ಬೆಂಗಳೂರು : ಇದೇ ಭಾನುವಾರ (ಏ.5) 2 ಗಂಟೆಗಳ ಕಾಲ ʼನಮ್ಮ ಮೆಟ್ರೋ’ ಸೇವೆ ತಾತ್ಕಾಲಿಕವಾಗಿ ಸ್ಥಗಿತವಾಗಲಿದೆ ಎಂದು ಬಿಎಂಆರ್‌ಸಿಲ್ ತಿಳಿಸಿದೆ. ನೇರಳೆ ಮಾರ್ಗದ ವಿಜಯನಗರ ಮತ್ತು ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದಲ್ಲಿ ಅಗತ್ಯ ನಿರ್ವಹಣಾ ಕಾಮಗಾರಿ ನಡೆಯಲಿದೆ. ಹೀಗಾಗಿ ಭಾನುವಾರ (ಏ.5ರಂದು) ಬೆಳಗ್ಗೆ 7 ಗಂಟೆಯಿಂದ 9 ಗಂಟೆವರೆಗೆ ಮೆಜೆಸ್ಟಿಕ್‌ನಿಂದ ಮೈಸೂರು ರಸ್ತೆವರೆಗೆ ಮೆಟ್ರೋ ಸೇವೆ ತಾತ್ಕಾಲಿಕವಾಗಿ ಸ್ಥಗಿತವಾಗಲಿದೆ.
ಇದರ ಹೊರತಾಗಿ ಚಲ್ಲಘಟ್ಟದಿಂದ ಮೈಸೂರು ರಸ್ತೆ ಹಾಗೂ ಮೆಜೆಸ್ಟಿಕ್‌ನಿಂದ ವೈಟ್‌ಫೀಲ್ಡ್ವರೆಗೆ, ಹಸಿರು ಮಾರ್ಗದಲ್ಲಿ ಮಾದಾವರದಿಂದ ರೇಷ್ಮೆ ಸಂಸ್ಥೆವರೆಗೆ ಮತ್ತು ಹಳದಿ ಮಾರ್ಗದಲ್ಲಿ ಆರ್‌ವಿ ರಸ್ತೆಯಿಂದ ಬೊಮ್ಮಸಂದ್ರದವರೆಗೆ ವೇಳಾಪಟ್ಟಿಯಂತೆ ನಮ್ಮ ಮೆಟ್ರೋ ಸೇವೆ ಬೆಳಗ್ಗೆ 7 ಗಂಟೆಯಿಂದ ಆರಂಭವಾಗಲಿದೆ. ಭಾನುವಾರ 9 ಗಂಟೆ ಬಳಿಕ ಮೆಜೆಸ್ಟಿಕ್‌ದಿಂದ ಮೈಸೂರು ರಸ್ತೆವರೆಗೆ ಮೆಟ್ರೋ ಸಂಚಾರ ಆರಂಭವಾಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.















