ಮನೆ ರಾಜ್ಯ ಮೈಸೂರು: ಶಿಥಿಲಾವಸ್ಥೆಯಲ್ಲಿದ್ದ ಕಟ್ಟಡ ಕುಸಿತ

ಮೈಸೂರು: ಶಿಥಿಲಾವಸ್ಥೆಯಲ್ಲಿದ್ದ ಕಟ್ಟಡ ಕುಸಿತ

0

ಮೈಸೂರು(Mysuru): ಶಿವರಾಂಪೇಟೆಯಲ್ಲಿ ಬುಧವಾರ ಶಿಥಿಲಾವಸ್ಥೆ ತಲುಪಿದ ಹಳೆಯ ಕಟ್ಟಡವೊಂದು ಕುಸಿದಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಘಟನೆಯ ದೃಶ್ಯ ಮುಂಭಾಗದ ಅಂಗಡಿಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ತ್ರಿಪುರ ಭೈರವಿ ಮಠದ ವೀರಾಂಜನೇಯ ದೇವಸ್ಥಾನಕ್ಕೆ ಹೊಂದಿಕೊಂಡಂತಿದ್ದ ಕಟ್ಟಡ ಶಿಥಿಲಗೊಂಡಿತ್ತು. ಈ ಹಿಂದೆ ಕಟ್ಟಡದಲ್ಲಿ ಬಟ್ಟೆ ಅಂಗಡಿ ಇತ್ತು. ತ್ರಿಪುರ ಭೈರವಿ ಮಠ ಹಾಗೂ ಬಟ್ಟೆ ಅಂಗಡಿ ಮಾಲೀಕರ ನಡುವೆ ನ್ಯಾಯಾಲಯದಲ್ಲಿ ವ್ಯಾಜ್ಯ ನಡೆಯುತ್ತಿದ್ದು, ವಹಿವಾಟು ಸ್ಥಗಿತಗೊಂಡಿದೆ.

ನಿನ್ನೆ ಮಧ್ಯರಾತ್ರಿ ಕಟ್ಟಡ ಕುಸಿದು ಬಿದ್ದಿದೆ. ಯಾವಾಗಲೂ ಜನಜಂಗುಳಿಯಿಂದ ಕೂಡಿರುತ್ತಿದ್ದ ಪ್ರದೇಶವಾಗಿದ್ದು, ರಾತ್ರಿ ವೇಳೆ ಘಟನೆ ಸಂಭವಿಸಿದ್ದರಿಂದ ಅನಾಹುತ ತಪ್ಪಿದೆ.

ಹಿಂದಿನ ಲೇಖನಸಾಕ್ಷಿ ಇಲ್ಲದಿದ್ದರೂ ಜೀವಾವಧಿ ಶಿಕ್ಷೆ ಸಲ್ಲ ಎಂದ ಹೈಕೋರ್ಟ್‌; 13 ವರ್ಷ ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಖುಲಾಸೆ
ಮುಂದಿನ ಲೇಖನದಾವೋಸ್ ವಿಶ್ವ ಆರ್ಥಿಕ ಶೃಂಗಸಭೆ: ಪ್ರವಾಸವನ್ನು ವಿಸ್ತರಿಸಿದ ಸಿಎಂ, ಶುಕ್ರವಾರ ಬೆಂಗಳೂರಿಗೆ ವಾಪಸ್