ಮನೆ ರಾಷ್ಟ್ರೀಯ ನೀಟ್ ಪರೀಕ್ಷೆ ಅಕ್ರಮ ಚರ್ಚೆಗೆ ವಿಪಕ್ಷಗಳು ಒತ್ತಾಯ: ಲೋಕಸಭೆ ಕಲಾಪ ಮುಂದೂಡಿದ ಸ್ಪೀಕರ್

ನೀಟ್ ಪರೀಕ್ಷೆ ಅಕ್ರಮ ಚರ್ಚೆಗೆ ವಿಪಕ್ಷಗಳು ಒತ್ತಾಯ: ಲೋಕಸಭೆ ಕಲಾಪ ಮುಂದೂಡಿದ ಸ್ಪೀಕರ್

0

ದೆಹಲಿ: ನೀಟ್ ಪರೀಕ್ಷೆ ಅಕ್ರಮದ ಸಂಬಂಧಿಸಿದಂತೆ ಪ್ರತಿಪಕ್ಷಗಳ ಸದಸ್ಯರ ಚರ್ಚೆಗೆ ಅವಕಾಶ ಕಲ್ಪಿಸುವಂತೆ ಒತ್ತಾಯಿಸಿದಕ್ಕೆ, ಲೋಕಸಭೆ ಕಲಾಪವನ್ನು ಮುಂದೂಡಲಾಯಿತು.

Join Our Whatsapp Group

ಭಾರತದ ವಿದ್ಯಾರ್ಥಿಗಳ ಭವಿಷ್ಯವನ್ನು ಈ ನೀಟ್ ಪರೀಕ್ಷೆ ಹಾಳುಮಾಡುತ್ತಿದೆ. ಈ ಅಕ್ರಮದ ಬಗ್ಗೆ ಚರ್ಚೆಗೆ ಅವಕಾಶ ಮಾಡಿಕೊಡಿ ಎಂದು ಲೋಕಸಭೆಯ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಸ್ಪೀಕರ್ ಓಂ ಬರ್ಲಾಗೆ ಒತ್ತಾಯ ಮಾಡಿದ್ದರು. ಇದು ಯುವಜನತೆಗೆ ಸಂಬಂಧಿಸಿದ ವಿಚಾರವಾಗಿರುವುದರಿಂದ ಪ್ರಧಾನಿ ಮೋದಿ ಅವರು ಈ ಚರ್ಚೆಯಲ್ಲಿ ಭಾಗವಹಿಸಬೇಕು ಎಂದು ರಾಹುಲ್ ಗಾಂಧಿ ಒತ್ತಾಯಿಸಿದರು.

ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಪ್ರತಿಪಕ್ಷಗಳ ಸದಸ್ಯರೊಂದಿಗೆ ನೀಟ್ ವಿಷಯವನ್ನು ಪ್ರಸ್ತಾಪಿಸಿ, ಈ ವಿಷಯದ ಬಗ್ಗೆ ಚರ್ಚೆಗೆ ಒತ್ತಾಯಿಸಿದರು. ನೀಟ್‌ಗೆ ಸಂಬಂಧಿಸಿದಂತೆ ಚರ್ಚೆಗೆ ಪ್ರತಿಪಕ್ಷಗಳ ಬೇಡಿಕೆಯ ನಡುವೆಯೇ ಲೋಕಸಭೆಯ ಕಲಾಪವನ್ನು ಮಧ್ಯಾಹ್ನ ೧೨ ಗಂಟೆಗೆ ಮುಂದೂಡಲಾಗಿದೆ.

ಹಿಂದಿನ ಲೇಖನಬಿಟ್ ಕಾಯಿನ್ ಪ್ರಕರಣ: ಡಿವೈಎಸ್ಪಿ ಶ್ರೀಧರ್ ಪೂಜಾರಿಗೆ ನಿರೀಕ್ಷಣಾ ಜಾಮೀನು
ಮುಂದಿನ ಲೇಖನಬಿ.ಎಸ್. ಯಡಿಯೂರಪ್ಪ ವಿರುದ್ಧ ಚಾರ್ಜ್‌ ಶೀಟ್ ಸಲ್ಲಿಕೆ