ಮನೆ ಸುದ್ದಿ ಜಾಲ ಸಾರ್ವಜನಿಕರ ಹಿತಾಸಕ್ತಿಗೆ ಅನುಗುಣವಾಗಿ ಅಧಿಕಾರಿಗಳು ಕೆಲಸ ಮಾಡಲು ಮುಂದಾಗಿ: ಡಾ ಕೆ.ವಿ.ರಾಜೇಂದ್ರ

ಸಾರ್ವಜನಿಕರ ಹಿತಾಸಕ್ತಿಗೆ ಅನುಗುಣವಾಗಿ ಅಧಿಕಾರಿಗಳು ಕೆಲಸ ಮಾಡಲು ಮುಂದಾಗಿ: ಡಾ ಕೆ.ವಿ.ರಾಜೇಂದ್ರ

0

ಮೈಸೂರು: ಸಾರ್ವಜನಿಕ ಹಿತಾಸಕ್ತಿಗೆ ಅನುಗುಣವಾಗಿ ಅಧಿಕಾರಿಗಳು ಸಾರ್ವಜನಿಕ ಕೆಲಸಗಳನ್ನು ಮಾಡದಿದ್ದಲ್ಲಿ ಅಂತಹ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕ್ಕೆ  ಶಿಫಾರಸ್ಸು ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ವಿ .ರಾಜೇಂದ್ರ ತಾಕೀತು ಮಾಡಿದರು.

ತಾಲೂಕಿನ ಕೊಡಗಳ್ಳಿ ಗ್ರಾಮದಲ್ಲಿ ನಡೆದ “ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ”ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಹಲವು ಇಲಾಖೆಗಳಲ್ಲಿ ಅಧಿಕಾರಿಗಳು ಸಾರ್ವಜನಿಕರ ಕೆಲಸ ಮಾಡಲು ತಾತ್ಸಾರ ಮನೋಭಾವ ತೋರುತ್ತಿರುವುದು ಗಮನಕ್ಕೆ ಬಂದಿದ್ದು,ನಿಗದಿತ ಸಮಯದೊಳಗೆ ಸಾರ್ವಜನಿಕ ಕೆಲಸ ಮಾಡದ ಅಧಿಕಾರಿಗಳ ಮೇಲೆ ಯಾವುದೇ ಮುಲಾಜಿಲ್ಲದೆ ಶಿಸ್ತು ಕ್ರಮಕ್ಕೆ ಶಿಫಾರಸ್ಸು ಮಾಡಲಾಗುವುದು ಎಂದು ಅವರು.ತಿಳಿಸಿದರು.

ಗ್ರಾಮೀಣ ಪ್ರದೇಶದ ಜನರ ಸಮಸ್ಯೆಗಳನ್ನು ಆಲಿಸಿ ಬಗೆಹರಿಸುವ ನಿಟ್ಟಿನಲ್ಲಿ ಸರ್ಕಾರ ಈ ಯೋಜನೆಯನ್ನು ಜಾರಿಗೆ ತಂದಿದ್ದು,60-70ರಷ್ಟು ಸಮಸ್ಯೆಗಳನ್ನು ಅಧಿಕಾರಿಗಳ ಸಮ್ಮುಖದಲ್ಲಿ ಸ್ಥಳದಲ್ಲೇ ಬಗೆಹರಿಸಲಾಗುವುದು.ಜಟಿಲ ಸಮಸ್ಯೆಗಳನ್ನು  ಪರಿಶೀಲಿಸಿ ಅಧಿಕಾರಿಗಳ ಜೊತೆ ಚರ್ಚಿಸಿ ಸೂಕ್ತ ಕ್ರಮಕೈಗೊಳ್ಳಲಾಗುವುದು. ಆರ್. ಟಿ. ಸಿ ತಿದ್ದುಪಡಿ,ಸ್ಮಶಾನ ಸ್ಥಳ ನಿಗದಿ, ಪಿಂಚಣಿ ಸೌಲಭ್ಯ,ಅಂಗನವಾಡಿ ಕೇಂದ್ರ ನಿರ್ಮಾಣ,ರಸ್ತೆ ನಿರ್ಮಾಣ ಸೇರಿದಂತೆ ಸಮುದಾಯಕ್ಕೆ ಸಂಬಂಧಪಟ್ಟ ವಿಚಾರಗಳನ್ನು ಚರ್ಚಿಸಲಾಗುವುದು ಎಂದರು.

