ಮನೆ ಸಾಹಿತ್ಯ ಜುಲೈ 23ಕ್ಕೆ ‘ಸಿದ್ದರಾಮಯ್ಯ ಆಡಳಿತ ನೀತಿ-ನಿರ್ಧಾರ’ ಕೃತಿ ಬಿಡುಗಡೆ

ಜುಲೈ 23ಕ್ಕೆ ‘ಸಿದ್ದರಾಮಯ್ಯ ಆಡಳಿತ ನೀತಿ-ನಿರ್ಧಾರ’ ಕೃತಿ ಬಿಡುಗಡೆ

0

ಮೈಸೂರು(Mysuru): ಸಿದ್ದರಾಮಯ್ಯ ಆಡಳಿತ ನೀತಿ-ನಿರ್ಧಾರ’ ಕೃತಿ ಬಿಡುಗಡೆ ಸಮಾರಂಭವನ್ನು ಜು.23 ರಂದು ಕಲಾಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜನಮನ ಪ್ರತಿಷ್ಠಾನದ ಅಧ್ಯಕ್ಷ ಲಕ್ಷ್ಮಣ ಕೊಡಸೆ ತಿಳಿಸಿದರು.

ಇಂದು ಸುದ್ದಿಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ ಅವರು, ಜನಮನ ಪ್ರತಿಷ್ಟಾನದಿಂದ ‘ಸಿದ್ಧರಾಮಯ್ಯ ಆಡಳಿತ ನೀತಿ-ನಿರ್ಧಾರ’ ಎಂಬ ತಾತ್ವಿಕ ವಿವೇಚನೆಯ ಕೃತಿಯನ್ನು ಸಿದ್ಧಪಡಿಸಲಾಗಿದೆ. ಈ ಕೃತಿಗೆ ನಾಡಿನ 27 ಮಂದಿ ಹಿರಿಯ-ಕಿರಿಯ ವಿದ್ವಾಂಸರು ಲೇಖನ ಒದಗಿಸಿದ್ದು, 440 ಪುಟಗಳನ್ನು ಒಳಗೊಂಡಿದೆ ಎಂದು ಹೇಳಿದರು.

ಅಂದು ಬೆಳಿಗ್ಗೆ 10-00 ಗಂಟೆಗೆ ಜನಪದ ಕಲೆಗಳ ಪ್ರದರ್ಶನಗಳೊಂದಿಗೆ ಪ್ರಾರಂಭವಾಗುತ್ತದೆ. ಸಮಾರಂಭದಲ್ಲಿ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು, ಶ್ರೀ ಡಾ|| ನಿರ್ಮಲಾನಂದ ಮಹಾಸ್ವಾಮಿಗಳು, ಶ್ರೀ ಶಿವನಂದಪುರಿ ಮಹಾಸ್ವಾಮಿಗಳ ಸಮ್ಮುಖದಲ್ಲಿ ರಾಜ್ಯಸಭೆಯ ವಿರೋಧಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಕೃತಿಯನ್ನು ಲೋಕಾರ್ಪಣೆ ಮಾಡಲಿದ್ದಾರೆ. ಸಮಾರಂಭದ ಅಧ್ಯಕ್ಷತೆಯನ್ನು ವಿಧಾನ ಪರಿಷತ್ತಿನ ಮಾಜಿ ಸಭಾಪತಿ ಡಾ. ಬಿ.ಎಲ್. ಶಂಕರ್‌ ವಹಿಸಲಿದ್ದಾರೆ. ವಿಶ್ರಾಂತ ಕುಲಪತಿ ಸಬೀಹಾ ಭೂಮಿಗೌಡ ಕೃತಿ ಪರಿಚಯ ಮಾಡಲಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಉಪಸ್ಥಿತರಿರುತ್ತಾರೆ.

ಮಧ್ಯಾಹ್ನ 3.30ರಿಂದ ‘ಸಮಕಾಲೀನ ಸಂವೇದನೆ’ ಎಂಬ ಸಂವಾದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಇದರಲ್ಲಿ ಗ್ರಂಥದ ಲೇಖಕರ ಜೊತೆಗೆ ಸುಮಾರು 70ಕ್ಕೂ ಹೆಚ್ಚಿನ ಸಂಖ್ಯೆಯ ಸಮಾಜ ಮತ್ತು ಸಂಸ್ಕೃತಿ ಚಿಂತಕರು ಹಾಗೂ ಯುವಜನರು ಭಾಗವಹಿಸಲಿದ್ದಾರೆ. ಈ ಸಂವಾದದಲ್ಲಿ ಸಿದ್ದರಾಮಯ್ಯ ಅವರು ಉಪಸ್ಥಿತರಿದ್ದು ಡಾ. ಬಂಜಗೆರೆ ಜಯಪ್ರಕಾಶ್ ಅವರು ಸಂವಾದವನ್ನು ನಡೆಸಿಕೊಡಲಿದ್ದಾರೆ.

ಪತ್ರಿಕಾಘೋಷ್ಠಿಯಲ್ಲಿ ಸಾಹಿತಿ ಕಾ.ತ. ಚಿಕ್ಕಣ್ಣ ಉಪಸ್ಥಿತರಿದ್ದರು.

ಹಿಂದಿನ ಲೇಖನಮಕ್ಕಳ ರಕ್ಷಣೆ ನಮ್ಮೆಲ್ಲರ ಹೊಣೆ: ಪೊಲೀಸ್ ಇನ್ಸ್ಪೆಕ್ಟರ್ ಮಮತಾ
ಮುಂದಿನ ಲೇಖನಇಡಿ ಯಿಂದ ಸೋನಿಯಾ ಗಾಂಧಿ ವಿಚಾರಣೆ: ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