ಬೆಂಗಳೂರು : ಕರ್ನಾಟಕ ಸರ್ಕಾರ ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕರ್ತವ್ಯ ನಿರ್ವಹಣೆ ಮಾಡುತ್ತಿರುವ ಪೌರ ಕಾರ್ಮಿಕರಿಗೆ ವಾರದಲ್ಲಿ ಒಂದು ದಿನದ ಪೂರ್ಣ ರಜೆ ನೀಡುವಂತೆ ಆದೇಶ ಹೊರಡಿಸಿದೆ.
ಈ ಕುರಿತು ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಟಿ.ಮಂಜುನಾಥ್ ಆದೇಶ ಹೊರಡಿಸಿದ್ದಾರೆ. ಈ ಕುರಿತು ನಗರಾಭಿವೃದ್ಧಿ ಇಲಾಖೆಯಿಂದ ಪೌರಾಡಳಿತ ನಿರ್ದೇಶನಾಲಯಕ್ಕೆ ಪತ್ರ ಬರೆಯಲಾಗಿದೆ. ಈ ಪತ್ರದಲ್ಲಿ ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕರಿಗೆ ವಾರದಲ್ಲಿ ಒಂದು ದಿನ ಪೂರ್ತಿ ರಜೆ ಘೋಷಿಸುವ ಬಗ್ಗೆ ವಿವರಿಸಲಾಗಿದೆ.
ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ, ನಗರಾಭಿವೃದ್ಧಿ ಇಲಾಖೆ ಇವರ ಅಧ್ಯಕ್ಷತೆಯಲ್ಲಿ ದಿನಾಂಕ 12/09/2022 ರಂದು ನಡೆದ ಸಭೆಯ ನಿರ್ಣಯ ಮತ್ತು ದಿನಾಂಕ 29/01/2024ರ ಪತ್ರವನ್ನು ಉಲ್ಲೇಖ ಮಾಡಲಾಗಿದೆ.