದು, ಜುಲೈ 2023 ರಿಂದ ಆಗಸ್ಟ್ – 2024 ರ ವರೆಗೆ ಒಟ್ಟು 471 ಕೋಟಿ ರೂ. ಗಳು ಪಡಿತರ ಚೀಟಿದಾರರ ಮುಖ್ಯಸ್ಥರ ಖಾತೆಗೆ ನೇರವಾಗಿ ಹಣ ಜಮಾ ಆಗಿರುತ್ತದೆ. ನ್ಯಾಯ ಬೆಲೆ ಅಂಗಡಿಗಳಲ್ಲಿ ನಿಗದಿತ  ಸಮಯದಲ್ಲಿ ಪಡಿತರವನ್ನು ನೀಡಬೇಕು ಎಂಬುದರ ಬಗ್ಗೆ ಅಧಿಕಾರಿಗಳು ಗಮನ ವಹಿಸಬೇಕು. ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಗ್ಯಾರಂಟಿ ಯೋಜನೆಗಳು ಜನರಿಗೆ ತಲುಪುವಲ್ಲಿ ಪ್ರತಿ ತಾಲ್ಲೂಕಿನಲ್ಲಿ ಸಭೆ ನಡೆಸುವಂತೆ  ಅಧಿಕಾರಿಗಳಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಎಸ್. ಅರುಣ್ ಕುಮಾರ್ ಅವರು 2024 ನೆೇ ಸಾಲಿನ ಯುವನಿಧಿ ಪೋಸ್ಟರ್  ಮತ್ತು ಬ್ಯಾನರ್ ಬಿಡುಗಡೆ ಮಾಡಿದರು.

ಸಭೆಯಲ್ಲಿ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಯ ಅಧ್ಯಕ್ಷರು ಹಾಗೂ  ಸದಸ್ಯರು,  ವಿವಿಧ ಇಲಾಖೆಯ  ಅಧಿಕಾರಿಗಳು, ಎಲ್ಲಾ ತಾಲ್ಲೂಕಿನ ತಾಲ್ಲೂಕು ಮಟ್ಟದ ಅಧಿಕಾರಿಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.