ಮನೆ ರಾಜ್ಯ ನಮ್ಮ ಸರ್ಕಾರಕ್ಕೆ ರಾಜಕೀಯ ಇಚ್ಛಾಶಕ್ತಿ ಇದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ನಮ್ಮ ಸರ್ಕಾರಕ್ಕೆ ರಾಜಕೀಯ ಇಚ್ಛಾಶಕ್ತಿ ಇದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

0

ಮೈಸೂರು: ಗ್ಯಾರಂಟಿಗಳನ್ನು ಜಾರಿ ಮಾಡುವುದು  ಸವಾಲು ಎನಿಸಲಿಲ್ಲ. ಆದರೆ ನಮ್ಮ ಸರ್ಕಾರಕ್ಕೆ ಅವುಗಳನ್ನು ಜಾರಿ ಮಾಡಬೇಕೆಂಬ  ಎಂಬ ರಾಜಕೀಯ ಇಚ್ಛಾಶಕ್ತಿ ಇತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಚಾಮುಂಡೇಶ್ವರಿ ದೇವಾಲಯಕ್ಕೆ ಭೇಟಿ ನೀಡಿದ ನಂತರ  ಸುದ್ದಿಗಾರರೊಂದಿಗೆ ಮಾತನಾಡಿದರು. 

ವಿಪಕ್ಷಗಳು ಹಾಗೂ ದೇಶದ ಪ್ರಧಾನಿಗಳೇ ಗ್ಯಾರಂಟಿ ಅನುಷ್ಠಾನ ವಾದರೆ ರಾಜ್ಯ ದಿವಾಳಿಯಾಗುತ್ತದೆ ಎಂದು ಹೇಳಿದ್ದರು. ಆದರೆ ನಾವು ಯಶಸ್ವಿಯಾಗಿ 5 ಗ್ಯಾರಂಟಿಗಳನ್ನು ಅನುಷ್ಠಾನಕ್ಕೆ ತರುತ್ತಿದ್ದೇವೆ. ಇದಲ್ಲದೆ ಪ್ರಣಾಳಿಕೆಯಲ್ಲಿ ಹೇಳಿರುವ 76 ಕಾರ್ಯಕ್ರಮಗಳನ್ನು ಜಾರಿ ಮಾಡುತ್ತೇವೆ ಎಂದರು.

ಮೇ 9 ರಂದು ಚುನಾವಣೆಯ ಹಿಂದಿನ ದಿನ ನಾನು ಮತ್ತು ಡಿ.ಕೆ.ಶಿವಕುಮಾರ್ ಅವರು ಗ್ಯಾರಂಟಿ ಕಾರ್ಡುಗಳನ್ನು ಚಾಮುಂಡೇಶ್ವರಿ ತಾಯಿ ಸನ್ನಿಧಿಯಲ್ಲಿ ಪೂಜೆ ಮಾಡಿ ವಿತರಿಸಿದ್ದೆವು. ನಾಳೆ ಐದು ಗ್ಯಾರಂಟಿ ಗಳಲ್ಲಿ ಪ್ರಮುಖ ವಾದ ಗೃಹಲಕ್ಷ್ಮೀ ಯೋಜನೆಗೆ ಚಾಲನೆ ದೊರೆಯುತ್ತಿದೆ.  ರಾಜ್ಯಸಭಾ ವಿರೋಧಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಹಾಗೂ ಸಂಸದ ರಾಹುಲ್ ಗಾಂಧಿ ಅವರ ಸಮ್ಮುಖದಲ್ಲಿ ಚಾಲನೆ ನೀಡಲಾಗುತ್ತಿದೆ. ನಾಳೆ ನಡೆಯುತ್ತಿರುವುದು ಸರ್ಕಾರಿ ಕಾರ್ಯಕ್ರಮ. ಆ ಮೂಲಕ 1.10 ಲಕ್ಷ ಕುಟುಂಬಗಳ ಯಜಮಾನಿಯರಿಗೆ 2000 ರೂ. ಪ್ರತಿ ತಿಂಗಳು ನೀಡಲಾಗುತ್ತದೆ.

ಕೇಂದ್ರ ಸರ್ಕಾರ ಆಹಾರ ಪದಾರ್ಥಗಳ ಬೆಲೆಯೇರಿಕೆ  ಮತ್ತು ಹಣದುಬ್ಬರ ತಡೆಯಲು ವಿಫಲವಾಗಿದೆ. ಸಾಮಾನ್ಯ ಜನರು, ಮಧ್ಯಮ ವರ್ಗದವರು ಮತ್ತು ಬಡ ಕುಟುಂಬದವರಿಗೆ ಆರ್ಥಿಕವಾಗಿ ಸಹಾಯ ಮಾಡಲು ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಲಾಗಿದೆ. ಒಂದು ಕುಟುಂಬ ಕ್ಕೆ ತಿಂಗಳಿಗೆ ಕನಿಷ್ಠ 4-6 ಸಾವಿರ ರೂಗಳು ದೊರೆಯಲಿವೆ. ಬಡಬರ ಬಳಿ ಹಣವಿದ್ದರೆ ಮಾತ್ರ ಆರ್ಥಿಕ ಚಟುವಟಿಕೆಗಳು ಹೆಚ್ಚಾಗುತ್ತವೆ ಎಂದರು.

ಗೃಹಜ್ಯೋತಿ ಅನ್ನಭಾಗ್ಯ, ಶಕ್ತಿ ಯೋಜನೆ ಈಗಾಗಲೇ ಚಾಲನೆಗೆ ಬಂದಿದೆ. ನಾಳೆ ಗೃಹಜ್ಯೋತಿ ಪ್ರಾರಂಭವಾಗಲಿದೆ ಎಂದರು.

ಗೃಹಲಕ್ಷ್ಮಿಯ ರೀತಿ ದೇಶದಲ್ಲಿಯೇ ಒಂದೇ ಯೋಜನೆಗೆ ಇಷ್ಟೊಂದು ಹಣ ಖರ್ಚು ಮಾಡುತ್ತಿರುವ ಬೇರೆ ಯಾವ ಯೋಜನೆಯೂ ಇಲ್ಲ ಎಂದರು.

 1.10 ಕೋಟಿ ಕಾರ್ಡುಗಳನ್ನು ಹಂಚಿ, ಡಿಬಿಟಿ ಮೂಲಕ ಅವರ ಖಾತೆಗೆ ಹಣವನ್ನು ವರ್ಗಾಯಿಸಲಾಗುವುದು ಎಂದರು.

ಹಿಂದಿನ ಲೇಖನಚಿಕ್ಕೋಡಿ: ಮದುವೆ ಬಾಡೂಟ ಸೇವಿಸಿ ನೂರಕ್ಕೂ ಹೆಚ್ಚು ಮಂದಿ ಅಸ್ವಸ್ಥ
ಮುಂದಿನ ಲೇಖನಚಾಮುಂಡಿ ದೇವಿ, ಜನರ ಆಶೀರ್ವಾದದಿಂದ ಗ್ಯಾರಂಟಿ ಯೋಜನೆ ಜಾರಿ: ಡಿಸಿಎಂ ಡಿ.ಕೆ.ಶಿವಕುಮಾರ್