ಇಂದ್ರಜಿತ್ ಲಂಕೇಶ್ ನಿರ್ದೇಶನದ “ಗೌರಿ’ ಚಿತ್ರ ಆಗಸ್ಟ್ 15ರಂದು ತೆರೆಕಾಣುತ್ತಿದೆ. ಈ ಚಿತ್ರದ ಮೂಲಕ ಇಂದ್ರಜಿತ್ ಪುತ್ರ ಸಮರ್ಜಿತ್ ನಾಯಕರಾಗಿ ಎಂಟ್ರಿಕೊಡುತ್ತಿದ್ದಾರೆ.
ಈ ಕುರಿತು ಮಾತನಾಡುವ ಇಂದ್ರಜಿತ್, “ನಮ್ಮ ಗೌರಿ ಚಿತ್ರತಂಡ ಕರ್ನಾಟಕದಾದ್ಯಂತ ಸಂಚಾರ ಮಾಡುತ್ತಿದೆ. ಹಾಡುಗಳ ಮೂಲಕ ಈಗಾಗಲೇ ಜನರನ್ನು ತಲುಪಿರುವ ಗೌರಿ ಚಿತ್ರ ಇದೇ ಅಗಸ್ಟ್ 15 ರಂದು ರಾಜ್ಯಾದ್ಯಂತ ಬಿಡುಗಡೆಯಾಗು ತ್ತಿದೆ. ವರಮಹಾಲಕ್ಷ್ಮೀ, ಸ್ವಾತಂತ್ರ್ಯ ದಿನಾಚರಣೆ, ರಕ್ಷಾ ಬಂಧನ ಹೀಗೆ ಸಾಲುಸಾಲು ರಜೆ ದಿನಗಳು ಆ ಸಮಯದಲ್ಲಿದೆ. ಹಾಗಾಗಿ ಆಗಸ್ಟ್ 15 ದಿನಾಂಕವನ್ನು ಆಯ್ಕೆ ಮಾಡಿಕೊಂಡಿದ್ದೇವೆ. ಒಬ್ಬ ಪ್ರೇಕ್ಷಕನಾಗಿ ಸಿನಿಮಾ ನೋಡಿದಾಗ ನನಗೆ ಬಹಳ ಇಷ್ಟವಾಯಿತು. ಪ್ರೇಕ್ಷಕರಿಗೂ ನಮ್ಮ ಚಿತ್ರ ಮೆಚ್ಚುಗೆಯಾಗಲಿದೆ’ ಎಂದರು.
“ಅಪ್ಪ ಹೇಳಿದ ಹಾಗೆ ಹೋದ ಕಡೆಯಲ್ಲಾ ನಮ್ಮ ಚಿತ್ರಕ್ಕೆ ಪಾಸಿಟಿವ್ ರೆಸ್ಪಾನ್ಸ್ ಸಿಗುತ್ತಿದೆ. ಚಿತ್ರತಂಡದ ಸಹಕಾರದಿಂದ ಚಿತ್ರ ಚೆನ್ನಾಗಿ ಬಂದಿದೆ. ನನ್ನ ಹಲವು ವರ್ಷಗಳ ಶ್ರಮಕ್ಕೆ ಉತ್ತರ ಸಿಗುವ ದಿನ ಹತ್ತಿರ ಬಂದಿದೆ’ ಎಂದರು ನಾಯಕ ಸಮರ್ಜಿತ್ ಲಂಕೇಶ್.
ನಾಯಕಿ ಸಾನ್ಯಾ ಅಯ್ಯರ್ ಮಾತನಾಡಿ, “ಆಗಸ್ಟ್ 15 ನನ್ನ ಕನಸು ನನ್ನಸಾಗುವ ದಿನ. ಈ ದಿನಕ್ಕಾಗಿ ಕಾಯುತ್ತಿದೆ. ಅವಕಾಶ ನೀಡಿದ ಇಂದ್ರಜಿತ್ ಲಂಕೇಶ್ ಅವರಿಗೆ ಧನ್ಯವಾದ’ ಎಂದರು.