ಮನೆ ರಾಜ್ಯ ಸ್ವಾತಂತ್ರ‍್ಯ ದಿನಾಚರಣೆಯ ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ಆಯೋಜಿಸಿ: ಡಾ. ಕೆ ವಿ ರಾಜೇಂದ್ರ

ಸ್ವಾತಂತ್ರ‍್ಯ ದಿನಾಚರಣೆಯ ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ಆಯೋಜಿಸಿ: ಡಾ. ಕೆ ವಿ ರಾಜೇಂದ್ರ

0

ಮೈಸೂರು: ಸ್ವಾತಂತ್ರ‍್ಯ ದಿನಾಚರಣೆಯ ಪ್ರಯುಕ್ತ ರೂಪಿಸಲಾಗಿರುವ ಎಲ್ಲಾ ಕಾರ್ಯಕ್ರಮಗಳನ್ನು ವ್ಯವಸ್ಥಿತವಾಗಿ ಆಯೋಜಿಸಿ ಎಂದು ಜಿಲ್ಲಾಧಿಕಾರಿಗಳಾದ ಡಾ. ಕೆ ವಿ ರಾಜೇಂದ್ರ ಅವರು ತಿಳಿಸಿದರು.

Join Our Whatsapp Group


ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಸ್ವಾತಂತ್ರ‍್ಯ ದಿನಾಚರಣೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಧ್ವಜಾರೋಹಣಕ್ಕೆ ಸಂಬoಧಿಸಿದoತೆ ಪೂರ್ವ ಸಿದ್ಧತೆಗಳನ್ನು ನಡೆಸಿಕೊಳ್ಳಿ. ಪರಿಸರ ಸ್ನೇಹಿ ಧ್ವಜ ಬಳಕೆಗೆ ಹೆಚ್ಚು ಒತ್ತು ನೀಡುವಂತೆ ಹಾಗೂ ಪ್ಲಾಸ್ಟಿಕ್ ಧ್ವಜದ ಬಳಕೆ ನಿಷೇಧಿಸುವಂತೆ ಸೂಚಿಸಿದರು.
ಎಲ್ಲಾ ಸ್ವಾತಂತ್ರ‍್ಯ ಹೋರಾಟಗಾರರನ್ನು ಒಳಗೊಂಡoತೆ ಸ್ವಾತಂತ್ರ ಹೋರಾಟಗಾರರನ್ನು ಸ್ಮರಿಸುವ ಹಾಗೂ ದೇಶಭಕ್ತಿಯನ್ನು ಮೆರೆಸುವ ನಿಟ್ಟಿನಲ್ಲಿ ಕಾರ್ಯಕ್ರಮಗಳು ಆಯೋಜನೆಗೊಳ್ಳಲಿ. ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಅಚ್ಚುಕಟ್ಟಾಗಿ ರೂಪಿಸಲು ಕ್ರಮವಹಿಸಿ ಎಂದು ಡಿಡಿಪಿಐ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಿಗೆ ಸೂಚಿಸಿದರು.
ಪೆರೇಡ್ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳು ನಡೆಯುವ ಸಂದರ್ಭದಲ್ಲಿ ಪೋಲಿಸ್ ಬಂದೋಬಸ್ತ್ ಒದಗಿಸುವುದು. ಸ್ವಾತಂತ್ರ‍್ಯಕ್ಕಾಗಿ ಹೋರಾಡಿದ ಸ್ವಾತಂತ್ರ‍್ಯ ಹೋರಾಟಗಾರರ ಮನೆಯವರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸುವ ಕೆಲಸ ಆಗಬೇಕು. ಇಲಾಖಾವಾರು ನಿಯೋಜಿಸಿರುವ ಕಾರ್ಯಕ್ರಮಗಳನ್ನು ವ್ಯವಸ್ಥಿತವಾಗಿ ರೂಪಿಸುವಂತೆ ಸಂಬOಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಕವಿತಾ ರಾಜಾರಾಮ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳಾದ ನಂದಿನಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ವಿವಿಧ ಸಂಘಟನೆಗಳ ಮುಖಂಡರುಗಳು ಉಪಸ್ಥಿತರಿದ್ದರು.