ಮನೆ ರಾಜಕೀಯ ರಾಷ್ಟ್ರಧ್ವಜವನ್ನು ಅವಮಾನಿಸಿರುವ ಈಶ್ವರಪ್ಪ ವಿರುದ್ಧ ಕ್ರಮಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹ

ರಾಷ್ಟ್ರಧ್ವಜವನ್ನು ಅವಮಾನಿಸಿರುವ ಈಶ್ವರಪ್ಪ ವಿರುದ್ಧ ಕ್ರಮಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹ

0

ಬೆಂಗಳೂರು: ಕೆಂಪು ಕೋಟೆಯ ಮೇಲೆ ಕೇಸರಿ ಧ್ವಜ ಹಾರಾಡಲಿದೆ ಎಂಬ ವಿವಾದಾತ್ಮಕ ಹೇಳಿಕೆ ನೀಡಿರುವ ಸಚಿವ ಕೆ.ಎಸ್ ಈಶ್ವರಪ್ಪ ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದರು.

ವಿಧಾನಸೌಧದಲ್ಲಿ ಮಾತನಾಡಿದ ಅವರು, ಹಿಜಾಬ್, ನಾರಾಯಣ ಗುರು ಟ್ಯಾಬ್ಲೋ ವಿಚಾರವಾಗಿ ಸಭೆಗೆ ಕಪ್ಪು ಪಟ್ಟಿ ಧರಿಸಿದ್ದೇವೆ ಎಂದರು.

ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಕೇಸರಿ ಶಾಲು ಹಾಕಿ ಕಳಿಸಿದವರೇ ಇವರು. ಈಶ್ವರಪ್ಪ ಅವರ ಮೇಲೆ ಕ್ರಮ ತೆಗೆದುಕೊಂಡು, ಕೇಸ್ ಹಾಕಬೇಕು ಎಂದರು.

ಇಂದು ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲರು ಅವರ ಭಾಷಣ ಮಂಡಿಸಿದ್ದಾರೆ. ರಾಜ್ಯಪಾಲರ ಭಾಷಣ ಅಂದ್ರೆ ಸರ್ಕಾರ ಬರೆದುಕೊಡುವ ಪದ್ಧತಿ. ಅವರ ಭಾಷಣ ಮೂಲಕ ರಾಜ್ಯಪಾಲರ ಮತ್ತು ಜನರ ದಿಕ್ಕು ತಪ್ಪಿಸಿದ್ದಾರೆ. ರಾಜ್ಯಪಾಲರ ಮೂಲಕ ಸುಳ್ಳು ಹೇಳಿಸಿದ್ದಾರೆ ಎಂದು ಆರೋಪಿಸಿದರು.

ಅವರ ಭಾಷಣದಲ್ಲಿ 116 ಪ್ಯಾರ ಇದೆ. ಬರೀ ಸುಳ್ಳು, ಭರವಸೆ, ಹಳೆ ಪ್ರೋಗ್ರಾಂ, ಇನ್ನು ನಮ್ಮ ಯೋಜನೆ ಕೆಲವು ಇದೆ. ಹಿಂದಿನ ವರ್ಷಗಳ‌ ಸಾಧನೆ, ಮುಂದಿನ ವರ್ಷದ ಮುನ್ನೋಟ ಇರಬೇಕು. ಅವ್ಯಾವು ಕೂಡ ರಾಜ್ಯಪಾಲರ ಭಾಷಣದಲ್ಲಿ ಇಲ್ಲ. ಕೊರೊನಾ ವಿಚಾರದಲ್ಲಿ ಸುಳ್ಳು ಹೇಳಿಸಿದ್ದಾರೆ.

ರಾಜ್ಯದಲ್ಲಿ ನಿರುದ್ಯೋಗ, ಹಣಕಾಸು, ನೀರಾವರಿ ಸಮಸ್ಯೆ ಇದೆ ಅದರ ಉಲ್ಲೇಖವೇ ಆಗಿಲ್ಲ. ಕಲ್ಯಾಣ ಕರ್ನಾಟಕ, ಹೈದ್ರಾಬಾದ್ ಕರ್ನಾಟಕ ಬಗ್ಗೆ ಹಣ ನೀಡೋ ಬಗ್ಗೆ ಉಲ್ಲೇಖವೇ ಇಲ್ಲ. ಈ ಸರ್ಕಾರಕ್ಕೆ ಗೊತ್ತು ಗುರಿ ಇಲ್ಲ ಎಂದರು.