ಮನೆ ರಾಜ್ಯ ಶಿಕ್ಷಣ ಇಲಾಖೆಯು ಶಾಲಾ ವಿದ್ಯಾರ್ಥಿಗಳಿಗೆ ಮೊಟ್ಟೆ ವಿತರಣೆಗೆ ಆದೇಶ

ಶಿಕ್ಷಣ ಇಲಾಖೆಯು ಶಾಲಾ ವಿದ್ಯಾರ್ಥಿಗಳಿಗೆ ಮೊಟ್ಟೆ ವಿತರಣೆಗೆ ಆದೇಶ

0

ಬೆಂಗಳೂರು(Bengaluru):  ರಾಜ್ಯದ ಸರ್ಕಾರಿ ಅನುದಾನಿತ ಮತ್ತು ಅನುದಾನರಹಿತ ಶಾಲೆಗಳಾದ 1ರಿಂದ 8ನೇ ತರಗತಿವರೆಗಿನ ಮಕ್ಕಳಿಗೆ ಮಧ್ಯಾಹ್ನದ ಬಿಸಿ ಊಟದ ಜೊತೆಗೆ ಮೊಟ್ಟೆ ಅಥವಾ ಬಾಳೆಹಣ್ಣು, ಶೇಂಗಾ ಚಿಕ್ಕಿಯನ್ನು ವಿತರಿಸಲು ಶಾಲಾ ಶಿಕ್ಷಣ ಇಲಾಖೆಯು ಆದೇಶ ಹೊರಡಿಸಿದೆ.

ಕರ್ನಾಟಕದ 8 ಜಿಲ್ಲೆಗಳನ್ನು ಹೊರತುಪಡಿಸಿ, ಉಳಿದ 23 ಜಿಲ್ಲೆಗಳಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಬೇಯಿಸಿದ ಮೊಟ್ಟೆಯನ್ನು ಸೇವಿಸದ ಮಕ್ಕಳಿಗೆ ಬಾಳೆಹಣ್ಣು ಅಥವಾ ಶೇಂಗಾ ಚಿಕ್ಕಿ ವಿತರಣಾ ಕಾರ್ಯಕ್ರಮವನ್ನು ಕಡ್ಡಾಯವಾಗಿ ಅನುಷ್ಠಾನಗೊಳಿಸುವಂತೆ ಶಿಕ್ಷಣ ಇಲಾಖೆ ಆದೇಶಿಸಿದೆ.

23 ಜಿಲ್ಲೆಗಳಲ್ಲಿ ಅರ್ಹ ವಿದ್ಯಾರ್ಥಿಗಳ ಒಟ್ಟು ಸಂಖ್ಯೆ:  30,62,566,

ವಾರ್ಷಿಕವಾಗಿ ನಿಗದಿಪಡಿಸಿರುವ ಅನುದಾನ:  8,452,68 ರೂ.

ಒಬ್ಬ ವಿದ್ಯಾರ್ಥಿಗೆ ಮೊಟ್ಟೆ ನೀಡಲು ನಿಗದಿಪಡಿಸಿರುವ ಮೊತ್ತ 6 ರೂ.

2022ರ ಜುಲೈನಿಂದ 2023ರ ಫೆಬ್ರವರಿ ತಿಂಗಳವರೆಗೆ ಒಟ್ಟು 46 ದಿನಗಳ ಅವಧಿಯಲ್ಲಿ ವಾರದಲ್ಲಿ ಎರಡು ದಿನಗಳು ಪೌಷ್ಟಿಕ ಆಹಾರವಾದ ವಿತರಿಸಬೇಕು. ಎಂದು ಹೇಳಿದ್ದಾರೆ.

ಕರ್ನಾಟಕದ ಕೇಲವು ಜಿಲ್ಲೆಗಳಾದ ಬೀದರ್, ರಾಯಚೂರು, ಕಲಬುರಗಿ, ಯಾದಗಿರಿ, ಕೊಪ್ಪಳ, ಬಳ್ಳಾರಿ, ವಿಜಯನಗರ ಮತ್ತು ವಿಜಯಪುರ ಜಿಲ್ಲೆಗಳಿಗೆ ಈ ಸೂಚನೆ ಅನ್ವಯಿಸುವುದಿಲ್ಲ. ಎಂದು ಶಾಲಾ ಶಿಕ್ಷಣ ಇಲಾಖೆಯು ತಿಳಿಸಿದೆ.