ಶಿಕಾರಿಪುರ: ಪರಿಶಿಷ್ಟ ಸಮುದಾಯಗಳಲ್ಲಿ ಒಳ ಮೀಸಲಾತಿ ನೀಡಿಕೆಗೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಸದಾಶಿವ ವರದಿಯನ್ನು ಕೇಂದ್ರಕ್ಕೆ ಶಿಫಾರಸು ಮಾಡುವ ಸರ್ಕಾರದ ನಿರ್ಧಾರ ವಿರೋಧಿಸಿ ಪಟ್ಟಣದಲ್ಲಿ ಸೋಮವಾರ ಬಂಜಾರ ಸಮಾಜದವರು ನಡೆಸಿದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಭಾವಚಿತ್ರದ ಪ್ಲೆಕ್ಸ್ ಸುಟ್ಟು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ವೇಳೆ ಯಡಿಯೂರಪ್ಪ ಅವರ ಮನೆಗೆ ನುಗ್ಗಲು ಯತ್ನಿಸಿದ ಪ್ರತಿಭಟನಾಕಾರರಿಗೆ ಪೊಲೀಸರು ಲಾಠಿ ರುಚಿ ತೋರಿಸಿದ್ದಾರೆ. ಪ್ರತಿಭಟನಾಕಾರರು ಯಡಿಯೂರಪ್ಪ ಮನೆಯತ್ತ ಕಲ್ಲು ತೂರಾಟ ನಡೆಸಿದ್ದಾರೆ.
ಬ್ಯಾರಿಕೇಡ್ ಗಳನ್ನು ದಾಟಿ ಯಡಿಯೂರಪ್ಪ ಮನೆಗೆ ಪ್ರತಿಭಟನಾಕಾರರು ನುಗ್ಗುವುದನ್ನು ತಡೆಯಲು ಪೊಲೀಸರು ಲಾಠಿ ಪ್ರಹಾರ ನಡೆಸಿದರು. ಈಗ ಪಟ್ಟಣದ ತಾಲ್ಲೂಕು ಪಂಚಾಯ್ತಿ ಮುಂಭಾಗಕ್ಜೆ ಪ್ರತಿಭಟನೆ ಸ್ಥಳಾಂತರಗೊಂಡಿದೆ.
Saval TV on YouTube