ಚೆನ್ನೈ: ರಾಜ್ಯದ ಮೇಕೆದಾಟು ಯೋಜನೆಗೆ ತಮಿಳುನಾಡು ಸರ್ಕಾರ ಪದೇ ಪದೇ ಅಡ್ಡಗಾಲು ಹಾಕುತ್ತಿದ್ದು, ಮೇಕೆದಾಟು ಯೋಜನೆ ವಿರೋಧಿಸಿ ತಮಿಳುನಾಡು ವಿಧಾನಸಭೆಯಲ್ಲಿ ನಿರ್ಣಯ ಮಂಡನೆ ಮಾಡಲಾಗಿದೆ.
ಈ ಕುರಿತು ಮಾತನಾಡಿರುವ ತಮಿಳುನಾಡು ಜಲಸಂಪನ್ಮೂಲ ಸಚಿವ ತುರೈ ಮುರುಗನ್, ಮೇಕೆದಾಟು ಯೋಜನೆ ವಿರುದ್ಧ ನಾವೆಲ್ಲಾ ಒಂದಾಗಿದ್ದೇವೆ. ಮೇಕೆದಾಟು ಯೋಜನೆಗೆ ಕರ್ನಾಟಕ ಬಜೆಟ್ ನಲ್ಲಿ ಹಣ ಮೀಸಲಿಟ್ಟಿರುವುದು ಕಾನೂನು ಬಾಹಿರ ಎಂದು ಹೇಳಿಕೆ ನೀಡಿದ್ದಾರೆ.
ಸಿಎಂ ಬಸವರಾಜ ಬೊಮ್ಮಾಯಿ ಮೇಕೆದಾಟು ಯೋಜನೆಗೆ ಬಜೆಟ್ ನಲ್ಲಿ 1 ಸಾವಿರ ಕೋಟಿ ರೂ. ಹಣ ಮೀಸಲಿಟ್ಟಿದ್ದಾರೆ. ಈ ಮಧ್ಯೆ ಕಳೆದ ಎರಡು ದಿನಗಳ ಹಿಂದಷ್ಟೇ ಸಿಎಂ ಬಸವರಾಜ ಬೊಮ್ಮಾಯಿ ಸರ್ವಪಕ್ಷಗಳ ಸಭೆ ನಡೆಸಿದ್ದು ಸಭೆಯಲ್ಲಿ ಪ್ರಧಾನಿ ಮೋದಿ ಬಳಿ ಸರ್ವಪಕ್ಷಗಳ ನಿಯೋಗ ಕರೆದೊಯ್ಯಲು ತೀರ್ಮಾನಿಸಲಾಗಿದೆ.