ಶಿವಮೊಗ್ಗ: ಉದ್ಘಾಟನೆಯಾಗಿ ಹತ್ತೇ ದಿನಕ್ಕೆ ನಗರದ ವಿದ್ಯಾನಗರ ವೃತ್ತಾಕಾರದ ಸೇತುವೆಗೆ ಲಾರಿ ಡಿಕ್ಕಿಯಾದ ಘಟನೆ ನಡೆದಿದೆ.
ನಗರದ ವಿದ್ಯಾನಗರ ಮೇಲ್ಸೇತುವೆ ಮೇಲೆ ಅಪಘಾತ ನಡೆದಿದ್ದು, ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಮೇಲ್ಸೇತುವೆಯ ತಡೆಗೋಡೆಗೆ ಡಿಕ್ಕಿ ಹೊಡೆದಿದೆ.
ಹೊಳೆಹೊನ್ನೂರು ದಿಕ್ಕಿನಿಂದ ಬಂದ ಲಾರಿಯೊಂದು ಸೇತುವೆಯ ತಡೆಗೋಡೆಗೆ ಡಿಕ್ಕಿಯಾಗಿದೆ. ವೇಗವಾಗಿ ಬಂದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಅಪಘಾತವಾಗಿದ್ದು, ಇದರ ರಭಸಕ್ಕೆ ಲಾರಿ ಮುಂಭಾಗ ಜಖಂಗೊಂಡಿದೆ.
ಪೂರ್ವ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Saval TV on YouTube