ಮನೆ ರಾಜ್ಯ ತಮಿಳುನಾಡಿಗೆ ಪ್ರತಿ ದಿನ 3000 ಕ್ಯೂಸೆಕ್ ನೀರು ಹರಿಸುವಂತೆ ಮತ್ತೆ ಆದೇಶ

ತಮಿಳುನಾಡಿಗೆ ಪ್ರತಿ ದಿನ 3000 ಕ್ಯೂಸೆಕ್ ನೀರು ಹರಿಸುವಂತೆ ಮತ್ತೆ ಆದೇಶ

0

ನವದೆಹಲಿ: ಕಾವೇರಿ ನದಿ ನೀರಿಗಾಗಿ ರಾಜ್ಯಾದ್ಯಂತ ಬಂದ್ ನಡೆಯುತ್ತಿರುವಂತೆಯೇ ಅತ್ತ ದೆಹಲಿಯಲ್ಲಿ ಇಂದು ನಡೆದ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ಸಭೆಯಲ್ಲಿ ಈ ಹಿಂದೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ನೀಡಿದ್ದ ಆದೇಶವನ್ನು ಪಾಲಿಸುವಂತೆ ಕರ್ನಾಟಕ ಸರ್ಕಾರಕ್ಕೆ ಆದೇಶಿಸಿದೆ.

Join Our Whatsapp Group

ಈ ಹಿಂದೆ ಕಾವೇರಿ ನೀರು ನಿಯಂತ್ರಣ ಸಮಿತಿ ನೀಡಿದ್ದ ಅಕ್ಟೋಬರ್ 15ರವರೆಗೆ ತಮಿಳುನಾಡಿಗೆ ನಿತ್ಯ 3 ಸಾವಿರ ಕ್ಯೂಸೆಕ್ಸ್ ನೀರನ್ನು ಹರಿಸುವ ಆದೇಶವನ್ನು ಪಾಲಿಸುವಂತೆ ಕರ್ನಾಟಕಕ್ಕೆ ಇಂದು ಸೂಚಿಸಲಾಗಿದೆ. ಆ ಮೂಲಕ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ನೀಡಿದ್ದ ಆದೇಶವನ್ನು ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ-CWMA ಎತ್ತಿಹಿಡಿದಿದೆ.

ಅಂತೆಯೇ ತಮಿಳುನಾಡು ಮತ್ತು ಕರ್ನಾಟಕ ಉಭಯ ಸರ್ಕಾರಗಳ ಬೇಡಿಕೆಯನ್ನು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ತಿರಸ್ಕರಿಸಿದ್ದು, ನಿತ್ಯ 3 ಸಾವಿರ ಕ್ಯೂಸೆಕ್ಸ್ ನೀರನ್ನು ಹರಿಸುವ ಕಾವೇರಿ ನೀರು ನಿಯಂತ್ರಣ ಸಮಿತಿ ಆದೇಶವನ್ನು ಪಾಲಿಸುವಂತೆ ಕರ್ನಾಟಕ ಸರ್ಕಾರಕ್ಕೆ ಸೂಚಿಸಿದೆ.

ಇಂದಿನ ಸಭೆಯಲ್ಲಿ ತಮಿಳುನಾಡು ನಿತ್ಯ 12,500 ಕ್ಯೂಸೆಕ್ ನೀರು ಬಿಡುವಂತೆ ಕರ್ನಾಟಕಕ್ಕೆ ನಿರ್ದೇಶನ ನೀಡಬೇಕು ಎಂದು ಇಂದಿನ ಸಭೆಯಲ್ಲಿ ಆಗ್ರಹಿಸಿತ್ತು. ಇದು ಮಾತ್ರವಲ್ಲದೇ ಕರ್ನಾಟಕ ಬಾಕಿ ಉಳಿಸಿಕೊಂಡಿರುವ 12 ಟಿಎಂಸಿ ಬ್ಯಾಕ್ ಲಾಗ್ ನೀರನ್ನು ಮೊದಲು ಬಿಡುವಂತೆ ಆದೇಶ ನೀಡಬೇಕು ಎಂದು ವಾದಿಸಿತ್ತು. ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಕರ್ನಾಟಕದ ಪರ ಅಧಿಕಾರಿ ಸಿಂಗ್, ರಾಜ್ಯದಲ್ಲಿ ಸಾಕಷ್ಟು ಮಳೆ ಕೊರತೆ ಇದೆ. ರಾಜ್ಯದ ಡ್ಯಾಂಗಳಲ್ಲಿ ಸಾಕಷ್ಟು ನೀರಿಲ್ಲ.

ಮುಂದಿನ ಜೂನ್ ತಿಂಗಳವರೆಗೂ ರಾಜ್ಯದಲ್ಲಿ ಉತ್ತಮ ಮಳೆಯಾಗುವ ಯಾವುದೇ ಆಶಾಭಾವವಿಲ್ಲ. ಬೆಂಗಳೂರು ಮತ್ತು ಇತರೆ ಜಿಲ್ಲೆಗಳಿಗೆ ಕುಡಿಯುವ ನೀರು ಒದಗಿಸಬೇಕು. ನಮ್ಮಲ್ಲೂ ರೈತರು ಬತ್ತೆ ಬೆಳೆಯುತ್ತಿದ್ದಾರೆ. ಅವರಿಗೇ ನೀರಿಲ್ಲ. ಆದರೆ ತಮಿಳುನಾಡಿನ ಪರಿಸ್ಥಿತಿ ಹೀಗಿಲ್ಲ. ಅಲ್ಲಿ ಹಿಂಗಾರು ಮಳೆ ಇದೆ. ಹಿಂಗಾರು ಮಳೆಯಿಂದ ಮೆಟ್ಟೂರು ಡ್ಯಾಂ ತುಂಬುತ್ತದೆ. ಹೀಗಾಗಿ ಈ ಸಂಕಷ್ಟದ ಪರಿಸ್ಥಿತಿಯಲ್ಲಿ ನೀರು ಬಿಡಲು ಸಾಧ್ಯವೇ ಇಲ್ಲ ಎಂದು ರಾಕೇಶ್ ಸಿಂಗ್ ಏರುಧನಿಯಲ್ಲೇ ಆಕ್ಷೇಪವ್ಯಕ್ತಪಡಿಸಿದರು.

ಅಂತಿಮವಾಗಿ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ತಮಿಳುನಾಡಿಗೆ ನಿತ್ಯ 3 ಸಾವಿರ ಕ್ಯೂಸೆಕ್ಸ್ ನೀರನ್ನು ಹರಿಸುವ ಕಾವೇರಿ ನೀರು ನಿಯಂತ್ರಣ ಸಮಿತಿ ಆದೇಶ ಪಾಲಿಸುವಂತೆ ಆದೇಶ ನೀಡಿದೆ.