ಮನೆ ಅಂತಾರಾಷ್ಟ್ರೀಯ ನೈಜೀರಿಯಾದಲ್ಲಿ ತೈಲ ಟ್ಯಾಂಕರ್ ಸ್ಫೋಟ: 18 ಮಂದಿ ಸಾವು

ನೈಜೀರಿಯಾದಲ್ಲಿ ತೈಲ ಟ್ಯಾಂಕರ್ ಸ್ಫೋಟ: 18 ಮಂದಿ ಸಾವು

0

ಆಫ್ರಿಕನ್ ದೇಶ ನೈಜೀರಿಯಾದಲ್ಲಿ ತೈಲ ಟ್ಯಾಂಕರ್​ ಸ್ಫೋಟಗೊಂಡಿದ್ದು, 18 ಮಂದಿ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ.

Join Our Whatsapp Group

ಈ ಸ್ಫೋಟದಿಂದಾಗಿ 17 ವಾಹನಗಳು ಸುಟ್ಟು ಭಸ್ಮವಾಗಿವೆ. ಟ್ರಕ್‌ನ ಬ್ರೇಕ್ ವಿಫಲವಾಗಿದ್ದು, ಚಾಲಕನ ನಿಯಂತ್ರಣ ತಪ್ಪಿದ್ದ, ಇದರಿಂದಾಗಿ ಎಕ್ಸ್‌ಪ್ರೆಸ್‌ವೇಯಲ್ಲಿ ಸುಮಾರು 17 ವಾಹನಗಳಿಗೆ ಟ್ರಕ್ ಡಿಕ್ಕಿ ಹೊಡೆದಿದೆ. ಟ್ರೋಲ್ ತುಂಬಿದ ಟ್ಯಾಂಕರ್ ನಿಯಂತ್ರಣ ತಪ್ಪಿ 17 ವಾಹನಗಳಿಗೆ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡ ಘಟನೆ ಸಂಭವಿಸಿದೆ.

10 ಜನರಿಗೆ ಬಹು ಗಾಯಗಳಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇತರ ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಚಿಕಿತ್ಸೆ ನಂತರ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ಒಂದು ವಾರದ ಹಿಂದೆ ನೈಜೀರಿಯಾದಲ್ಲಿ ಇದೇ ರೀತಿಯ ಘಟನೆಯಲ್ಲಿ ಸುಮಾರು 100 ಜನರು ಸಾವನ್ನಪ್ಪಿದ್ದರು.

ಇತ್ತೀಚಿನ ಘಟನೆಯು ಜನವರಿ 25-26 ರ ತಡರಾತ್ರಿಯಲ್ಲಿ ನಡೆದಿದೆ. ಆಗ್ನೇಯ ರಾಜ್ಯವಾದ ಎನುಗುದಲ್ಲಿನ ಎನುಗು-ಒನಿತ್ಶಾ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ ಸಂಭವಿಸಿತ್ತು.