‘ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ’ ಒಂದು ಉತ್ತಮ ಕಾರ್ಯಕ್ರಮವಾಗಿದ್ದು,ವೈಯುಕ್ತಿಕ  ಪ್ರತಿಷ್ಠೆಯನ್ನು ಬಿಟ್ಟು ಎಲ್ಲರು ಭಾಗವಹಿಸಿ ಕಾರ್ಯಕ್ರಮದ ಆಶಯವನ್ನು ಸದುಪಯೋಗಪಡಿಸಿಕೊಳ್ಳಲು ಶಾಸಕ ಎಂ. ಅಶ್ವಿನ್ ಕುಮಾರ್ ಜನತೆಯಲ್ಲಿ ಮನವಿ ಮಾಡಿದರು.

ಭತ್ತದ ಬೆಳೆ ಕಟಾವು ಬಗ್ಗೆ ಹಾಗೂ ಭತ್ತ ಖರೀದಿ ಕೇಂದ್ರ ತೆರೆಯುವ ಬಗ್ಗೆ ತಾಲೂಕಿನ ಹಲವು ಕಡೆ ಜಲ ಜೀವನ್ ಮಿಷನ್ ವತಿಯಿಂದ ಸರಿಯಾಗಿ ಕಾಮಗಾರಿ ನಿರ್ವಹಿಸುವ ಈ ಎಲ್ಲ ಸಮಸ್ಯೆಗಳ ಬಗ್ಗೆ ಸಭೆಯಲ್ಲಿ ಪ್ರಸ್ತಾಪಿಸಲಾಯಿತು.

ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿಗಳು ಭತ್ತ ಖರೀದಿ ಹಣ ಬಟಾವಡೆಗೆ ಕ್ರಮ ವಹಿಸಲಾಗುವುದು. ಜಲ ಜೀವನ್ ಕಾಮಗಾರಿಗಳ ಸ್ಥಳ ಪರಿಶೀಲನೆ ಲೋಪ ಕಂಡುಬಂದಲ್ಲಿ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದರು.

ಕಂದಾಯ ಇಲಾಖೆಯ ವತಿಯಿಂದ ಸಾಮಾಜಿಕ ಭದ್ರತೆ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ಆದೇಶ ಪ್ರತಿಗಳನ್ನು ವಿತರಿಸಲಾಯಿತು.

ಗ್ರಾ .ಪಂ .ಅಧ್ಯಕ್ಷ ಧನಂಜಯ ಪಾಪಣ್ಣ ,ಉಪಾಧ್ಯಕ್ಷೆ ನಂದಿನಿ,ಉಪ ವಿಭಾಗಾಧಿಕಾರಿ ರಕ್ಷಿತ್, ಜಿಲ್ಲಾ ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿ ಗಾಯತ್ರಿ,ಮಾಜಿ ಜಿ .ಪಂ.ಸದಸ್ಯ ಜಯಪಾಲ್ ಭರಣಿ ,ಭೂ ದಾಖಲೆಗಳ ಉಪ ನಿರ್ದೇಶಕರು ಶ್ರೀಮಂತಿನಿ,ಜಿಲ್ಲಾ ಅರೋಗ್ಯಅಧಿಕಾರಿ ಪ್ರಸಾದ್ ಹಾಗೂ ಇತರರು ಹಾಜರಿದ್ದರು.

ಹಿಂದಿನ ಲೇಖನಹಾಸ್ಯ
ಮುಂದಿನ ಲೇಖನಮಾರ್ಚ್ 4 ರಂದು ಫಲಾನುಭವಿಗಳ ಸಮ್ಮೇಳನ