ಮನೆ ರಾಜ್ಯ ನರಹಂತಕ ಕಾಡಾನೆ ಸೆರೆಗೆ ಸಾಕಾನೆ ಬಳಸಿ ಕಾರ್ಯಾಚರಣೆ..!

ನರಹಂತಕ ಕಾಡಾನೆ ಸೆರೆಗೆ ಸಾಕಾನೆ ಬಳಸಿ ಕಾರ್ಯಾಚರಣೆ..!

0

ಚಿಕ್ಕಮಗಳೂರು : ಕಾಫಿನಾಡಲ್ಲಿ ಇತ್ತೀಚೆಗೆ ಕಾರ್ಮಿಕನನ್ನು ಬಲಿ ಕಾಡಾನೆಯನ್ನು ಸೆರೆಹಿಡಿಯಲು ಸಕ್ರೆಬೈಲ್‌ ಕ್ಯಾಂಪ್‌ನ ಸಾಕಾನೆಗಳನ್ನು ಬಳಸಿ ಕಾರ್ಯಾಚರಣೆ ನಡೆಸಲಾಗುತ್ತಿದೆ.

ನರಹಂತಕ ಕಾಡಾನೆ ಸೆರೆಗೆ ಸಕ್ರೆಬೈಲಿನಿಂದ ಐದು ಸಾಕಾನೆಗಳ ತಂಡ ಚಿಕ್ಕಮಗಳೂರು ತಾಲೂಕಿನ ಹುಣಸೇಹಳ್ಳಿ ಸಮೀಪದ ಪುರ ಗ್ರಾಮಕ್ಕೆ ಆಗಮಿಸಿದೆ. ಮೂರು ಕಾಡಾನೆಗಳಿದ್ದು ಅದರಲ್ಲಿ ಒಂದು ಕಾಡಾನೆಯನ್ನ ಸೆರೆ ಹಿಡಿಯಲು ಸರ್ಕಾರ ಆದೇಶಿಸಿದೆ. ಉಳಿದ ಆನೆಗಳಿಗೆ ರೇಡಿಯೋ ಕಾಲರ್ ಅಳವಡಿಸಿ ಚಲನ-ವಲನ ಗಮನಿಸುವಂತೆ ಸೂಚನೆ ನೀಡಲಾಗಿದೆ.

ಫೆ.16 ರಂದು ಕಾಡಾನೆ ದಾಳಿಗೆ ಯಲ್ಲಪ್ಪ ಎಂಬ ಕಾರ್ಮಿಕರೊಬ್ಬರು ಬಲಿಯಾಗಿದ್ದರು. ಇದರಿಂದ ರೊಚ್ಚಿಗೆದ್ದ ಗ್ರಾಮಸ್ಥರು ಕಾಡಾನೆ ಸೆರೆಹಿಡಿಯುವಂತೆ ಬಾಳೆಹೊನ್ನೂರು ಅರಣ್ಯ ಇಲಾಖೆ ಕಚೇರಿ ಮುಂದೆ ಪ್ರತಿಭಟಿಸಿದ್ದರು.