ಮನೆ ಅಂತಾರಾಷ್ಟ್ರೀಯ ಸುಡಾನ್ ನಿಂದ ಭಾರತೀಯರ ಕರೆತರಲು ಆಪರೇಷನ್ ಕಾವೇರಿ

ಸುಡಾನ್ ನಿಂದ ಭಾರತೀಯರ ಕರೆತರಲು ಆಪರೇಷನ್ ಕಾವೇರಿ

0

ನವದೆಹಲಿ: ಸಂಘರ್ಷಪೀಡಿತ ಸುಡಾನ್ ನಲ್ಲಿ ಸಿಲುಕಿರುವ ಕರ್ನಾಟಕದ ಹಕ್ಕಿಪಿಕ್ಕಿ ಜನಾಂಗದವರೂ ಸೇರಿದಂತೆ ಭಾರತೀಯರನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರುವ ಸಲುವಾಗಿ ಕೇಂದ್ರ ಸರ್ಕಾರವು ಸೋಮವಾರ ‘ಆಪರೇಷನ್ ಕಾವೇರಿ’ಗೆ ಚಾಲನೆ ನೀಡಿದೆ.

Join Our Whatsapp Group

ಸೇನೆ ಮತ್ತು ಅರೆಸೇನಾ ಪಡೆಗಳ ಮಧ್ಯೆ ಸಂಘರ್ಷ ನಡೆಯುತ್ತಿರುವ ಸುಡಾನ್ ನಲ್ಲಿ ಸಿಲುಕಿರುವ ಭಾರತೀಯರನ್ನು ಮರಳಿ ಕರೆತರಲು ‘ಆಪರೇಷನ್ ಕಾವೇರಿ’ ಕಾರ್ಯಾಚರಣೆ ನಡೆಸಲಾಗುತ್ತಿದೆ.

ಸುಮಾರು 500 ಭಾರತೀಯರು ಸುಡಾನ್ ಬಂದರನ್ನು ತಲುಪಿದ್ದಾರೆ. ಅವರನ್ನು ಕರೆತರಲು ನಮ್ಮ ಹಡಗುಗಳು ಮತ್ತು ವಿಮಾನಗಳು ಸಜ್ಜಾಗಿವೆ. ಸುಡಾನ್ ನಲ್ಲಿರುವ ನಮ್ಮ ಎಲ್ಲ ಸಹೋದರರಿಗೆ ಸಹಾಯ ಮಾಡಲು ಸರ್ಕಾರ ಬದ್ಧವಾಗಿದೆ ವಿದೇಶಾಂಗ ಸಚಿವ ಎಸ್ ಜೈಶಂಕರ್ ಟ್ವೀಟ್ ಮೂಲಕ ತಿಳಿಸಿದ್ದಾರೆ.

ಭಾರತೀಯ ನಾಗರಿಕರನ್ನು ಸ್ಥಳಾಂತರಿಸಲು ಸೌದಿ ಅರೇಬಿಯಾಕ್ಕೆ ಎರಡು ಹೆವಿ-ಲಿಫ್ಟ್ ವಿಮಾನಗಳನ್ನು ಮತ್ತು ಸುಡಾನ್ ಕರಾವಳಿಗೆ ಹಡಗನ್ನು ಕಳುಹಿಸಲಾಗಿದೆ ಎಂದು ಏಪ್ರಿಲ್ 23ರಂದು ವಿದೇಶಾಂಗ ಸಚಿವಾಲಯ ತಿಳಿಸಿತ್ತು.

ಸಂಘರ್ಷಕ್ಕೆ ತುಸು ವಿರಾಮ ದೊರೆತ ಸಂದರ್ಭ ಬಳಸಿಕೊಂಡು ಸುಡಾನ್ ನಿಂದ ಜನರನ್ನು ಸ್ಥಳಾಂತರಿಸಲು ಭಾರತವು ಕಾರ್ಯಾಚರಣೆ ನಡೆಸುತ್ತಿದೆ.