ಮನೆ ರಾಜ್ಯ 2028ಕ್ಕೆ ನಮ್ಮದೇ ಸರ್ಕಾರ : ಹೊಸ ಪಕ್ಷದ ಸುಳಿವು ನೀಡಿದ ಯತ್ನಾಳ್

2028ಕ್ಕೆ ನಮ್ಮದೇ ಸರ್ಕಾರ : ಹೊಸ ಪಕ್ಷದ ಸುಳಿವು ನೀಡಿದ ಯತ್ನಾಳ್

0

ಹಾವೇರಿ : ಬಿಜೆಪಿ ಪಕ್ಷದಿಂದ 6 ವರ್ಷಗಳ ಕಾಲ ಉಚ್ಚಾಟನೆಯಾದ ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಇದೀಗ 2028ಕ್ಕೆ ನಮ್ಮದೇ ಸರ್ಕಾರ ಅಧಿಕಾರಕ್ಕೆ ಬರಲಿದೆ ಎನ್ನುವ ಮೂಲಕ ಹೊಸ ಪಕ್ಷ ರಚಿಸುವ ಕುರಿತು ಸುಳಿವು ನೀಡಿದ್ದಾರೆ ಎನ್ನಲಾಗಿದೆ.

ನಗರದಲ್ಲಿ ಕ್ರಾಂತಿವೀರ ಯುವ ಬ್ರಿಗೇಡ್ ವತಿಯಿಂದ ಇಂದು ಹಮ್ಮಿಕೊಂಡಿದ್ದ ಸ್ವಾತಿ ಬ್ಯಾಡಗಿ ಹತ್ಯೆ ಪ್ರಕರಣದ ಅನ್ಯಾಯದ ವಿರುದ್ಧ ನ್ಯಾಯ ಜಾಥಾದಲ್ಲಿ ಪಾಲ್ಗೊಂಡಿದ್ದ ಅವರು, ಹೊಸ ಪಕ್ಷ ಆರಂಭದ ಸುಳಿವು ನೀಡಿದರು. ಜನರು ಹಣ ಪಡೆದು ಮತ ಹಾಕುವುದನ್ನು ನಿಲ್ಲಿಸಬೇಕು. ಹಿಂದೂಗಳ ಪರ ಹೋರಾಡುವ ವ್ಯಕ್ತಿಗೆ ಪಕ್ಷ-ಜಾತಿ ಭೇದ ಮರೆತು ಮತ ಹಾಕಬೇಕು.

ಈ ರೀತಿ ಜನರು ಮತ ಹಾಕಿದರೆ, 2028ರಲ್ಲಿ ನಮ್ಮದು ಹಾಗೂ ಕೆ.ಇ. ಕಾಂತೇಶ ಅವರ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬರುತ್ತದೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಗುಣಗಳನ್ನು ಹೊಂದಿರುವ ವ್ಯಕ್ತಿಯೇ ರಾಜ್ಯದ ಮುಂದಿನ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಇದೆ ಸಂದರ್ಭದಲ್ಲಿ ತಿಳಿಸಿದರು.

ಇನ್ನು ಜಮ್ಮು ಕಾಶ್ಮೀರದಲ್ಲಿ ನಿನ್ನೆ ಉಗ್ರರು ಪ್ರವಾಸಿಗರ ಮೇಲೆ ಭೀಕರ ಗುಂಡಿನ ದಾಳಿ ನಡೆಸಿದ್ದು, ದಾಳಿಯಲ್ಲಿ ಸುಮಾರು 30ಕ್ಕೂ ಅಧಿಕ ಜನರು ಸಾವನ್ನಪ್ಪಿದ್ದು, ಅದರಲ್ಲಿ ಕನ್ನಡಿಗರು ಇಬ್ಬರು ಬಲಿಯಾಗಿದ್ದಾರೆ. ಈ ಒಂದು ದಾಳಿಯ ಕುರಿತು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಜಮ್ಮು ಕಾಶ್ಮೀರದಲ್ಲಿ ಚುನಾವಣೆ ನಡೆಸುವ ಅವಶ್ಯಕತೆ ಇರಲಿಲ್ಲ ಎಂದು ಹೇಳಿಕೆ ನೀಡಿದ್ದಾರೆ.

ಹಾವೇರಿಯಲ್ಲಿ ಮಾತನಾಡಿದ ಅವರು, ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಆರ್ಟಿಕಲ್ 370 ತೆರವುಗೊಳಿಸಿದ ನಂತರ ಕಾಶ್ಮೀರದಲ್ಲಿ ಶಾಂತಿ ಸುವ್ಯವಸ್ಥೆ ನೆಲೆಸಿತ್ತು, ಈ ಪ್ರಾಂತ್ಯ ತನ್ನ ಕೈ ತಪ್ಪಿಹೋಗುತ್ತಿದೆ ಅಂತ ಪಾಕಿಸ್ತಾನಕ್ಕೆ ಹತಾಶೆ ಶುರುವಾಗಿತ್ತು, ಅದರ ಪರಿಣಾಮವೇ ನಿನ್ನೆ ಪಹೆಲ್ಗಾಮ್ ನಲ್ಲಿ ಉಗ್ರರ ದಾಳಿ ನಡೆದು 28 ಅಮಾಯಕ ಹಿಂದೂಗಳು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಬಿಜೆಪಿ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು.

ಕಳೆದ 10 ವರ್ಷಗಳ ಅವಧಿಯಲ್ಲಿ ಪ್ರಧಾನಿ ಮೋದಿಯವರು ಆ ಪ್ರದೇಶದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದಾರೆ, ಅದು ಕೇಂದ್ರಾಡಳಿತ ಪ್ರದೇಶವಾಗಿ ಉಳಿದಿದ್ದರೆ ಇನ್ನಷ್ಟು ಅಬಿವೃದ್ಧಿ ನಡೆಯುತ್ತಿತ್ತು, ಚುನಾವಣೆ ನಡೆಸುವ ಅವಶ್ಯಕತೆ ಇರಲಿಲ್ಲ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು.