ಮನೆ ಸುದ್ದಿ ಜಾಲ ನ.19 ರಂದು ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ: ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಲು ಮನವಿ

ನ.19 ರಂದು ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ: ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಲು ಮನವಿ

0

ಮೈಸೂರು(Mysuru): ಕಂದಾಯ ಸಚಿವರಾದ ಆರ್. ಅಶೋಕ್ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿ ನಡೆ – ಹಳ್ಳಿ ಕಡೆ ಕಾರ್ಯಕ್ರಮವು ನವೆಂಬರ್ 19 ರಂದು ಹೆಚ್.ಡಿ.ಕೋಟೆ ತಾಲ್ಲೂಕಿನ ಕೆಂಚನಹಳ್ಳಿ ಗ್ರಾಮದಲ್ಲಿ ( ಭೀಮನಕೊಲ್ಲಿ ದೇವಸ್ಧಾನ ಆವರಣ) ನಡೆಸಲಾಗುತ್ತಿದೆ.

ಈ ಕಾರ್ಯಕ್ರಮದಲ್ಲಿ ಸರ್ಕಾರದ ವಿವಿಧ ಯೋಜನೆಗಳಿಗೆ ಸಂಬಂಧಿಸಿದಂತೆ ಮಾಹಿತಿ ನೀಡುವ ಮಳಿಗೆಗಳನ್ನು ಸ್ಧಾಪಿಸಲಾಗುತ್ತಿದೆ.

ಸದರಿ ಮಳಿಗೆಗಳಲ್ಲಿ ವಿವಿಧ ಯೋಜನೆಗಳಲ್ಲಿ ಸಾರ್ವಜನಿಕರಿಗೆ ದೊರೆಯುವ ಸೌಲಭ್ಯಗಳ ಬಗ್ಗೆ ಹಾಗೂ ಸವಲತ್ತುಗಳನ್ನು ಪಡೆಯಲು ಅನುಸರಿಸಬೇಕಾದ ವಿಧಾನಗಳ ಬಗ್ಗೆ ಮಾಹಿತಿ ಇರುತ್ತದೆ. ಮೈಸೂರು ಜಿಲ್ಲೆಯ ಎಲ್ಲ ಸಾರ್ವಜನಿಕರು ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳವಂತೆ ಜಿಲ್ಲಾಧಿಕಾರಿಗಳಾದ ಡಾ. ಕೆ.ವಿ.ರಾಜೇಂದ್ರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಂದಿನ ಲೇಖನಬ್ಯಾಟರ್‌ಗಳ ರ‍್ಯಾಂಕಿಂಗ್‌’ನಲ್ಲಿ ಅಗ್ರಸ್ಥಾನ ಉಳಿಸಿಕೊಂಡ ಸೂರ್ಯಕುಮಾರ್
ಮುಂದಿನ ಲೇಖನಪುರುಷ ಎಂದರೆ ಸಹನ ಶಕ್ತಿ, ಸ್ತ್ರೀ ಎಂದರೆ ಶಕ್ತಿ,