ಮೈಸೂರು(Mysuru): ಶಿವರಾಂಪೇಟೆಯಲ್ಲಿ ಬುಧವಾರ ಶಿಥಿಲಾವಸ್ಥೆ ತಲುಪಿದ ಹಳೆಯ ಕಟ್ಟಡವೊಂದು ಕುಸಿದಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಘಟನೆಯ ದೃಶ್ಯ ಮುಂಭಾಗದ ಅಂಗಡಿಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ತ್ರಿಪುರ ಭೈರವಿ ಮಠದ ವೀರಾಂಜನೇಯ ದೇವಸ್ಥಾನಕ್ಕೆ ಹೊಂದಿಕೊಂಡಂತಿದ್ದ ಕಟ್ಟಡ ಶಿಥಿಲಗೊಂಡಿತ್ತು. ಈ ಹಿಂದೆ ಕಟ್ಟಡದಲ್ಲಿ ಬಟ್ಟೆ ಅಂಗಡಿ ಇತ್ತು. ತ್ರಿಪುರ ಭೈರವಿ ಮಠ ಹಾಗೂ ಬಟ್ಟೆ ಅಂಗಡಿ ಮಾಲೀಕರ ನಡುವೆ ನ್ಯಾಯಾಲಯದಲ್ಲಿ ವ್ಯಾಜ್ಯ ನಡೆಯುತ್ತಿದ್ದು, ವಹಿವಾಟು ಸ್ಥಗಿತಗೊಂಡಿದೆ.
ನಿನ್ನೆ ಮಧ್ಯರಾತ್ರಿ ಕಟ್ಟಡ ಕುಸಿದು ಬಿದ್ದಿದೆ. ಯಾವಾಗಲೂ ಜನಜಂಗುಳಿಯಿಂದ ಕೂಡಿರುತ್ತಿದ್ದ ಪ್ರದೇಶವಾಗಿದ್ದು, ರಾತ್ರಿ ವೇಳೆ ಘಟನೆ ಸಂಭವಿಸಿದ್ದರಿಂದ ಅನಾಹುತ ತಪ್ಪಿದೆ.