ಪಾಂಡವಪುರ(Pandavapura): ಹಳೇ ವೈಷಮ್ಯದಿಂದಾಗಿ ಮೊಬೈಲ್ ಅಂಗಡಿ ಮಾಲೀಕನೊಬ್ಬನನ್ನು ರೌಡಿ ಶೀಟರ್ಗಳು ಕತ್ತು ಕುಯ್ದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಪಾಂಡವಪುರ ತಾಲ್ಲೂಕಿನ ನೀಲನಹಳ್ಳಿ ಗೇಟ್ ಬಳಿ ಗುರುವಾರ ರಾತ್ರಿ ನಡೆದಿದೆ.
ಲಕ್ಷ್ಮೀಸಾಗರ ಗ್ರಾಮದ ಧನು ಅಲಿಯಾಸ್ ಧನಂಜಯ ಕೊಲೆಯಾದ ಯುವಕ.
ನೀಲನಹಳ್ಳಿ ಸಮೀಪದ ಢಾಬಾದಲ್ಲಿ ರಾತ್ರಿ ಊಟ ಮುಗಿಸಿ ಮನೆಗೆ ತೆರಳುವಾಗ ದಾರಿ ಮಧ್ಯೆ ಧನಂಜಯ್ಯನನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು ಚಾಕುವಿನಿಂದ ಕುತ್ತಿಗೆಗೆ ಇರಿದು ಹತ್ಯೆ ಮಾಡಿದ್ದಾರೆ.
ಕೆಲ ದಿನಗಳ ಹಿಂದೆ ಜಾಮೀನಿನ ಮೇಲೆ ಜೈಲಿನಿಂದ ಹೊರ ಬಂದಿದ್ದ ರೌಡಿಶೀಟರ್ ತನ್ನ ಸಹಚರರೊಂದಿಗೆ ಕೊಲೆ ಮಾಡಿದ್ದಾನೆ ಎಂಬ ಅನುಮಾನ ವ್ಯಕ್ತವಾಗಿದ್ದು,
ಆರೋಪಿಗಳ ಪತ್ತೆಗೆ ಪೊಲೀಸರು ಜಾಲ ಬೀಸಿದ್ದಾರೆ. ಈ ಸಂಬಂಧ ಮೇಲುಕೋಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.