ದಾವಣಗೆರೆ: ಭದ್ರಾ ಮೇಲ್ದಂಡೆ ಕಾಲುವೆ ಒಡೆದು ಯೋಜನೆ ಮಾಡಲು ರಾಜ್ಯ ಸರ್ಕಾರ ಮುಂದಾಗಿರುವ ಬಗ್ಗೆ ಬಿಜೆಪಿ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸಿದ್ದು, ಪ್ರತಿಭಟನೆ ಮಾಡಿದ್ದಾರೆ.
ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ
ರಾಜ್ಯ ಸರ್ಕಾರ ಈ ನಡೆಯನ್ನ ಬಿಜೆಪಿ ಪ್ರತಿಭಟನೆ ಮೂಲಕ ವಿರೋಧಿಸುತ್ತಿದ್ದು, ಹೆದ್ದಾರಿ ಬಂದ್ ಮಾಡುವ ಮೂಲಕ ಪ್ರತಿಭಟನೆ ಮಾಡಲಾಗಿದೆ. ದಾವಣಗೆರೆಯಲ್ಲಿ ಹೆದ್ದಾರಿ ತಡೆದು ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದು, ಈ ಸಮಯದಲ್ಲಿ ತಳ್ಳಾಟ ಉಂಟಾಗಿದೆ. ಇದರಿಂದಾಗಿ ಮಾಜಿ ಸಚಿವ ರೇಣುಕಾಚಾರ್ಯ ಸೇರಿ ಅನೇಕ ಕಾರ್ಯಕರ್ತರಿಗೆ ಗಾಯಗಳಾಗಿದೆ.
ಬೇಗ ಯೋಜನೆ ಪೂರ್ಣಗೊಳಿಸಲಾಗುವುದು ಎಂದಿರುವ ಡಿಸಿಎಂ
ಈ ನಡುವೆ ಕೆಲ ತಿಂಗಳ ಹಿಂದೆ ಈ ಯೋಜನೆಯ ವಿಚಾರವಾಗಿ ಮಾತನಾಡಿದ್ದ ಡಿಸಿಎಂ ಡಿಕೆ ಶಿವಕುಮಾರ್, ಭದ್ರಾ ಮೇಲ್ದಂಡೆ ಕಾಮಗಾರಿ ವೇಳೆ ರೈತರಿಗೆ ನೀಡಿರುವ ಭೂ ಸ್ವಾಧೀನ ಪರಿಹಾರದಲ್ಲಿನ ಸಮಸ್ಯೆಗಳನ್ನ ಸರಿಪಡಿಸಿ, ಮುಂದಿನ ಆರು ತಿಂಗಳ ಒಳಗೆ ಕಾಮಗಾರಿ ಮುಗಿಸಲಾಗುತ್ತದೆ ಎಂದು ಹೇಳಿದ್ದರು.
ಕರ್ನಾಟಕದಲ್ಲಿ ಅತ್ಯಂತ ಮಹತ್ವ ಪಡೆದಿರುವ ನೀರಾವರಿ ಯೋಜನೆ ಈ ಭದ್ರಾ ಮೇಲ್ದಂಡೆ ಯೋಜನೆ. ಕರ್ನಾಟಕದ ಚಿಕ್ಕಮಗಳೂರು, ಚಿತ್ರದುರ್ಗ, ತುಮಕೂರು ಮತ್ತು ದಾವಣಗೆರೆ ಜಿಲ್ಲೆಗಳಿಗೆ ಈ ಯೋಜನೆಯಿಂದ ಲಾಭವಾಗುತ್ತದೆ. ಇದರ ಜೊತೆಗೆ ಮಧ್ಯ ಕರ್ನಾಟಕದ ಬರೋಬ್ಬರಿ 5,57,022 ಎಕರೆ ಪ್ರದೇಶ ವಿಸ್ತಾರ ಹೊಂದಿರುವ ಭದ್ರಾ ಮೇಲ್ದಂಡೆ ಯೋಜನೆ ಬರೋಬ್ಬರಿ 367 ಕೆರೆಗಳಿಗೆ ಜೀವ ತುಂಬಿಸುತ್ತದೆ ಎನ್ನಲಾಗುತ್ತಿದೆ.














