ಮನೆ ರಾಜ್ಯ ವಿವೇಕಾನಂದರ ಯೋಜನೆಗಳನ್ನು ಗ್ರಾಮೀಣ ಪ್ರದೇಶದಲ್ಲಿ ಜಾರಿಗೊಳಿಸುವುದು ನಮ್ಮ ಉದ್ದೇಶ: ಸಚಿವ ಕೆ.ಗೋಪಾಲಯ್ಯ

ವಿವೇಕಾನಂದರ ಯೋಜನೆಗಳನ್ನು ಗ್ರಾಮೀಣ ಪ್ರದೇಶದಲ್ಲಿ ಜಾರಿಗೊಳಿಸುವುದು ನಮ್ಮ ಉದ್ದೇಶ: ಸಚಿವ ಕೆ.ಗೋಪಾಲಯ್ಯ

0

ರಾಜ್ಯದಲ್ಲಿ ಸುಮಾರು 16 ಸಾವಿರ ಯುವಕರ ಸಂಘಗಳಿಗೆ ಪ್ರತಿ ಪಂಚಾಯತಿಯಿಂದ ಎರಡು ಯುವಕ ಸಂಘಗಳಿಗೆ ರಾಜ್ಯ ಸರ್ಕಾರದಿಂದ 1ಲಕ್ಷ ಹಾಗೂ ರಾಜ್ಯ ಸರ್ಕಾರದ ಬ್ಯಾಂಕ್ ಗಳಿಂದ 5ಲಕ್ಷ ಅನುದಾನವನ್ನು ನೀಡಿ ವಿವೇಕಾನಂದರ ಯೋಜನೆಗಳನ್ನು ಗ್ರಾಮೀಣ ಪ್ರದೇಶದಲ್ಲಿ ಜಾರಿಗೊಳಿಸುವುದು ನಮ್ಮ ಉದ್ದೇಶವಾಗಿದೆ ಎಂದು ಅಬಕಾರಿ ಸಚಿವರು ಮಂಡ್ಯ ಮತ್ತು ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಗೋಪಾಲಯ್ಯ ತಿಳಿಸಿದರು.

ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದ ನಾಗಪುರದ 67ನೇ ವಾರ್ಡ್ ನ ಶಂಕರಮಠವೃತ್ತದ ಸ್ವಾಮಿ ವಿವೇಕಾನಂದ ಉದ್ಯಾನವನದಲ್ಲಿ ಸ್ವಾಮಿ ವಿವೇಕಾನಂದರ ಜಯಂತಿಯ ಪ್ರಯುಕ್ತ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದರು.

ಸ್ವಾಮಿ ವಿವೇಕಾನಂದರ ಯೋಜನೆಗಳನ್ನು ಗ್ರಾಮೀಣ ಪ್ರದೇಶದಲ್ಲಿ ಅನುಷ್ಠಾನಕ್ಕೆ ತರಬೇಕು ಎಂಬ ದೃಷ್ಟಿಯಿಂದ ಗ್ರಾಮೀಣ ಪ್ರದೇಶದ 18 ವರ್ಷ ದಿಂದ 30 ವರ್ಷ ಇರುವಂತಹ ಯುವಕರ ತಂಡಗಳಿಗೆ ಉದ್ಯೋಗಾವಕಾಶಗಳನ್ನು ಕಲ್ಪಿಸಿ ಆ ಗ್ರಾಮಗಳನ್ನು ಮಾದರಿ ಗ್ರಾಮವಾಗಿ ಮಾಡಲಾಗುವುದು ಎಂದರು.

ಸ್ವಾಮಿ ವಿವೇಕಾನಂದರ ಕನಸುಗಳನ್ನು ನನಸು ಮಾಡಲು ಇಂದು ಸನ್ಮಾನ್ಯ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿಯವರು ಇಂದು ಹುಬ್ಬಳ್ಳಿಗೆ ಆಗಮಿಸುತ್ತಿದ್ದಾರೆ ಅವರಿಗೆ ತಮ್ಮೆಲ್ಲರ ಪರವಾಗಿ ಕೃತಜ್ಞತೆಯನ್ನು ಸಲ್ಲಿಸುತ್ತೇನೆ ಎಂದು ಹೇಳಿದರು.

ನಮ್ಮ ಮಕ್ಕಳಿಗೆ ಸ್ವಾಮಿ ವಿವೇಕಾನಂದರ ಚಿಂತನೆಗಳು ಹಾಗೂ ವಿಚಾರಧಾರೆಗಳನ್ನು ತಿಳಿಸುವಂತಹ ಕೆಲಸವನ್ನು ನಾವೆಲ್ಲರೂ ಮಾಡೋಣ. ಪ್ರತಿ ದಿನ ವಿವೇಕಾನಂದರ ಕುರಿತು ಪುಸ್ತಕಗಳನ್ನು ಓದಲು ಮಕ್ಕಳಿಗೆ ತಿಳಿಸಬೇಕು. ಅವರು ದೇಶಕ್ಕಾಗಿ ಕೊಟ್ಟಿರುವಂತಹ ಕೊಡುಗೆಗಳನ್ನು ತಿಳಿದುಕೊಳ್ಳುವುದು ಬಹಳ ಮುಖ್ಯವಾಗಿದೆ ಎಂದು ಹೇಳಿದರು.

ಮಹಾಲಕ್ಷ್ಮಿ ಲೇಔಟ್ ನಲ್ಲಿ ನೂತನವಾಗಿ ನಿರ್ಮಿಸಿರುವ ನಮ್ಮ ಕ್ಲಿನಿಕ್ ತಿಂಗಳ ಕೊನೆಯಲ್ಲಿ ಮಾನ್ಯ ಮುಖ್ಯಮಂತ್ರಿಗಳು ಉದ್ಘಾಟಿಸಲಿದ್ದಾರೆ. ನಮ್ಮ ಕ್ಲಿನಿಕ್ ನಲ್ಲಿ ಉಚಿತವಾಗಿ ರಕ್ತ ಪರೀಕ್ಷೆ ಹಾಗೂ ಇನ್ನಿತರ ಪರೀಕ್ಷೆಗಳನ್ನು ಮಾಡಿ ಅರ್ಧ ತಾಸಿನಲ್ಲಿ ವರದಿಯನ್ನು ವೈದ್ಯರು ನೀಡುತ್ತಾರೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಓಬಿಸಿ ರಾಜ್ಯಾಧ್ಯಕ್ಷ ನೆಲ ನರೇಂದ್ರಬಾಬು, ಬಿಜೆಪಿ ಉತ್ತರ ಘಟಕದ ಉಪಾಧ್ಯಕ್ಷ ಜಯರಾಮ್, ವೆಂಕಟೇಶ್ ಗಂಗನಮಯ್ಯ ಜಯಸಿಂಹ , ವೆಂಕಟೇಶ್ ಮೂರ್ತಿ ನಿಸರ್ಗ ಜಗದೀಶ್ ಹಾಗೂ ಸ್ಥಳೀಯ ಮುಖಂಡರುಗಳು ಉಪಸ್ಥಿತರಿದ್ದರು.